ಗೊಂದಲಕ್ಕೆ ತೆರೆ: 2022 ರ ಜನವರಿಯಲ್ಲಿ ಮೊಹಮದ್ ನಲಪಾಡ್ ಗೆ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನ
ಫೆಬ್ರುವರಿಯಲ್ಲಿ ನಡೆದಿದ್ದ ಯುವ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಹೆಚ್ಚು ಮತ ಗಳಿಸಿರುವ ಶಾಂತಿನಗರ ಶಾಸಕ ಎನ್.ಎ. ಹ್ಯಾರಿಸ್ ಅವರ ಪುತ್ರ ಮೊಹಮ್ಮದ್ ನಲಪಾಡ್ ಜನವರಿ 31ರಂದು ಯುವ ಅಧ್ಯಕ್ಷ ಸ್ಥಾನ ಪಡೆಯಲಿದ್ದಾರೆ.

ಬೆಂಗಳೂರು: ಮಾಜಿ ಸಚಿವ ಎಂ.ಆರ್. ಸೀತಾರಾಮ್ ಅವರ ಪುತ್ರ ರಕ್ಷಾ ರಾಮಯ್ಯ ಅವರಿಗೆ 2022ರ ಜನವರಿ 31ರವರೆಗೆ ಯುವ ಕಾಂಗ್ರೆಸ್‌ನ ರಾಜ್ಯ ಘಟಕದ ಅಧ್ಯಕ್ಷ ಸ್ಥಾನ ನೀಡಿ ಸೋಮವಾರ ಆದೇಶ ಹೊರಡಿಸಿರುವ ಪಕ್ಷದ ರಾಷ್ಟ್ರೀಯ ಯುವ ಘಟಕ, ಈ ಸಂಬಂಧ ಉಂಟಾಗಿದ್ದ ಗೊಂದಲಕ್ಕೆ ತೆರೆ ಎಳೆದಿದೆ.
ಫೆಬ್ರುವರಿಯಲ್ಲಿ ನಡೆದಿದ್ದ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಹೆಚ್ಚು ಮತ ಗಳಿಸಿರುವ ಶಾಂತಿನಗರ ಶಾಸಕ ಎನ್.ಎ. ಹ್ಯಾರಿಸ್ ಅವರ ಪುತ್ರ ಮೊಹಮ್ಮದ್ ನಲಪಾಡ್ ಜನವರಿ 31ರಂದು ಅಧ್ಯಕ್ಷ ಸ್ಥಾನ ಪಡೆಯಲಿದ್ದಾರೆ.
ಹಲ್ಲೆಯಂತಹ ಗಂಭೀರ ಅಪರಾಧ ಪ್ರಕರಣದಲ್ಲಿ ಭಾಗಿಯಾಗಿರುವ ಮೊಹಮ್ಮದ್ ನಲಪಾಡ್‌ಗೆ ಚುನಾವಣೆಯಲ್ಲಿ ಅಧಿಕ ಮತ ಲಭಿಸಿದ್ದರೂ ಅಧ್ಯಕ್ಷ ಸ್ಥಾನ ದೊರೆತಿರಲಿಲ್ಲ. ಮತ ಗಳಿಕೆಯಲ್ಲಿ 2ನೇ ಸ್ಥಾನ ಗಳಿಸಿದ್ದ ರಕ್ಷಾ ರಾಮಯ್ಯ ಅವರಿಗೇ ಅಧ್ಯಕ್ಷ ಸ್ಥಾನವನ್ನು ನೀಡಲಾಗಿತ್ತು.
ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಚುನಾವಣೆಯಿಂದಾಗಿ ಕಾಂಗ್ರೆಸ್ ನ ಬಣ ರಾಜಕೀಯ ಬಯಲಿಗೆ ಬಂದಿತ್ತು. 57,271 ಮತಗಳನ್ನು ಪಡೆದ ಮಾಜಿ ಸಚಿವ ಎಂ.ಆರ್.ಸೀತಾರಾಂ ಅವರ ಪುತ್ರ ರಕ್ಷಾ ರಾಮಯ್ಯ ಅವರನ್ನು ಚುನಾವಣಾ ಮಂಡಳಿಯು ಅಧ್ಯಕ್ಷರನ್ನಾಗಿ ಘೋಷಿಸಿತು ಮತ್ತು 64,203 ಮತಗಳನ್ನು ಪಡೆದ ಮೊಹಮ್ಮದ್ ನಲಪಾಡ್ ಅವರನ್ನು ಅನರ್ಹಗೊಳಿಸಲಾಯಿತು.
ಈ ಗೊಂದಲಕ್ಕೆ ತೆರೆ ಎಳೆಯಲು ಒಂದು ಮಾರ್ಗವನ್ನು ಕಂಡುಕೊಳ್ಳಲು ಇತ್ತೀಚೆಗೆ ಪಕ್ಷದ ಮುಖಂಡರಾದ ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ಶ್ರೀನಿವಾಸ್ ಅವರನ್ನು ಭೇಟಿಯಾಗಿದ್ದರು. ನಂತರ ನಲಪಾಡ್ ಅವರನ್ನು ಪಿವೈಸಿ ಅಧ್ಯಕ್ಷರನ್ನಾಗಿ ನೇಮಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


