ಚುನಾವಣೆಯಲ್ಲಿ ಸೋಲಿಸಿದವರ ಜೊತೆ ಕೈಜೋಡಿಸಿರುವುದು ಹಾಸ್ಯಾಸ್ಪದ: ಸಿದ್ದರಾಮಯ್ಯ ವಿರುದ್ಧ ಶ್ರೀನಿವಾಸ್ ಪ್ರಸಾದ್ ವ್ಯಂಗ್ಯ
ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಶಾಸಕ ಜಿ.ಟಿ. ದೇವೇಗೌಡರದ್ದು ಅಪಹಾಸ್ಯದ ಮೈತ್ರಿ ಎಂದು ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಮೈಸೂರಿನಲ್ಲಿ ವ್ಯಂಗ್ಯವಾಡಿದರು.

ಮೈಸೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಶಾಸಕ ಜಿ.ಟಿ. ದೇವೇಗೌಡರದ್ದು ಅಪಹಾಸ್ಯದ ಮೈತ್ರಿ ಎಂದು ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಮೈಸೂರಿನಲ್ಲಿ ವ್ಯಂಗ್ಯವಾಡಿದ್ದಾರೆ.
ವಿಧಾನ ಪರಿಷತ್ ಚುನಾವಣಾ ಸಂಬಂಧ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಹಾಗೂ ಜಿ.ಟಿ ದೇವೇಗೌಡ ಒಂದಾಗಿರೋದು ಇದು ಒಂದು ರೀತಿಯ ನಗೆಪಾಟಲಿಗೀಡಾಗಿದೆ. ಜಿ.ಟಿ. ದೇವೇಗೌಡ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ಪರ್ವ ಮಾಡಿದ್ದರು.
ಜನತಾ ಪರಿವಾರ ಕಟ್ಟುತ್ತೇನೆಂದು ಓಡಾಡಿದ್ದರು. ಆದ್ರೆ, ಇದೇ ಸಿದ್ದರಾಮಯ್ಯ ರಾತ್ರೋರಾತ್ರಿ ಊರು ಬಿಟ್ಟು ಬದಾಮಿಗೆ ಹೋಗಿ ನಿಂತರು. ಚಾಮುಂಡೇಶ್ವರಿ ಕ್ಷೇತ್ರದಲ್ಲಿ 35 ಸಾವಿರ ಮತಗಳಿಂದ ಸೋತರು.ಆದರೂ ಸಿದ್ದರಾಮಯ್ಯಗೆ ಬುದ್ಧಿ ಬಂದಿಲ್ಲ. ಇನ್ನೂ ಸಿಎಂ ಆಗಿದ್ದ ನೀವೇ, ವೀರಾವೇಷದ ಮಾತುಗಳನ್ನಾಡುವ ಸಿದ್ದರಾಮಯ್ಯ ಹೆದರಿ ಓಡಿಹೋದರೆ ಹೇಗೆ ? ಎಂದು ಪ್ರಶ್ನಿಸಿದರು.
ಅಧಿಕಾರಕ್ಕಾಗಿ ಪಕ್ಷದ ಸ್ಥಾನಕ್ಕೆ ರಾಜೀನಾಮೆ ನೀಡಿ ಇದೀಗ ನಾನೇ ಸಿಎಂ ಎನ್ನುತ್ತಿದ್ದಾರೆ. ನಿಮ್ಮ ಸ್ಥಾನವನ್ನು ಮೊದಲು ಉಳಿಸಿಕೊಳ್ಳಿ ಸಿದ್ದರಾಮಯ್ಯನವರೇ. ಚಿಮ್ಮನಕಟ್ಟಿ ಈಗಾಗಲೇ ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ಸಿದ್ದರಾಮಯ್ಯಗೆ ಟಾಂಗ್ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


