ರಾಜಕೀಯ

ಶಾಸಕರು ದೆಹಲಿಗೆ ಹೋದರೆ ತಪ್ಪೇನೂ ಇಲ್ಲ: ನಳಿನ್ ಕುಮಾರ್ ಕಟೀಲ್

ಬಿಜೆಪಿ ಶಾಸಕರು ನವದೆಹಲಿಗೆ ಭೇಟಿ ನೀಡುವುದರಲ್ಲಿ ತಪ್ಪೇನೂ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಗುರುವಾರ ಹೇಳಿದ್ದಾರೆ.

ಶಾಸಕರು ದೆಹಲಿಗೆ ಹೋದರೆ ತಪ್ಪೇನೂ ಇಲ್ಲ: ನಳಿನ್ ಕುಮಾರ್ ಕಟೀಲ್
ನಳಿನ್ ಕುಮಾರ್ ಕಟೀಲ್
Published On :

ಕಲಬುರಗಿ: ಬಿಜೆಪಿ ಶಾಸಕರು ನವದೆಹಲಿಗೆ ಭೇಟಿ ನೀಡುವುದರಲ್ಲಿ ತಪ್ಪೇನೂ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಗುರುವಾರ ಹೇಳಿದ್ದಾರೆ. 

ಬೀದರ್ ಗೆ ತೆರಳುವ ಮುನ್ನ ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೈಯಕ್ತಿಕ ಕೆಲಸಗಳಿಗಾಗಿಯೂ ಶಾಸಕರು ದೆಹಲಿಗೆ ಭೇಟಿ ನೀಡುತ್ತಾರೆ. ಇದರಲ್ಲಿ ನಾವು ತಪ್ಪು ಹುಡುಕುವುದಿಲ್ಲ ಎಂದು ಹೇಳಿದ್ದಾರೆ. 

ಇದೇ ವೇಳೆ ಮುಖ್ಯಮಂತ್ರಿಗಳು ದೆಹಲಿಗೆ ಭೇಟಿ ನೀಡುತ್ತಿರುವ ಕುರಿತು ಪ್ರತಿಕ್ರಿಯೆ ನೀಡಿ, ಅಧಿವೇಶನದ ವೇಳೆಗೆ ಮುಖ್ಯಮಂತ್ರಿ ಅವರು ದೆಹಲಿಗೆ ಹೋಗುವ ಪರಿಪಾಠವಿದೆ. ಹೀಗಾಗಿ ಹೋಗುತ್ತಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಅವರ ವಿವೇಚನೆಗೆ ಬಿಟ್ಟದ್ದು ಎಂದು ತಿಳಿಸಿದ್ದಾರೆ. 

ಬಳಿಕ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಅವರು, ರಾಜ್ಯದಲ್ಲಿ ಚುನಾವಣೆಗೆ ಇನ್ನೂ ಎರಡು ವರ್ಷವಿದೆ. ಆದರೆ ಈಗಲೇ ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಹುದ್ದೆಗೆ‌ ಸ್ಪರ್ಧೆ ನಡೆದಿದೆ. ಸಿ.ಎಂ. ಹುದ್ದೆಗೆ ಸಂಗೀತ ಖುರ್ಚಿ ಆಟ ಜೋರಾಗಿ ನಡೆದಿದೆ. ಸಿದ್ದರಾಮಯ್ಯ ರಾಜ್ಯದ ಜನರಿಗೆ ಬಹುದೊಡ್ಡ ವಂಚನೆ ಮಾಡಿದ್ದಾರೆ ಮೊದಲು ಅಹಿಂದದ ಹೆಸರು ಹೇಳಿ ಸಿ.ಎಂ. ಆದರು. ನಂತರ ಆ ಸಮುದಾಯವನ್ನು ‌ಮರೆತುಬಿಟ್ಟರು ಎಂದು ಟೀಕಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.