ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಅವರೇನು ನಮ್ಮ ನಾಯಕರಾ? ಆರೋಗ್ಯ ಸಚಿವ- ನಾರಾಯಣ ಗೌಡ ಜಟಾಪಟಿ!
ವಿಧಾನ ಪರಿಷತ್ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೇವಲ 50 ಮತ ಗಳಿಸಿರುವ ವಿಚಾರ ಸಚಿವರಾದ ಡಾ. ಕೆ.ಸುಧಾಕರ್ ಮತ್ತು ಕೆ.ಸಿ. ನಾರಾಯಣ ಗೌಡ ನಡುವೆ ಜಟಾಪಟಿಗೆ ಕಾರಣವಾಯಿತು.

ಬೆಳಗಾವಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೇವಲ 50 ಮತ ಗಳಿಸಿರುವ ವಿಚಾರ ಸಚಿವರಾದ ಡಾ. ಕೆ.ಸುಧಾಕರ್ ಮತ್ತು ಕೆ.ಸಿ. ನಾರಾಯಣ ಗೌಡ ನಡುವೆ ಜಟಾಪಟಿಗೆ ಕಾರಣವಾಯಿತು.
ಸುವರ್ಣ ವಿಧಾನಸೌಧದ ಮೊಗಸಾಲೆಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಆರೋಗ್ಯ ಸಚಿವ ಸುಧಾಕರ್, ‘ಮಂಡ್ಯದಲ್ಲಿ ಬಿಜೆಪಿ ಅಭ್ಯರ್ಥಿಗೆ ಕಡಿಮೆ ಮತ ಬಂದಿದೆ. ಇದು ನಿಜಕ್ಕೂ ದುರದೃಷ್ಟಕರ. ಈ ಕುರಿತು ಪಕ್ಷದ ಚೌಕಟ್ಟಿನಲ್ಲಿ ಚರ್ಚೆ ನಡೆಸುತ್ತೇವೆ’ ಎಂದರು.
ಆರೋಗ್ಯ ಸಚಿವರ ಹೇಳಿಕೆಗೆ ತಕ್ಷಣವೇ ಪ್ರತಿಕ್ರಿಯೆ ನೀಡಿದ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣ ಗೌಡ, ‘ಸುಧಾಕರ್ ಏನು ನಮ್ಮ ನಾಯಕರಾ? ಅವರು ಅವರ ಕ್ಷೇತ್ರದ ಬಗ್ಗೆ ಮಾತನಾಡಲಿ. ನಾವು ನಮ್ಮ ಕ್ಷೇತ್ರದ ಬಗ್ಗೆ ಹೇಳುತ್ತೇವೆ. ಮಂಡ್ಯದ ಬಗ್ಗೆ ಅವರಿಗೆ ಏನು ಗೊತ್ತು? ನನಗೆ ಗೊತ್ತಿದೆ, ನಾನು ಮಾತನಾಡುತ್ತೇನೆ’ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


