ರಾಜಕೀಯ

ನಾಯಕತ್ವ ಬದಲಾವಣೆ ವಿಚಾರ ಕೇವಲ ಊಹಾಪೋಹವಷ್ಟೇ: ಸಚಿವ ಬಸವರಾಜ ಬೊಮ್ಮಾಯಿ

ನಾಯಕತ್ವ ಬದಲಾವಣೆ ವಿಚಾರ ಕೇವಲ ಊಹಾಪೋಹವಷ್ಟೇ, ಯಾವುದೂ ಅಧಿಕೃತವಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ಭಾನುವಾರ ಹೇಳಿದ್ದಾರೆ.

ನಾಯಕತ್ವ ಬದಲಾವಣೆ ವಿಚಾರ ಕೇವಲ ಊಹಾಪೋಹವಷ್ಟೇ: ಸಚಿವ ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ
Published On :

ಬೆಂಗಳೂರು: ನಾಯಕತ್ವ ಬದಲಾವಣೆ ವಿಚಾರ ಕೇವಲ ಊಹಾಪೋಹವಷ್ಟೇ, ಯಾವುದೂ ಅಧಿಕೃತವಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ಭಾನುವಾರ ಹೇಳಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನಾಯಕತ್ವ ಬದಲಾವಣೆ ವಿಚಾರ ಕೇವಲ ಊಹಾಪೋಹವಷ್ಟೇ, ಯಾವುದೂ ಅಧಿಕೃತವಲ್ಲ ನಾಯಕತ್ವದ ಬದಲಾವಣೆ ಪ್ರಶ್ನೆಗಳಿಗೆ‌ ನಾನು ಉತ್ತರ ನೀಡುವುದಿಲ್ಲ. ಸಿಎಂ ಹುದ್ದೆ ನನ್ನ ಹೆಸರು ಕೇಳಿ ಬರುತ್ತಿರೋದು ಕೂಡ ಊಹಾಪೋಹವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. 

ಪಕ್ಷದ ಹೈಕಮಾಂಡ‌ ಹೇಳಿದನ್ನು ಪಾಲಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಸ್ಪಷ್ಟವಾಗಿ ಹೇಳಿದ್ದಾರೆ. ಭಾರೀ ಮಳೆಯಿಂದಾಗಿ ರಾಜ್ಯದ ಜನ ಸಂಕಷ್ಟದಲ್ಲಿದ್ದಾರೆ.ಸದ್ಯದ ಪರಿಸ್ಥಿಯಲ್ಲಿ ನಮ್ಮ ಆದ್ಯತೆ ಪ್ರವಾಹದ ಕಡೆಯಾಗಿದೆ ಎಂದು ತಿಳಿಸಿದ್ದಾರೆ.

ಮಠಾಧೀಶರು ಸಭೆ ಕುರಿತು ಮಾತನಾಡಿ, ಕಳೆದು ಒಂದು ವಾರದಿಂದ ಸ್ವಾಮೀಜಿಗಳು ಭೇಟಿಯಾಗುತ್ತಿದ್ದಾರೆ. ಅದರ ಮುಂದುವರೆದ ಭಾಗವಾಗಿ ಇಂದು ಬೆಂಗಳೂರಿನಲ್ಲಿ ಮಠಾಧೀಶರು ಸಭೆ ಕರೆದಿದ್ದಾರೆ ಅಷ್ಟೇ ಎಂದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.