ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಸ್ಥಾನ ಬದಲಿಸಿದ ಕಟೀಲ್!
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಪಕ್ಷದ ಪ್ರಮುಖ ವಕ್ತಾರ ಸೇರಿದಂತೆ 17 ಸ್ಥಾನಗಳಿಗೆ ಹೊಸ ನೇಮಕಾತಿಗಳನ್ನು ಮಾಡಿದ್ದು, ಈ ಮೂಲಕ ಹುಬ್ಬಳ್ಳಿಯಲ್ಲಿ ಮಂಗಳವಾರ ಹಾಗೂ ಬುಧವಾರ ನಡೆಯಲಿರುವ ರಾಜ್ಯ ಕಾರ್ಯಕಾರಿ ಸಮಿತಿ ಮತ್ತು ಕೋರ್ ಕಮಿಟಿ ಸಭೆಗಳಿಗೆ ಸ್ಪಷ್ಟ ಸಂದೇಶವೊಂದನ್ನು ರವಾನಿಸಿದ್ದಾರೆ.

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಪಕ್ಷದ ಪ್ರಮುಖ ವಕ್ತಾರ ಸೇರಿದಂತೆ 17 ಸ್ಥಾನಗಳಿಗೆ ಹೊಸ ನೇಮಕಾತಿಗಳನ್ನು ಮಾಡಿದ್ದು, ಈ ಮೂಲಕ ಹುಬ್ಬಳ್ಳಿಯಲ್ಲಿ ಮಂಗಳವಾರ ಹಾಗೂ ಬುಧವಾರ ನಡೆಯಲಿರುವ ರಾಜ್ಯ ಕಾರ್ಯಕಾರಿ ಸಮಿತಿ ಮತ್ತು ಕೋರ್ ಕಮಿಟಿ ಸಭೆಗಳಿಗೆ ಸ್ಪಷ್ಟ ಸಂದೇಶವೊಂದನ್ನು ರವಾನಿಸಿದ್ದಾರೆ.
ಪಕ್ಷದ ಮುಖ್ಯ ವಕ್ತಾರರಾಗಿದ್ದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರನ್ನು ಅನಿವಾಸಿ ಭಾರತೀಯ ವಿಭಾಗದ ಸಂಚಾಲಕರನ್ನಾಗಿ ನೇಮಿಸಿದ್ದು, ಮೈಸೂರಿನ ಎಂ.ಜಿ.ಮಹೇಶ್ ಅವರನ್ನು ರಾಜ್ಯ ಮುಖ್ಯ ವಕ್ತಾರರನ್ನಾಗಿ ನೇಮಿಸಿದ್ದಾರೆ.
ಬಿಜೆಪಿಯ ಉಪಾಧ್ಯಕ್ಷರಾಗಿ ಮಾಜಿ ಸಚಿವ ಲಕ್ಷ್ಮಣ ಸವದಿ ಹಾಗೂ ಉಡುಪಿಯ ನಯನಾ ಗಣೇಶ್ ಅವರನ್ನು ನೇಮಕ ಮಾಡಲಾಗಿದೆ. ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳ ಅಧ್ಯಕ್ಷರಾಗಿ ಮುರಹರಗೌಡ ಹಾಗೂ ಚನ್ನಬಸವನಗೌಡ ಅವರನ್ನು ನೇಮಕ ಮಾಡಲಾಗಿದೆ. ಇದೇ ವೇಳೆ ವಿವಿಧ ಪ್ರಕೋಷ್ಠಗಳ ನೇಮಕಾತಿಗಳನ್ನೂ ಮಾಡಲಾಗಿದೆ.
ಎಚ್ ಯೋಗೇಂದ್ರ ಅವರನ್ನು ಕಾನೂನು ಪ್ರಕೋಷ್ಠ ರಾಜ್ಯ ಸಂಚಾಲಕರಾಗಿ ನೇಮಿಸಲಾಗಿದೆ. ತುಮಕೂರು ಜಿಲ್ಲಾಧ್ಯಕ್ಷ ಸ್ಥಾನದಿಂದ ಮಾಜಿ ಶಾಸಕ ಬಿ.ಸುರೇಶ್ ಗೌಡ ಅವರನ್ನು ಕೆಳಗಿಳಿಸಿರುವ ಕಟೀಲು ಅವರು, ಜಿಲ್ಲೆಯಲ್ಲಿ ಪಕ್ಷದ ಆಂತರಿಕ ಕಲಹಗಳು ಎದುರಾಗಿದ್ದರು, ಇಲ್ಲಿ ಯಾವುದೇ ನೇಮಕಾತಿ ಮಾಡದೇ ಇರುವುದು ಕುತೂಹಲ ಮೂಡಿಸಿದೆ.
ಈ ನಡುವೆ ಸೋಮವಾರ ನಡೆಯಬೇಕಿದ್ದ ಜಿಲ್ಲಾ ಮಟ್ಟದ ಕೋರ್ ಕಮಿಟಿ ಸಭೆಯನ್ನು ಕೂಡ ರದ್ದುಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


