ರಾಜಕೀಯ

ಪೊಲೀಸ್ ಅಧಿಕಾರಿಗಳ ಕುರಿತು ಟೀಕೆ: ಗೃಹ ಸಚಿವರ ಹೇಳಿಕೆ ಸಮರ್ಥಿಸಿಕೊಂಡ ಸಿಎಂ ವಿರುದ್ಧ ಸಿದ್ದರಾಮಯ್ಯ ಕಿಡಿ

ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಪೊಲೀಸ್ ಅಧಿಕಾರಿಗಳ ಕುರಿತು ಟೀಕೆ ಮಾಡಿದ್ದನ್ನು ಗುರಿಯಾಗಿಸಿಕೊಂಡು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸರ್ಕಾರದ ವಿರುದ್ಧ ಶನಿವಾರ ವಾಗ್ದಾಳಿ ನಡೆಸಿದ್ದಾರೆ.

ಪೊಲೀಸ್ ಅಧಿಕಾರಿಗಳ ಕುರಿತು ಟೀಕೆ: ಗೃಹ ಸಚಿವರ ಹೇಳಿಕೆ ಸಮರ್ಥಿಸಿಕೊಂಡ ಸಿಎಂ ವಿರುದ್ಧ ಸಿದ್ದರಾಮಯ್ಯ ಕಿಡಿ
ಸಿದ್ದರಾಮಯ್ಯ
Published On :

ಬೆಂಗಳೂರು/ಶಿವಮೊಗ್ಗ: ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಪೊಲೀಸ್ ಅಧಿಕಾರಿಗಳ ಕುರಿತು ಟೀಕೆ ಮಾಡಿದ್ದನ್ನು ಗುರಿಯಾಗಿಸಿಕೊಂಡು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸರ್ಕಾರದ ವಿರುದ್ಧ ಶನಿವಾರ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹ ಸಚಿವರಾಗಿ ಆರಗ ಜ್ಞಾನೇಂದ್ರ ಅವರು ಅಧಿಕಾರ ಸ್ವೀಕರಿದ ದಿನದಿಂದಲೂ ಪೊಲೀಸ್ ಇಲಾಖೆಯಲ್ಲಿ ಬದಲಾವಣೆ ತರುವಲ್ಲಿ ವಿಫಲರಾಗಿದ್ದಾರೆಂದು ಕಿಡಿಕಾರಿದ್ದಾರೆ.

ಅವರಿಗೆ ನಿರ್ವಹಣೆ ಮಾಡಲು ಆಗದೇ ಇದ್ದರೆ ರಾಜೀನಾಮೆ ನೀಡಬೇಕು. ಅವರ ಇಲಾಖೆಯಲ್ಲಿ ಭ್ರಷ್ಟಾಚಾರ  ಕೊಳೆತು ನಾರುತ್ತಿದೆ ಎನ್ನುವುದು  ಮನವರಿಕೆ  ಆಗಿದೆ.  ಈ ಹಿನ್ನೆಲೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಇಂತಹ ಹೇಳಿಕೆ ನೀಡಿದ್ದಾರೆ ಎಂದು ಹೇಳಿದರು. ಇದೇ ವೇಳೆ ಗೃಹ ಸಚಿವ ಹೇಳಿಕೆ ಸಮರ್ಥಿಸಿಕೊಂಡ ಸಿಎಂ ಬೊಮ್ಮಾಯಿ ವಿರುದ್ಧವೂ ವಾಗ್ದಾಳಿ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.