365 ದಿನ ಧಣಿವರಿಯದೇ ಕೆಲಸ ಮಾಡುವಷ್ಟು ಶಕ್ತಿ ನನ್ನಲಿದೆ: ಸಿಎಂ ಬೊಮ್ಮಾಯಿ
ಯಾವುದೇ ಭಯವಿಲ್ಲದೆ 365 ದಿನ ಧಣಿವರಿಯದೇ ಕೆಲಸ ಮಾಡುವಷ್ಟು ಶಕ್ತಿ ನನ್ನಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಹೇಳಿದ್ದಾರೆ.

ಹುಬ್ಬಳ್ಳಿ: ಯಾವುದೇ ಭಯವಿಲ್ಲದೆ 365 ದಿನ ಧಣಿವರಿಯದೇ ಕೆಲಸ ಮಾಡುವಷ್ಟು ಶಕ್ತಿ ನನ್ನಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಕಾರ್ಯಕಾರಿಣಿ ಸಭೆಯ ಬಗ್ಗೆ ಮಾತನಾಡಿದ ಮುಖ್ಯಮಂತ್ರಿಗಳು, ರಾಜ್ಯದಲ್ಲಿ ಮುಂಬರುವ ಬಿಜೆಪಿ ರಾಜಕೀಯ ಚಟುವಟಿಕೆಗಳ ಬಗ್ಗೆ ಪಕ್ಷದ ಮುಖಂಡರೊಂದಿಗೆ ಕಾರ್ಯಕಾರಿಣಿ ಸಭೆ ನಡೆಸಲಾಗುವುದು ಎಂದು ಹೇಳಿದರು.
ಬಿಜೆಪಿಯ ಶಾಸಕ ಎಂಪಿ ಕುಮಾರಸ್ವಾಮಿ ಹೇಳಿಕೆಯ ಬಗ್ಗೆ ಉತ್ತರಿಸಿದ ಮುಖ್ಯಮಂತ್ರಿ ಬೊಮ್ಮಾಯಿ, ನಮ್ಮ ಶಾಸಕರಿಗೆ ನನ್ನ ಮೇಲೆ ಪ್ರೀತಿ ಜಾಸ್ತಿ ಅದಕ್ಕೆ ಹಾಗೆ ಹೇಳಿದ್ದಾರೆ. 365 ದಿನ ಅವಿಶ್ರಮಿತವಾಗಿ ಧಣಿವರಿಯದೇ ಕೆಲಸವನ್ನ ಮಾಡುವಷ್ಟು ಶಕ್ತಿ ನನ್ನಲಿದೆ. ದಿನಕ್ಕೆ ಕನಿಷ್ಟ 15 ಘಂಟೆಗಳಷ್ಟು ಕೆಸಲ ಮಾಡುವ ಸಂಕಲ್ಪ ಮಾಡಿದ್ದೇನೆ. 2023ಕ್ಕೆ ಬಿಜೆಪಿಯನ್ನ ರಾಜ್ಯದಲ್ಲಿ ಅಧಿಕಾರಕ್ಕೆ ತರವುದೇ ನನ್ನ ಗುರಿ ಆದ್ದರಿಂದ ಇಂದಿನಿಂದಲೇ ಶ್ರಮಿಸುವ ಕೆಲಸ ಮಾಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ಬಿಜೆಪಿ ನಾಯಕರು ಚುನಾವಣೆಗೆ ಒಗ್ಗಟ್ಟಿನಿಂದ ಕೆಲಸ ಮಾಡುತ್ತಾರೆ. ಬಿಜೆಪಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರ ನಾಯಕತ್ವದಲ್ಲಿ ಪಕ್ಷವು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದೆ ಎಂದು ಇತ್ತೀಚೆಗೆ ನೀಡಿದ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಬೊಮ್ಮಾಯಿ ಅವರು, ಅವರು ದೆಹಲಿ ಮಟ್ಟದ ನಾಯಕರಾಗಿದ್ದು, ನನ್ನ ಮೇಲೆ ವಿಶ್ವಾಸ ಇಟ್ಟುಕೊಂಡಿದ್ದಾರೆ, ಅವರಿಗೆ ಧನ್ಯವಾದಗಳು. ಬಿಜೆಪಿಯಲ್ಲಿ ನಾವು ಒಟ್ಟಾಗಿ ಮತ್ತು ಒಗ್ಗಟ್ಟಿನಿಂದ ಕೆಲಸ ಮಾಡುತ್ತೇವೆ, ಇದು ಟೀಮ್ ವರ್ಕ್, ನಾನು ಮುಖ್ಯಮಂತ್ರಿ ಎಂದು ಅವರು ಹೇಳಿದ್ದಾರೆ. ಸರ್ಕಾರ ಮತ್ತು ಪಕ್ಷದ ನಡುವೆ ಸಂಪೂರ್ಣ ಸಮನ್ವಯ ಮತ್ತು ಉತ್ತಮ ಸಂಬಂಧವಿದೆ ಮತ್ತು ನಾವು ಅದನ್ನು ಮುಂದುವರಿಸುತ್ತೇವೆ ಎಂದಿದ್ದಾರೆ.
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಮತ್ತು ಬೊಮ್ಮಾಯಿ ಅವರು ಉನ್ನತ ಹುದ್ದೆಯಿಂದ ಹೊರಬರುವ ಸಾಧ್ಯತೆಗಳ ಬಗ್ಗೆ ಕೆಲವು ದಿನಗಳಿಂದ ವದಂತಿಗಳು ಹರಿದಾಡುತ್ತಿವೆ ಎಂಬ ಪ್ರಶ್ನೆಗೆ ಉತ್ತರಿಸಿ, ‘ಬದಲಾವಣೆ’ ಕುರಿತ ಊಹಾಪೋಹಗಳು ಮಾಧ್ಯಮಗಳ ಸೃಷ್ಟಿ. ಪಕ್ಷದ ನಾಯಕತ್ವ ಕೂಡ ಇಂತಹ ವದಂತಿಗಳನ್ನು ತಿರಸ್ಕರಿಸಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


