ಹೊಡಿ-ಬಡಿ ರಾಜಕಾರಣದ ಬ್ರ್ಯಾಂಡ್ ಅಂಬಾಸಿಡರ್ ಆಗಲು ಹೊರಟಿದ್ದೀರಾ? ರೌಡಿ ಕೊತ್ವಾಲನೊಂದಿಗಿದ್ದ ಗತಕಾಲದ ನೆನಪು ಕಾಡಿತೇ?
ಪಕ್ಕದಲ್ಲಿ ಬಂದು ನಿಂತ ಕಾಂಗ್ರೆಸ್ ಕಾರ್ಯಕರ್ತನಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಥಳಿಸಿದ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದೆ.

ಬೆಂಗಳೂರು: ಪಕ್ಕದಲ್ಲಿ ಬಂದು ನಿಂತ ಕಾಂಗ್ರೆಸ್ ಕಾರ್ಯಕರ್ತನಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಥಳಿಸಿದ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದೆ.
ಈ ಸಂಬಂಧ ಟ್ಟೀಟ್ ಮಾಡಿರುವ ಸಾರ್ವಜನಿಕವಾಗಿ ಹೇಗೆ ನಡೆದುಕೊಳ್ಳಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಮೊದಲು ಅರಿತುಕೊಳ್ಳಬೇಕು. ಈ ಹಿಂದೆ ವಿದ್ಯಾರ್ಥಿಯೊಬ್ಬ ಸೆಲ್ಫಿ ತೆಗೆದ ಎಂಬ ಕಾರಣಕ್ಕೆ ಆತನ ಮೇಲೆ ಹಲ್ಲೆ ನಡೆಸಿದ್ದರು. ಮಹಾನಾಯಕ ಡಿಕೆಶಿಯವರೇ ಭೂಗತ ಜಗತ್ತಿನ ರೀತಿಯ ವರ್ತನೆಗಳು ನಿಮಗೆ ಅನಿವಾರ್ಯ ಎಂದಾದರೆ ಸಾರ್ವಜನಿಕ ಜೀವನ ಬಿಟ್ಟುಬಿಡಿ ಎಂದು ಸಲಹೆ ನೀಡಿದೆ.
ಕೆಪಿಸಿಸಿ ಅಧ್ಯಕ್ಷರ ಹದ್ದು ಮೀರಿದ ವರ್ತನೆಗಳು ಇತ್ತೀಚೆಗೆ ಮಿತಿ ಮೀರುತ್ತಿದೆ. ನಾನು ಮಾತಾಡುವಾಗ ಮಧ್ಯ ಮಾತಾಡಿದ್ರೆ ಒದ್ದು ಹೊರಹಾಕುವೆ ಎಂದು ಇತ್ತೀಚೆಗೆ ಶಿವಕುಮಾರ್ ಗದರಿಸಿದ್ದರು. ಸಾರ್ವಜನಿಕವಾಗಿ ಹೊಡೆಯುವುದು, ಒದೆಯೋದು, ಕಾರ್ಯಕರ್ತರ ಮೊಬೈಲನ್ನು ಕಿತ್ತೆಸೆಯುವುದು ಇದೆಲ್ಲ ರೌಡಿ ಲಕ್ಷಣ ಅಲ್ಲದೆ ಮತ್ತೇನು? ಕಾರ್ಯಕರ್ತ ಹತ್ತಿರ ಬಂದ ಎಂಬ ಕಾರಣಕ್ಕೆ ಸಾರ್ವಜನಿಕವಾಗಿ ಹಲ್ಲೆ ಮಾಡುವ ಡಿಕೆಶಿ ಅವರ ಬಳಿ ಜನಸಾಮಾನ್ಯರು ಹೋದರೆ ಗತಿಯೇನು? ಕೆಪಿಸಿಸಿ ಅಧ್ಯಕ್ಷರೇ, ನೀವು ಹೊಡಿ, ಬಡಿ ರಾಜಕಾರಣದ ಬ್ರ್ಯಾಂಡ್ ಅಂಬಾಸಿಡರ್ ಆಗಲು ಹೊರಟಿದ್ದೀರಾ?
ಸಾರ್ವಜನಿಕ ಜೀವನದಲ್ಲಿದ್ದುಕೊಂಡು ಒಬ್ಬ ವ್ಯಕ್ತಿಯ ಮೇಲೆ ಸಾರ್ವಜನಿಕವಾಗಿ, ಮಾಧ್ಯಮಗಳ ಎದುರು ಹಲ್ಲೆ ಮಾಡುವುದು ಡಿಕೆಶಿ ಅವರ ಉಗ್ರ ಮನಸ್ಥಿತಿಯನ್ನು ತೋರಿಸುತ್ತಿದೆ. ಈ ಹಿಂದೆ ಸೆಲ್ಫಿ ತೆಗೆಯಲು ಬಂದ ಕಾರ್ಯಕರ್ತನ ಮೇಲೆ ಡಿಕೆಶಿ ಹಲ್ಲೆ ಮಾಡಿದ್ದರು. ಡಿಕೆಶಿಯವರೇ, ನೀವು ರಾಜಕಾರಣಿಯೋ ಅಥವಾ ರೌಡಿಯೋ!? ಎಂದು ಬಿಜೆಪಿ ಪ್ರಶ್ನಿಸಿದೆ.
Karnataka CONgress President @DKShivakumar SLAPS his party worker in full public view.
— C T Ravi
If this is how the "former shishya" of Kotwal Ramachandra treats his party worker, one can imagine what he would do with Others.
Have you given DKS the "licence for violence", @RahulGandhi? pic.twitter.com/JuuSBsALwG
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


