ರಾಜ್ಯದ 4 ಸಂಸದರು ಕೇಂದ್ರ ಸಚಿವರಾಗಬಹುದು: ವಿ.ಶ್ರೀನಿವಾಸ ಪ್ರಸಾದ್
ರಾಜ್ಯದ ನಾಲ್ವರು ಸಂಸದರು ಕೇಂದ್ರ ಸಚಿವರಾಗಬಹುದು ಎಂದು ಕೇಂದ್ರದ ಮಾಜಿ ಸಚಿವ ಹಾಗೂ ಚಾಮರಾಜನಗರ ಬಿಜೆಪಿ ಸಂಸದ ವಿ.ಶ್ರೀನಿವಾಸಪ್ರಸಾದ್ ಅವರು ಭವಿಷ್ಯ ನುಡಿದಿದ್ದಾರೆ.

ಮೈಸೂರು: ರಾಜ್ಯದ ನಾಲ್ವರು ಸಂಸದರು ಕೇಂದ್ರ ಸಚಿವರಾಗಬಹುದು ಎಂದು ಕೇಂದ್ರದ ಮಾಜಿ ಸಚಿವ ಹಾಗೂ ಚಾಮರಾಜನಗರ ಬಿಜೆಪಿ ಸಂಸದ ವಿ.ಶ್ರೀನಿವಾಸಪ್ರಸಾದ್ ಅವರು ಭವಿಷ್ಯ ನುಡಿದಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಕೇಂದ್ರದಲ್ಲಿ 2ನೇ ಬಾರಿ ಅಧಿಕಾರಕ್ಕೆ ಬಂದ 2 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಸಚಿವ ಸಂಪುಟ ವಿಸ್ತರಣೆಯ ಚಟುವಟಿಕೆ ನಡೆಯುತ್ತಿದೆ.
ಈ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ನಾಲ್ವರು ಸಂಸದರು ಸಚಿವರಾಗಬಹುದು. ಅಧಿವೇಶನಕ್ಕೂ ಮುನ್ನ ಸಂಪುಟ ವಿಸ್ತರಣೆಯಾದರೆ ಉತ್ತಮ. ಅನಾರೋಗ್ಯದ ಕಾರಣ ನಾನು ಸಚಿವನಾಗಲು ಆಗಲ್ಲ. ಆದರೆ ಉಳಿದವರು ಸಚಿವರಾಗಲಿ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ನಾಲ್ಕು ಸಂಸದರ ಹೆಸರು ಕೇಳಿ ಬರುತ್ತಿದೆ. ಈ ಪೈಕಿ ಸಂಸದ ಉಮೇಶ್ ಜಾದವ್ ಹೆಸರು ಕೇಳಿ ಬರುತ್ತಿದೆ. ಜಾದವ್ ಗೆ ಸ್ಥಾನ ನೀಡಬೇಕು. ಅದರಂತೆ ರಾಜ್ಯದಲ್ಲಿ ಶಿವಕುಮಾರ್ ಉದಾಸಿ, ಶೋಭಾ ಕರಂದ್ಲಾಜೆ ಗೆ ಸಚಿವ ಸ್ಥಾನ ನೀಡಲಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


