ರಾಜಕೀಯ

ದಾಖಲೆ ಇಲ್ಲದೆ ಮಾತು, ನಂತರ ಮೌನಕ್ಕೆ ಶರಣು; ಸಿದ್ದು ಹಾದಿಯಲ್ಲಿ ಡಿಕೆಶಿ: ಬಿಜೆಪಿ ಟೀಕೆ

ದಾಖಲೆ ಇಲ್ಲದೆ ಮಾತನಾಡುವುದು, ನಂತರ ಮೌನಕ್ಕೆ ಶರಣಾಗುವುದರಲ್ಲಿ ಸಿದ್ದರಾಮಯ್ಯ ನಿಸ್ಸೀಮರು. ಇದೀಗ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕೂಡಾ ಅದೇ ಹಾದಿ ತುಳಿಯುತ್ತಿದ್ದಾರೆ ಎಂದು ಬಿಜೆಪಿ ಹೇಳಿದೆ.

ದಾಖಲೆ ಇಲ್ಲದೆ ಮಾತು, ನಂತರ ಮೌನಕ್ಕೆ ಶರಣು; ಸಿದ್ದು ಹಾದಿಯಲ್ಲಿ ಡಿಕೆಶಿ: ಬಿಜೆಪಿ ಟೀಕೆ
ಸಿದ್ದರಾಮಯ್ಯ, ಡಿಕೆ ಶಿವಕುಮಾರ್
Published On :

ಬೆಂಗಳೂರು: ದಾಖಲೆ ಇಲ್ಲದೆ ಮಾತನಾಡುವುದು, ನಂತರ ಮೌನಕ್ಕೆ ಶರಣಾಗುವುದರಲ್ಲಿ ಸಿದ್ದರಾಮಯ್ಯ ನಿಸ್ಸೀಮರು. ಇದೀಗ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕೂಡಾ ಅದೇ ಹಾದಿ ತುಳಿಯುತ್ತಿದ್ದಾರೆ ಎಂದು ಬಿಜೆಪಿ ಹೇಳಿದೆ.
 
ಬಿಜೆಪಿ ಕರ್ನಾಟಕ ಸಾಮಾಜಿಕ ಜಾಲತಾಣದಲ್ಲಿ  ಸರಣಿ ಟ್ವೀಟ್ ಮಾಡಿದ್ದು,  ಹಿರಿಯಕ್ಕನ ಚಾಳಿ ಮನೆ ಮಂದಿಗೆ ಎಂಬ ಮಾತೊಂದಿಗೆ. ಡಿಕೆ ಶಿವಕುಮಾರ್ ಕೂಡಾ ಅದೇ ಹಾದಿಯಲ್ಲಿ ಹೆಜ್ಜೆ ಇಡುವಂತಿದೆ ಎಂದಿದೆ.  

ಬಿಜೆಪಿ ಸೇರದೆ ಇರುವ ಕಾರಣಕ್ಕೆ ನನ್ನನ್ನು ತಿಹಾರ್ ಜೈಲಿಗೆ ಕಳುಹಿಸಿದರೆ. ಇದಕ್ಕಾಗಿ ತನ್ನ ಬಳಿ ದಾಖಲೆ ಇದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ದಾಖಲೆ ಇದ್ದರೆ ಬಿಡುಗಡೆಗೊಳಿಸಿ, ಅದನ್ನು ಬಿಟ್ಟು ದಿನ ಏಕೆ ಕಾಯುತ್ತಾ ಕುಳಿತಿರಿ? ಬುರುಡೆ ರಾಮಯ್ಯ ರೀತಿ ನೀವೂ ಗಾಳಿಯಲ್ಲಿ ಗುಂಡು ಹಾರಿಸುವ ಪ್ರಯತ್ನ ನಡೆಸುತ್ತಿದ್ದೀರಾ? ಎಂದು ಪ್ರಶ್ನಿಸಿದೆ.

ತೆರಿಗೆ ವಂಚಿಸಿ ಅಕ್ರಮ ಆಸ್ತಿ ಸಂಗ್ರಹಿಸಿದ್ದೀರಿ ಎಂಬ ಒಂದೇ ಕಾರಣಕ್ಕೆ ಕೇಂದ್ರ ತೆರಿಗೆ ಸಂಸ್ಥೆಗಳು ನಿಮ್ಮನ್ನು ತಿಹಾರ್ ಜೈಲಿಗೆ ಕಳುಹಿಸಿದ್ದವು. ಬೇರೆ ಯಾವ ಕಾರಣವೂ ಇಲ್ಲ ಎಂದು ಡಿಕೆ ಶಿವಕುಮಾರ್ ಅವರಿಗೆ ಹೇಳಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.