ಕೋವಿಡ್ ಸಂತ್ರಸ್ತರಿಗೆ ಪರಿಹಾರ ನೀಡುವಲ್ಲಿ ವಿಳಂಬ; ಸರ್ಕಾರದ ವಿರುದ್ಧ ಡಿಕೆಶಿ ಕಿಡಿ
ಕೋವಿಡ್-19 ಸಂತ್ರಸ್ತರ ಕುಟುಂಬಗಳಿಗೆ ಪರಿಹಾರ ನೀಡುವ ವಿಚಾರದಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ಸರ್ಕಾರದ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಶುಕ್ರವಾರ ವಾಗ್ದಾಳಿ ನಡೆಸಿದ್ದಾರೆ.

ಚಿಕ್ಕಮಗಳೂರು: ಕೋವಿಡ್-19 ಸಂತ್ರಸ್ತರ ಕುಟುಂಬಗಳಿಗೆ ಪರಿಹಾರ ನೀಡುವ ವಿಚಾರದಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ಸರ್ಕಾರದ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಶುಕ್ರವಾರ ವಾಗ್ದಾಳಿ ನಡೆಸಿದ್ದಾರೆ.
ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೋನಾ 2ನೇ ಅಲೆ ವೇಳೆ ದೇಶದಲ್ಲಿ 4 ಲಕ್ಷಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಕೋವಿಡ್ ಸಂತ್ರಸ್ತರಿಗೆ ಸರ್ಕಾರ ಇನ್ನೂ ಪರಿಹಾರ ಬಿಡುಗಡೆ ಮಾಡಬೇಕಿದೆ. ಮರಣ ಪ್ರಮಾಣ ಪತ್ರ ನೀಡಲು ಅಧಿಕಾರಿಗಳು ಲಂಚ ಕೇಳುತ್ತಿದ್ದಾರೆಂದು ಆರೋಪಿಸಿದ್ದಾರೆ.
ಬಳಿಕ ರಾಜ್ಯದ ಓಮಿಕ್ರಾನ್ ಸ್ಥಿತಿ ಕುರಿತು ಮಾತನಾಡಿ, ಓಮಿಕ್ರಾನ್ ತಡೆಯಲು ರಾಜ್ಯ ಸರ್ಕಾರ ಅಂತರಾಷ್ಟ್ರೀಯ ವಿಮಾನಗಳ ಮೇಲೆ ರದ್ದು ಹೇರುವುದು ಮುಖ್ಯವಾಗಿದೆ ಎಂದು ಸಲಹೆ ನೀಡಿದ್ದಾರೆ.
ಇದೇ ವೇಳೆ ಕಾಮಗಾರಿ ಮಂಜೂರಾತಿಗೆ ಅಧಿಕಾರಿಗಳು ಹಾಗೂ ಚುನಾಯಿತ ಪ್ರತಿನಿಧಿಗಳು ಶೇ.40ರಷ್ಟು ಕಮಿಷನ್‌ಗೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘವು ಪ್ರಧಾನಿಗೆ ಪತ್ರ ಬರೆದಿರುವ ಕುರಿತು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಅವರು, ರಾಜ್ಯ ಆಡಳಿತ ಸಂಪೂರ್ಣ ಕುಸಿದಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


