ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳು ಜೆಡಿಎಸ್ ಗೆ ಸಮಾನ ವೈರಿಗಳು: ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ
ಡಿಸೆಂಬರ್ 10ರಿಂದ ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಸ್ಪರ್ಧಿಸದೇ ಇರುವ ಕ್ಷೇತ್ರಗಳಲ್ಲಿ ಪಕ್ಷ ಬಿಜೆಪಿಗೆ ಸಹಕಾರ ನೀಡುವಂತೆ ಬಿಜೆಪಿ ನಾಯಕ ಯಡಿಯೂರಪ್ಪ ಮುಕ್ತವಾಗಿ ಕೋರಿಕೊಂಡಿದ್ದರು.

ಮಂಡ್ಯ: ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳು ತಮ್ಮ ಜೆಡಿಎಸ್ ಪಕ್ಷಕ್ಕೆ ಸಮಾನ ವೈರಿಗಳು ಎಂದು ಹೇಳಿಕೆ ನೀಡಿದ್ದಾರೆ.
ಮುಂಬರಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪನವರು ಜೆಡಿಎಸ್ ಪಕ್ಷದ ಸಹಕಾರ ಕೋರಿದ್ದಾರೆಯೇ ವಿನಾ ಮೈತ್ರಿಯನ್ನಲ್ಲ ಎಂದು ಕುಮಾರಸ್ವಾಮಿ ಅವರು ಇದೇ ವೇಳೆ ಸ್ಪಷ್ಟಪಡಿಸಿದ್ದಾರೆ.
ತಾವು ಎಲ್ಲಿಯೂ ಜೆಡಿಎಸ್ ಪಕ್ಷ ಬೇರೊಂದು ಪಕ್ಷದೊಡನೆ ಮೈತ್ರಿ ಮಾಡಿಕೊಳ್ಳುತ್ತಿದೆ ಎನ್ನುವುದನ್ನು ಹೇಳಿಲ್ಲ. ಚುನಾವಣೆಯಲ್ಲಿ ಜೆಡಿಎಸ್ ಸ್ಪರ್ಧಿಸದ ಕ್ಷೇತ್ರಗಳಲ್ಲಿ ಪಕ್ಷ ಯಾವ ಕಾರ್ಯತಂತ್ರ ರೂಪಿಸಬೇಕು ಎನ್ನುವುದನ್ನು ಕುಮಾರಸ್ವಾಮಿ ನಿರ್ಧರಿಸುವುದಾಗಿ ದೇವೇಗೌಡರು ತಿಳಿಸಿದ್ದರು.
ಡಿಸೆಂಬರ್ 10ರಿಂದ ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಸ್ಪರ್ಧಿಸದೇ ಇರುವ ಕ್ಷೇತ್ರಗಳಲ್ಲಿ ಪಕ್ಷ ಬಿಜೆಪಿಗೆ ಸಹಕಾರ ನೀಡುವಂತೆ ಬಿಜೆಪಿ ನಾಯಕ ಯಡಿಯೂರಪ್ಪ ಮುಕ್ತವಾಗಿ ಕೋರಿಕೊಂಡಿದ್ದರು.
ಇದನ್ನೂ ಓದಿ: ಪರಿಷತ್ ಚುನಾವಣೆ: ಬಿಜೆಪಿ-ಜೆಡಿಎಸ್ ಮೈತ್ರಿ ಗ್ಯಾರಂಟಿ!: ಪ್ರಧಾನಿ ಮೋದಿ ಜೊತೆ ಸಭೆ ಬಳಿಕ ದೇವೇಗೌಡ ಹೇಳಿದ್ದೇನು?
ಈ ಬಗ್ಗೆ ಕೇಳಲಾಗಿ ಯಡಿಯೂರಪ್ಪನವರು ಬಿಜೆಪಿ ಪಕ್ಷ ಯಾವುದೇ ಪಕ್ಷದೊಡನೆ ಮೈತ್ರಿ ಮಾಡಿಕೊಳ್ಳುತ್ತಿಲ್ಲ. ಸ್ಪರ್ಧಿಸುತ್ತಿರುವ ಕ್ಷೇತ್ರಗಳಲ್ಲಿ ಪಕ್ಷ ಹಗಲು ರಾತ್ರಿ ವಿಜಯಕ್ಕೆ ಶ್ರಮಿಸುವುದಾಗಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


