ಡಿಕೆ ಶಿವಕುಮಾರ್ ಕರೆದ ಕೂಡಲೆ ಯಾರೂ ಹೋಗಲ್ಲ; ಆದರೂ ಅವರ ಸೌಜನ್ಯ ಮೆಚ್ಚುತ್ತೇನೆ: ಎಚ್.ವಿಶ್ವನಾಥ್
ಡಿ.ಕೆ.ಶಿವಕುಮಾರ್ ಒಬ್ಬ ಸಂಘಟನಾ ಚತುರ. ಪಕ್ಷವನ್ನು ಯಾವ ರೀತಿ ಸಂಘಟನೆ ಮಾಡಬೇಕು ಎಂಬುದನ್ನು ಅವರು ಕರಗತ ಮಾಡಿಕೊಂಡಿದ್ದಾರೆ’ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್, ಕೆಪಿಸಿಸಿ ಅಧ್ಯಕ್ಷರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮೈಸೂರು: ಡಿ.ಕೆ.ಶಿವಕುಮಾರ್ ಒಬ್ಬ ಸಂಘಟನಾ ಚತುರ. ಪಕ್ಷವನ್ನು ಯಾವ ರೀತಿ ಸಂಘಟನೆ ಮಾಡಬೇಕು ಎಂಬುದನ್ನು ಅವರು ಕರಗತ ಮಾಡಿಕೊಂಡಿದ್ದಾರೆ’ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್, ಕೆಪಿಸಿಸಿ ಅಧ್ಯಕ್ಷರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ವಿಶ್ವನಾಥ್, ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ ಮತ್ತು ಜೆಡಿಎಸ್ ತ್ಯಜಿಸಿ ಬಿಜೆಪಿ ಸೇರಿರುವ 17 ಶಾಸಕರನ್ನು ತಮ್ಮ ಪಕ್ಷಕ್ಕೆ ಆಹ್ವಾನಿಸಿದ್ದಾರೆ. ಅವರು ಪಕ್ಷಕ್ಕೆ ಕರೆದ ಕೂಡಲೇ ಯಾರೂ ಹೋಗಲ್ಲ. ಆದರೂ ಅವರ ಸೌಜನ್ಯತೆಯನ್ನು ಮೆಚ್ಚುತ್ತೇನೆ. ಅವರೊಬ್ಬ ಸಂಘಟನಾ ಚತುರ ಎಂದು ಮೆಚ್ಚುಗೆ ಸೂಚಿಸಿದ್ದಾರೆ.
ಒಂದು ರಾಷ್ಟ್ರೀಯ ಪಕ್ಷದ ರಾಜ್ಯಾಧ್ಯಕ್ಷರಾಗಿ ರಾಜಕೀಯ ಚಲನಲವನ, ಪರಿಸ್ಥಿತಿಗಳನ್ನು ಅವರು ಅರ್ಥಮಾಡಿಕೊಂಡಿದ್ದಾರೆ’ ಎಂದು ಹೇಳಿದರು. ‘ಬಿಜೆಪಿ ಸೇರಿದ ಕಾಂಗ್ರೆಸ್‌ನ ಶಾಸಕರನ್ನು ಪ್ರಳಯ ಆದರೂ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ರಾಜಕಾರಣದಲ್ಲಿ ಅಂತಹ ಮಾತು ನಡೆಯದು. ರಾಜಕೀಯ ಪಕ್ಷಗಳ ನಡವಳಿಕೆ ಆಯಾ ಕಾಲಕ್ಕೆ ಬದಲಾವಣೆ ಆಗುತ್ತಿರುತ್ತದೆ ಎಂಬುದನ್ನು ಸಿದ್ದರಾಮಯ್ಯ ಅರ್ಥಮಾಡಿಕೊಳ್ಳಬೇಕು’ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


