ರಾಜಕೀಯ

ಕೊರೋನಾದಿಂದ ಮೃತಪಟ್ಟ ಕುಟುಂಬ ಸದಸ್ಯರಿಗೆ 4 ಲಕ್ಷ ರೂ. ಪರಿಹಾರಕ್ಕೆ ಒತ್ತಾಯಿಸಿ ಕಾಂಗ್ರೆಸ್ ಆನ್ ಲೈನ್ ಅಭಿಯಾನ

ಕೋವಿಡ್-19 ಸಾಂಕ್ರಾಮಿಕದಿಂದ ಮೃತಪಟ್ಟ ಕುಟುಂಬ ಸದಸ್ಯರಿಗೆ 4 ಲಕ್ಷ ರೂ. ಪರಿಹಾರಕ್ಕೆ ಒತ್ತಾಯಿಸಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಶನಿವಾರ ಆನ್ ಲೈನ್ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಜನರು ನೋವು, ನಷ್ಟದಲ್ಲಿ ನರಳುತ್ತಿರುವಾಗ ಸರ್ಕಾರ ನಿದ್ರೆ ಮಾಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಕೊರೋನಾದಿಂದ ಮೃತಪಟ್ಟ ಕುಟುಂಬ ಸದಸ್ಯರಿಗೆ 4 ಲಕ್ಷ ರೂ. ಪರಿಹಾರಕ್ಕೆ ಒತ್ತಾಯಿಸಿ ಕಾಂಗ್ರೆಸ್ ಆನ್ ಲೈನ್ ಅಭಿಯಾನ
ರಾಹುಲ್ ಗಾಂಧಿ
Published On :

ನವದೆಹಲಿ: ಕೋವಿಡ್-19 ಸಾಂಕ್ರಾಮಿಕದಿಂದ ಮೃತಪಟ್ಟ ಕುಟುಂಬ ಸದಸ್ಯರಿಗೆ 4 ಲಕ್ಷ ರೂ. ಪರಿಹಾರಕ್ಕೆ ಒತ್ತಾಯಿಸಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಶನಿವಾರ ಆನ್ ಲೈನ್ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಜನರು ನೋವು, ನಷ್ಟದಲ್ಲಿ ನರಳುತ್ತಿರುವಾಗ ಸರ್ಕಾರ ನಿದ್ರೆ ಮಾಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

'ಸ್ಪೀಕ್ ಆಫ್ ಫಾರ್ ಕೋವಿಡ್ ನ್ಯಾಯ ಹ್ಯಾಷ್ ಟ್ಯಾಗ್ ನಲ್ಲಿ' ಅಭಿಯಾನಕ್ಕೆ ಚಾಲನೆ ನೀಡಿರುವ ರಾಹುಲ್ ಗಾಂಧಿ, ಜನರು ನೋವು, ನಷ್ಟದಲ್ಲಿರುವಾಗ, ಭಾರತ ಸರ್ಕಾರ ನಿದ್ರೆ ಮಾಡುತ್ತಿದೆ. ಅವರನ್ನು ಎಬ್ಬಿಸೋಣ ಎಂದು ಹೇಳಿದ್ದಾರೆ.

ದೇಶದಲ್ಲಿ ಕೋವಿಡ್- ನಿಂದ ನಿಜವಾಗಿ ಎಷ್ಟು ಜನ ಸಾವನ್ನಪ್ಪಿದ್ದಾರೆ ಎಂಬುದರ ಬಗ್ಗೆ ಕೇಂದ್ರ ಸರ್ಕಾರ ಮಾಹಿತಿಯನ್ನು ಬಹಿರಂಗಪಡಿಸಬೇಕು ಮತ್ತು ಸೋಂಕಿನಿಂದ ಮೃತಪಟ್ಟ ಕುಟುಂಬ ಸದಸ್ಯರಿಗೆ 4 ಲಕ್ಷ ರೂ. ಪರಿಹಾರ ನೀಡಬೇಕೆಂಬುದು ಈ ಅಭಿಯಾನದ ಗುರಿಯಾಗಿದೆ ಎಂದು ಕಾಂಗ್ರೆಸ್ ಪಕ್ಷ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹೇಳಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.