ನನಗೆ ಏನೂ ಗೊತ್ತಿಲ್ಲ, ಹಿರಿಯ ಮುಖಂಡರು ನಿರ್ಧಾರ ತೆಗೆದುಕೊಳ್ಳುತ್ತಾರೆ- ಮುರುಗೇಶ್ ನಿರಾಣಿ
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಬದಲಾವಣೆ ಬಗ್ಗೆ ಹೈಕಮಾಂಡ್ ನಿಂದ ಇದುವರೆಗೂ ಯಾವುದೇ ಸಂದೇಶ ಬಂದಿಲ್ಲ. ಈ ನಡುವೆ ಸಚಿವ ಮುರುಗೇಶ್ ನಿರಾಣಿ ಅವರ ದಿಢೀರ್ ದೆಹಲಿ ಭೇಟಿ ತೀವ್ರ ಕುತೂಹಲ ಮೂಡಿಸಿದೆ.

ನವದೆಹಲಿ: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಬದಲಾವಣೆ ಬಗ್ಗೆ ಹೈಕಮಾಂಡ್ ನಿಂದ ಇದುವರೆಗೂ ಯಾವುದೇ ಸಂದೇಶ ಬಂದಿಲ್ಲ. ಈ ನಡುವೆ ಸಚಿವ ಮುರುಗೇಶ್ ನಿರಾಣಿ ಅವರ ದಿಢೀರ್ ದೆಹಲಿ ಭೇಟಿ ತೀವ್ರ ಕುತೂಹಲ ಮೂಡಿಸಿದೆ. ಅಲ್ಲದೆ ಇನ್ನೊಂದೆಡೆ ಹೈಕಮಾಂಡ್ ಬುಲಾವ್ ಕೊಟ್ಟಿದೆಯಾ? ಅಥವಾ ಸ್ವಯಂ ದೆಹಲಿಗೆ ಹೊರಟ್ರಾ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ.
ದೆಹಲಿಯ ಕರ್ನಾಟಕ ಭವನದಿಂದ ಭಾನುವಾರ ರಾತ್ರಿ ಕಾರಿನಲ್ಲಿ ಹೊರಟ ಮುರುಗೇಶ್ ನಿರಾಣಿ ಅವರನ್ನು ಮುಖ್ಯಮಂತ್ರಿ ಹುದ್ದೆಯ ರೇಸ್ ನಲ್ಲಿದ್ದೀರಾ?ಎಂದು ಸುದ್ದಿಗಾರರು ಪ್ರಶ್ನಿಸಿದಾಗ, ನನಗೆ ಏನೂ ಗೊತ್ತಿಲ್ಲ, ನಾನು ಈ ಬಗ್ಗೆ ಯಾರನ್ನೂ ಕೇಳಿಲ್ಲ, ಹಿರಿಯ ಮುಖಂಡರು ನಿರ್ಧಾರ ಕೈಗೊಳ್ಳುತ್ತಾರೆ. ಕೆಲ ವೈಯಕ್ತಿಕ ಕೆಲಸಕ್ಕಾಗಿ ಇಲ್ಲಿಗೆ ಬಂದಿರುವುದಾಗಿ ತಿಳಿಸಿದರು.
ಈ ಹಿಂದೆ ಕೂಡಾ ಮುಖ್ಯಮಂತ್ರಿ ರೇಸ್ ನಲ್ಲಿ ಮುರುಗೇಶ್ ನಿರಾಣಿ ಹೆಸರು ಕೇಳಿ ಬಂದಿತ್ತು. ಆದರೆ, ನಾನು ಸಿಎಂ ರೇಸ್ ನಲ್ಲಿ ಇಲ್ಲ. ನಾನು ಪಕ್ಷದ ಶಿಸ್ತಿನ ಸಿಪಾಯಿ ಹೈಕಮಾಂಡ್ ನನಗೆ ಕೊಟ್ಟ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಲಿದ್ದೇನೆ. ಅಲ್ಲದೆ ಯಡಿಯೂರಪ್ಪನವರೆ ಮುಂದಿನ ಎರಡು ವರ್ಷ ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಹೇಳಿದ್ದರು.
ಆದಾಗ್ಯೂ, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬದಲಾವಣೆ ಕುರಿತು ಊಹಾಪೋಹಗಳ ನಡುವೆ ಮುರುಗೇಶ್ ನಿರಾಣಿ ಏಕಾಏಕಿ ದೆಹಲಿ ಭೇಟಿ ತೀವ್ರ ರೀತಿಯ ಕುತೂಹಲಕ್ಕೆ ಕಾರಣವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


