ಡಿ.10ರ ಬಳಿಕ ರಾಜ್ಯ ಸಚಿವ ಸಂಪುಟದಲ್ಲಿ ಭಾರೀ ಬದಲಾವಣೆ: ಯತ್ನಾಳ್ ಹೊಸ ಬಾಂಬ್
ಡಿ.10ರ ಬಳಿಕ ಸಚಿವ ರಾಜ್ಯ ಸಂಪುಟದಲ್ಲಿ ಭಾರೀ ಬದಲಾವಣೆಯಾಗಲಿದೆ. ಆದರೆ, ಮುಖ್ಯಮಂತ್ರಿ ಬದಲಾಗುವುದಿಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಹೊಸ ಬಾಂಬ್ ಸಿಡಿಸಿದ್ದಾರೆ.
ಬೆಂಗಳೂರು: ಡಿ.10ರ ಬಳಿಕ ಸಚಿವ ರಾಜ್ಯ ಸಂಪುಟದಲ್ಲಿ ಭಾರೀ ಬದಲಾವಣೆಯಾಗಲಿದೆ. ಆದರೆ, ಮುಖ್ಯಮಂತ್ರಿ ಬದಲಾಗುವುದಿಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಹೊಸ ಬಾಂಬ್ ಸಿಡಿಸಿದ್ದಾರೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲ ಸಚಿವರು ಬೆಳಗಾದರೆ ಮುಖ್ಯಮಂತ್ರಿಗಳ ಜತೆ ಓಡಾಡಿಕೊಂಡು ಇರುತ್ತಾರೆ. ಸಚಿವರು ಜಿಲ್ಲೆಗಳಿಗೆ ಹೋಗಿ ಕೆಲಸ ಮಾಡಲಿಲ್ಲವೆಂದರೆ ಮುಂದೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಕೆಲ ಸಚಿವರು ಮುಖ್ಯಮಂತ್ರಿಗಳ ಜೊತೆಗೆ ಸುತ್ತಾಡುತ್ತಲೇ ಇದ್ದಾರೆ. ಶಾಸಕರಿಗೆ ಸಮಯ ನೀಡುತ್ತಿಲ್ಲ. ಅಂತಹವರನ್ನು ಡಿಸೆಂಬರ್ 10ರ ಬಳಿಕ ಸಂಪುಟದಿಂದಲೇ ಕೈ ಬಿಡುವ ಚಿಂತನೆಗಳು ನಡೆದಿವೆ. ಎಲ್ಲಾ ಸಚಿವರ ಕೈಬಿಡುವ ಕುರಿತು ಚಿಂತನೆಗಳು ನಡೆದಿಲ್ಲ. ಕೆಲಸ ಮಾಡದ ಸಚಿವರ ಕೈಬಿಡಲು ಚಿಂತನೆಗಳು ನಡೆದಿವೆ. ಮುಖ್ಯಮಂತ್ರಿಗಳು ಬದಲಾವಣೆಯಾಗುವುದಿಲ್ಲ ಎಂದು ತಿಳಿಸಿದ್ದಾರೆ.
ಯತ್ನಾಳ್ ಅವರ ಈ ಹೇಳಿಕೆಗೆ ದೆಹಲಿಯಲ್ಲಿ ಪ್ರತಿಕ್ರಿಯೆ ನೀಡಿರುವ ಸಿಎಂ ಬೊಮ್ಮಾಯಿಯವರು, ಈ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದಿದ್ದಾರೆ.
ಯತ್ನಾಳ್ ಅವರಿಗೆ ಗೌಪ್ಯ ಮಾಹಿತಿಗಳು ಬಂದಿರಬಹುದು. ರಾಜ್ಯಕ್ಕೆ ವಾಪಸ್ಸಾದ ಬಳಿಕ ನಾನು ಅವರೊಂದಿಗೆ ಮಾತುಕತೆ ನಡೆಸುತ್ತೇನೆಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

