ಕಾಂಗ್ರೆಸ್ ಬೆಂಬಲಿಸಿ, ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗುತ್ತಾರೆ, ನಿಮಗೆ ಸಹಾಯ ಮಾಡುತ್ತಾರೆ: ನಲಪಾಡ್
ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಬಣ ಮತ್ತು ಡಿ ಕೆ ಶಿವಕುಮಾರ್ ಬಣಗಳ ನಡುವಿನ ಕದನ, ಭಿನ್ನಮತ ಆಗಾಗ ಹೊರಬರುತ್ತಲೇ ಇದೆ. ತಮ್ಮ ನಾಯಕರು ಮುಖ್ಯಮಂತ್ರಿಯಾಗಬೇಕೆಂದು ಚುನಾವಣೆಗೆ ಇನ್ನೂ ಎರಡು ವರ್ಷವಿರುವಾಗಲೇ ಕಿತ್ತಾಟ ನಡೆಸುತ್ತಿದ್ದಾರೆ. ಅದೀಗ ಮತ್ತೊಮ್ಮೆ ಹೊರಬಂದಿದೆ.

ಉಡುಪಿ: ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಬಣ ಮತ್ತು ಡಿ ಕೆ ಶಿವಕುಮಾರ್ ಬಣಗಳ ನಡುವಿನ ಕದನ, ಭಿನ್ನಮತ ಆಗಾಗ ಹೊರಬರುತ್ತಲೇ ಇದೆ. ತಮ್ಮ ನಾಯಕರು ಮುಖ್ಯಮಂತ್ರಿಯಾಗಬೇಕೆಂದು ಚುನಾವಣೆಗೆ ಇನ್ನೂ ಎರಡು ವರ್ಷವಿರುವಾಗಲೇ ಕಿತ್ತಾಟ ನಡೆಸುತ್ತಿದ್ದಾರೆ. ಅದೀಗ ಮತ್ತೊಮ್ಮೆ ಹೊರಬಂದಿದೆ.
ನಿನ್ನೆ ಮತ್ತು ಮೊನ್ನೆ ಉಡುಪಿಯ ಮೀನುಗಾರರ ಬಳಿ ಬಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಕಷ್ಟಗಳನ್ನು ಆಲಿಸಿದ್ದರು. ಇಂದು ಮೀನುಗಾರರನ್ನು ಭೇಟಿ ಮಾಡಿದ ಕಾಂಗ್ರೆಸ್ ಯುವ ನಾಯಕ ಮೊಹಮ್ಮದ್ ನಲಪಾಡ್ ಡಿ ಕೆ ಶಿವಕುಮಾರ್ ಕಾಂಗ್ರೆಸ್ ನಿಂದ ಮುಖ್ಯಮಂತ್ರಿಯಾಗುತ್ತಾರೆ ಎಂಬರ್ಥದಲ್ಲಿ ಮಾತನಾಡಿದ್ದಾರೆ.
ಮೀನುಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ನಿಮಗೆಲ್ಲಾ ಡಿ ಕೆ ಶಿವಕುಮಾರ್ ಅವರು ಸಹಾಯ ಮಾಡುತ್ತಾರೆ, ಅದಕ್ಕೆ ನೀವು ಮಾಡಬೇಕಾಗಿರುವುದು ಕಾಂಗ್ರೆಸ್ ನ್ನು ಬೆಂಬಲಿಸುವುದು, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನ್ನು ಬೆಂಬಲಿಸಿ ಅಧಿಕಾರಕ್ಕೆ ತನ್ನಿ, ಆಗ ಡಿ ಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗುತ್ತಾರೆ, ನಿಮಗೆ ಸಹಾಯ ಮಾಡುತ್ತಾರೆ ಎಂದರು.
ಇದಕ್ಕೆ ಸಿದ್ದರಾಮಯ್ಯ ಬಣ ಯಾವ ರೀತಿ ಪ್ರತಿಕ್ರಿಯಿಸುತ್ತದೆ ಎಂದು ಕಾದು ನೋಡಬೇಕಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


