ಯಾರು ಹಿತವರು ಮೂವರೊಳಗೆ? ಬಿಎಲ್ ಸಂತೋಷ್, ಸಿಟಿ ರವಿ, ಜೋಶಿ; ಯಡಿಯೂರಪ್ಪ ಹಾಟ್ ಫೆವರಿಟ್ ಬೊಮ್ಮಾಯಿ!
ಜುಲೈ 26ಕ್ಕೆ ಮುಖ್ಯಮಂತ್ರಿ ಹುದ್ದೆ ಬದಲಾವಣೆಯಾಗುತ್ತದೆ ಎಂಬ ಸುದ್ದಿಗಳು ಹರಿದಾಡುತ್ತಿದ್ದು, ಕೇಂದ್ರ ನಾಯಕರು ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡುತ್ತಾರೋ ಇಲ್ಲವೋ ಎಂಬುದು ಕೇಂದ್ರ ಬಿಜೆಪಿ ನಾಯಕರ ನಿರ್ಧಾರದ ಮೇಲೆ ಅವಲಂಬಿತವಾಗಿದೆ.

ಬೆಂಗಳೂರು: ಜುಲೈ 26ಕ್ಕೆ ಮುಖ್ಯಮಂತ್ರಿ ಹುದ್ದೆ ಬದಲಾವಣೆಯಾಗುತ್ತದೆ ಎಂಬ ಸುದ್ದಿಗಳು ಹರಿದಾಡುತ್ತಿದ್ದು, ಕೇಂದ್ರ ನಾಯಕರು ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡುತ್ತಾರೋ ಇಲ್ಲವೋ ಎಂಬುದು ಕೇಂದ್ರ ಬಿಜೆಪಿ ನಾಯಕರ ನಿರ್ಧಾರದ ಮೇಲೆ ಅವಲಂಬಿತವಾಗಿದೆ.
ಕೇಂದ್ರ ನಾಯಕರುಗಳ ಜೊತೆ ಸಿಎಂ ಯಡಿಯೂರಪ್ಪ ಕೂಡ ತಮ್ಮ ಉತ್ತರಾಧಿಕಾರಿಯ ಆಯ್ಕೆ ಬಗ್ಗೆ ಚಿಂತಿಸುತ್ತಿದ್ದಾರೆ. ಕಳೆದ ಎರಡು ದಿನಗಳಿಂದ ಹಲವು ಮಠಾಧೀಶರು ಸಿಎಂ ಯಡಿಯೂರಪ್ಪ ಪರ ಬ್ಯಾಟಿಂಗ್ ಮಾಡುತ್ತಿದ್ದಾರೆ.
ಒಂದು ವೇಳೆ ತಾವು ಸಿಎಂ ಸ್ಥಾನದಿಂದ ಕೆಳಗಿಳಿದರೇ ತಮ್ಮ ಹುದ್ದೆಗೆ ಯಾರು ಸೂಕ್ತರು ಎಂಬುದನ್ನು ಯಡಿಯೂರಪ್ಪ ಚಿಂತಿಸುತ್ತಿದ್ದಾರೆ. ಮೂಲಗಳ ಪ್ರಕಾರ ಬಸವರಾಜ ಬೊಮ್ಮಾಯಿ ಅವರನ್ನು ಸಿಎಂ ಮಾಡಲು ಯಡಿಯೂರಪ್ಪ ಆಸಕ್ತಿ ತೋರಿದ್ದಾರೆ ಎಂದು ತಿಳಿದು ಬಂದಿದೆ. ಇವರ ಜೊತೆಗೆ ಪ್ರಹ್ಲಾದ್ ಜೋಶಿ, ಮುರುಗೇಶ್ ನಿರಾಣಿ ಮತ್ತು ಸಿಟಿ ರವಿ ಹೆಸರುಗಳು ಕೇಳಿ ಬರುತ್ತಿವೆ.
ಜಾತಿ, ವಿದ್ಯಾರ್ಹತೆ, ಆಡಳಿತಾತ್ಮಕ ದೃಷ್ಟಿಯಿಂದ ಕೇಂದ್ರ ನಾಯಕರು ಮತ್ತು ಆರ್ ಎಸ್ ಎಸ್ ನಾಯಕರ ಒಮ್ಮದ ಅಭ್ಯರ್ಥಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಬಿಎಲ್ ಸಂತೋಷ್ ಅವರ ಹೆಸರು ಕೇಳಿ ಬರುತ್ತಿದೆಯಾದರೂ ಯಡಿಯೂರಪ್ಪ ಜೊತೆಗಿನ ಭಿನ್ನಾಭಿಪ್ರಾಯ ಮತ್ತು ಉತ್ತರ ಪ್ರದೇಶ ವಿಧಾನ ಸಭೆ ಚುನಾವಣೆ ಹಿನ್ನೆಲೆಯಲ್ಲಿ ಸಂತೋಷ್ ಗೆ ಸಿಎಂ ಹುದ್ದೆ ನೀಡುವುದು ಅನುಮಾನವಾಗಿದೆ.
ಪ್ರಹ್ಲಾದ್ ಜೋಶಿ ಅವರ ಹೆಸರು ಕೇಳಿ ಬರುತ್ತಿದ್ದರೂ ಸಂಸತ್ತಿನಲ್ಲಿ ಅವರ ಉಪಸ್ಥಿತಿ ಬಿಜೆಪಿಗೆ ಮುಖ್ಯವಾಗಿದೆ, ಕರ್ನಾಟಕದ ಆರು ಮಂತ್ರಿಗಳಿದ್ದು, ಪ್ರಹ್ಲಾದ್ ಜೋಶಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಕರ್ನಾಟಕದ ರಾಜ್ಯ ಸಭೆ ಸದಸ್ಯರಾಗಿದ್ದಾರೆ, ಜೋಶಿ ಮಾತ್ರ ಕೇಂದ್ರ ಸಂಪುಟ ದರ್ಜೆ ಪಡೆದಿರುವ ಏಕೈಕ ಲೋಕಸಭಾ ಸದಸ್ಯರಾಗಿದ್ದಾರೆ.
ಜೋಷಿ ಬ್ರಾಹ್ಮಣ ಸಮುದಾಯದವರಾಗಿದ್ದು, ಅವರಿಗೆ ಸ್ಥಾನ ನೀಡಲಾಗದು, ಏಕೆಂದರೆ ಯಡಿಯೂರಪ್ಪ ಲಿಂಗಾಯತ ಸಮುದಾಯದವರಾಗಿದ್ದಾರೆ, ಲಿಂಗಾಯತ ಮಠಾದೀಶರು ತಮ್ಮ ಸಮುದಾಯದವರನ್ನೇ ಸಿಎಂ ಮಾಡಬೇಕೆಂದು ಒತ್ತಡ ಹೇರುತ್ತಿದ್ದಾರೆ. ಹೀಗಾಗಿ ಮುರುಗೇಶ್ ನಿರಾಣಿ ಯಡಿಯೂರಪ್ಪ ಅವರ ಉತ್ತರಾಧಿಕಾರಿ ಎಂದೇ ಹೇಳಲಾಗುತ್ತಿದೆ.
ಒಕ್ಕಲಿಗ ಮುಖಂಡ ಸಿಟಿ ರವಿ ಹಿಂದೂ ಮುಖಂಡರಾಗಿದ್ದು, ರವಿ ಆಯ್ಕೆ ಸೂಕ್ತವಾಗಿದೆ ಎಂದು ಮೂಲಗಳು ತಿಳಿಸಿವೆ, ಜಾತಿ ಸಮೀಕರಣಗಳನ್ನು ಸಮತೋಲನಗೊಳಿಸಲು ಇತರ ಸಮುದಾಯಗಳ ಡಿಸಿಎಂಗಳನ್ನು ನೇಮಿಸಬಹುದು ಎನ್ನಲಾಗಿದೆ. ಸಿಎಂ ಹುದ್ದೆಗೆ ಹಲವು ಹೆಸರುಗಳು ಕೇಳಿ ಬರುತ್ತಿವೆ, ಆದರೆ ಕೇಂದ್ರ ನಾಯಕರ ಫಾರ್ಮುಲ ಏನಿದೆ ಎಂಬುದು ಯಾರಿಗೂ ತಿಳಿಯದ ಕಾರಣ ಅಚ್ಚರಿಗೊಳಿಸುವ ಅಭ್ಯರ್ಥಿ ಆಯ್ಕೆ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


