'ಸಂದೇಶ ಸ್ಪಷ್ಟವಾಗಿದೆ' ಎಂದು ಭಾವಿಸುತ್ತೇನೆ!: ಸಿಎಂ ಯಡಿಯೂರಪ್ಪ- ಮೋದಿ ಭೇಟಿ ಬೆನ್ನಲ್ಲೆ ರೇಣುಕಾಚಾರ್ಯ ಟ್ವೀಟ್!
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ದೆಹಲಿಗೆ ತೆರಳಿ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ ಎಂಬ ವಿಷಯ ರಾಜಕೀಯ ವಲಯದಲ್ಲಿ ಸಾಕಷ್ಟು ಆಸಕ್ತಿ ಮೂಡಿಸಿತ್ತು.

ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ದೆಹಲಿಗೆ ತೆರಳಿ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ ಎಂಬ ವಿಷಯ ರಾಜಕೀಯ ವಲಯದಲ್ಲಿ ಸಾಕಷ್ಟು ಆಸಕ್ತಿ ಮೂಡಿಸಿತ್ತು.
ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಂ ಯಡಿಯೂರಪ್ಪ ಸುಮಾರು 25 ನಿಮಿಷಗಳ ಕಾಲ ಚರ್ಚೆ ನಡೆಸಿದ್ದಾರೆ, ಇದು ಅಧಿಕೃತ ಭೇಟಿ ಎಂದು ಸಿಎಂ ಕಚೇರಿ ತಿಳಿಸಿದೆ, ಆದರೆ ಮೂಲಗಳ ಪ್ರಕಾರ ಇದಕ್ಕೂ ಹೊರತಾಗಿ ಹೆಚ್ಚಿನ ಮಾತುಕತೆ ನಡೆದಿದೆ ಎಂದು ಸಿಎಂ ನಿಷ್ಠರು ತಿಳಿಸಿದ್ದಾರೆ.
ಪಿಎಂ-ಸಿಎಂ ಭೇಟಿಯಿಂದಾಗಿ ರಾಜ್ಯದಲ್ಲಿ ಹಲವು ದಿನಗಳಿಂದ ಚರ್ಚೆಯಲ್ಲಿದ್ದ ನಾಯಕತ್ವ ಬದಲಾವಣೆ ವಿಷಯತ್ತೆ ಫುಲ್ ಸ್ಟಾಪ್ ಹಾಡಲಾಗಿದೆ ಎಂದು ಹೇಳಲಾಗುತ್ತಿದೆ.
ಸಿಎಂ ರಾಜಕೀಯ ಕಾರ್ಯದರ್ಶಿ ಶಾಸಕ ಎಂಪಿ ರೇಣುಕಾಚಾರ್ಯ ಟ್ವೀಟ್ ಮಾಡಿದ್ದು, ಸಂದೇಶ ಸ್ಪಷ್ಟವಾಗಿದೆ ಎಂದು ಭಾವಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ. ಸಿಎಂ ಮತ್ತು ಪ್ರಧಾನಿ ಭೇಟಿಯ ಫಲಿತಾಂಶ ಏನು ಎಂಬುದರ ಬಗ್ಗೆ ಯಡಿಯೂರಪ್ಪ ನಿಷ್ಠರ ಪ್ರತಿಕ್ರಿಯೆಯಿಂದ ತಿಳಿದು ಬಂದಿದೆ.
ಪ್ರಧಾನಿ ನರೇಂದ್ರ ಮೋದಿ ಯಡಿಯೂರಪ್ಪ ನಾಯಕತ್ವದ ಮೇಲೆ ವಿಶ್ವಾಸವಿಟ್ಟು ಅವರ ಬೆಂಬಲಕ್ಕೆ ನಿಂತಿದ್ದಾರೆ ಎಂಬ ಸಂದೇಶವನ್ನು ಭಿನ್ನಮತೀಯ ನಾಯಕರುಗಳಿಗೆ ರವಾನಿಸಿದ್ದಾರೆ. ಈ ಭೇಟಿ ನಾಯಕತ್ವ ಬದಲಾವಣೆ ಸಂಬಂಧ ನಡೆಯುತ್ತಿದ್ದ ಎಲ್ಲಾ ಚರ್ಚೆಗಳಿಗೆ ಇತಿಶ್ರೀ ಹೇಳಲಿದೆ ಎಂಬ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.
ಸಿಎಂ ಯಡಿಯೂರಪ್ಪ ಎಂಎಲ್ ಸಿ ಲೆಹರ್ ಸಿಂಗ್ ಅವರ ಜೊತೆ ತೆರಳಿದ್ದರು. ಯಡಿಯೂರಪ್ಪ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರನ್ನು ಭೇಟಿ ಮಾಡುವ ವಿಶ್ವಾಸದಲ್ಲಿದ್ದಾರೆ, ಕ್ಯಾಬಿನೆಟ್ ಪುನರ್ರಾಚನೆಗೆ ಕೇಂದ್ರ ನಾಯಕತ್ವದ ಅನುಮತಿ ಪಡೆಯಲು ಸಿಎಂ ಬಯಸುತ್ತಿದ್ದಾರೆ. ಸಂಪುಟ ಪುನರ್ರಾಚನೆ ಫಲಿತಾಂಶ ಈ ಚರ್ಚೆಯ ನಂತರ ನಿರ್ಧಾರವಾಗಲಿದೆ.
ಪ್ರಧಾನ ಮಂತ್ರಿಯವರ ಭೇಟಿಯ ನಂತರ, ಕರ್ನಾಟಕದಿಂದ ಹೊಸದಾಗಿ ನೇಮಕಗೊಂಡ ಕೇಂದ್ರ ಸಚಿವರಾದ, ಶೋಭಾ ಕರಂದ್ಲಾಜೆ, ರಾಜೀವ್ ಚಂದ್ರಶೇಖರ್, ಎ ನಾರಾಯಣಸ್ವಾಮಿ ಮತ್ತು ಭಗವಂತ್ ಖುಬಾ ಅವರು ಕರ್ನಾಟಕ ಭವನದಲ್ಲಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ ನಾಳೆ ಅಧಿಕ ಮಾಹಿತಿ ನೀಡುತ್ತೇನೆ ಎಂದು ತಿಳಿಸಿದರು. ಶನಿವಾರ ಸಿಎಂ ಬೆಂಗಳೂರಿಗೆ ಆಗಮಿಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


