ರಾಜಕೀಯ

'ಜೀವಂತ ಇರುವವರನ್ನು ಮಾತನಾಡಿಸಿ, ನಾನು ಜೀವಂತ ಇಲ್ಲ, 4 ದಿನಗಳ ಹಿಂದೆಯೇ ಸತ್ತು ಹೋಗಿದ್ದೇನೆ'

ತಾವಾಡಿದ ಮಾತುಗಳು ರಾಷ್ಟ್ರಾದ್ಯಂತ ಪ್ರತಿಧ್ವನಿಸಿ ಚರ್ಚೆಗೆ ಕಾರಣವಾದ ಹಿನ್ನೆಲೆಯಲ್ಲಿ ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಅವರು ಮಾಧ್ಯಮಗಳ ಮೇಲೆ ಸಿಟ್ಟಾಗಿದ್ದಾರೆ. ಅವರ ಕೋಪ ಇನ್ನೂ ತಣ್ಣಿದಿಲ್ಲ.

'ಜೀವಂತ ಇರುವವರನ್ನು ಮಾತನಾಡಿಸಿ, ನಾನು ಜೀವಂತ ಇಲ್ಲ, 4 ದಿನಗಳ ಹಿಂದೆಯೇ ಸತ್ತು ಹೋಗಿದ್ದೇನೆ'
ರಮೇಶ್ ಕುಮಾರ್
Published On :

ಬೆಳಗಾವಿ: ತಾವಾಡಿದ ಮಾತುಗಳು ರಾಷ್ಟ್ರಾದ್ಯಂತ ಪ್ರತಿಧ್ವನಿಸಿ ಚರ್ಚೆಗೆ ಕಾರಣವಾದ ಹಿನ್ನೆಲೆಯಲ್ಲಿ ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಅವರು ಮಾಧ್ಯಮಗಳ ಮೇಲೆ ಸಿಟ್ಟಾಗಿದ್ದಾರೆ. ಅವರ ಕೋಪ ಇನ್ನೂ ತಣ್ಣಿದಿಲ್ಲ.

ಸುವರ್ಣಸೌಧಕ್ಕೆ ಬಂದ ಅವರನ್ನು ಎಂಇಎಸ್‌ ಪುಂಡಾಟಿಕೆ ಬಗ್ಗೆ ಪ್ರತಿಕ್ರಿಯೆ ನೀಡಲು ಕೇಳಿದಾಗ ಪ್ರತಿಕ್ರಿಯಿಸಲು ನಿರಾಕರಿಸಿದರು, ಮಾಧ್ಯಮಗಳ ಮುಂದೆ ಬಂದ ಬಂದ ಅವರು ಕೈ ಮುಗಿದು ಒಳ ಹೋದರು. ಈ ಸಂದರ್ಭದಲ್ಲಿ ಅವರು “ ಜೀವಂತ ಇರುವವರನ್ನು ಮಾತನಾಡಿಸಿ, ನಾನು ಜೀವಂತ ಇಲ್ಲ. ನಾಲ್ಕುದಿನಗಳ ಹಿಂದೆಯೇ ಸತ್ತು ಹೋಗಿದ್ದೇನೆ” ಎಂದರು.

ಯಾವುದೇ ಪ್ರಚಲಿತ ವಿಷಯಗಳ ಬಗ್ಗೆ ಉತ್ಸಾಹದಿಂದ ಪ್ರತಿಕ್ರಿಯೆ ನೀಡುತ್ತಿದ್ದ ಅವರು ಈ ರೀತಿ ಮಾತನಾಡಿದ್ದು ಆಶ್ಚರ್ಯ ಉಂಟು ಮಾಡಿತು. ಇದು ಮಾಧ್ಯಮಗಳ ಮೇಲೆ ಅವರಿಗೆ ಉಂಟಾಗಿರುವ ಸಿಟ್ಟಿನ ಸಂಕೇತವೂ ಆಗಿರಬಹುದು ಎಂದು ಹೇಳಲಾಗುತ್ತಿದೆ.

ಸದನದಲ್ಲಿ ಬೆಳೆವಿಮೆ ಚರ್ಚೆ ನಡೆಯುತ್ತಿದ್ದ ಸಂದರ್ಭದಲ್ಲಿ ಅವರಾಡಿದ ಮಾತುಗಳು ಸಂವೇದನಾಶೀಲರ ಸಿಟ್ಟಿಗೆ ಕಾರಣವಾಗಿತ್ತು. ಪಕ್ಷಬೇಧವಿಲ್ಲದೇ ಎಲ್ಲರೂ ಆ ಮಾತುಗಳನ್ನು ಖಂಡಿಸಿದ್ದರು. ಇದರಿಂದ ಕಾಂಗ್ರೆಸ್‌ ಕೂಡ ಮುಜುಗರಕ್ಕೆ ಒಳಗಾಗುವ ಸ್ಥಿತಿ ನಿರ್ಮಾಣವಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.