ಪ್ರಧಾನಿ ನಾಯಕತ್ವದಡಿ ಬೊಮ್ಮಾಯಿ ದಕ್ಷತೆಯಿಂದ ಕೆಲಸ- ಯಡಿಯೂರಪ್ಪ
ಭಾರತೀಯ ಜನತಾ ಪಕ್ಷದ ಶಾಸಕಾಂಗ ಸಭೆಯಲ್ಲಿ ಬಸವರಾಜ ಬೊಮ್ಮಾಯಿ ಅವರನ್ನು ಸರ್ವಾನುಮತದಿಂದ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ ಎಂದು ನಿರ್ಗಮಿತ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದರು.

ಬೆಂಗಳೂರು: ಭಾರತೀಯ ಜನತಾ ಪಕ್ಷದ ಶಾಸಕಾಂಗ ಸಭೆಯಲ್ಲಿ ಬಸವರಾಜ ಬೊಮ್ಮಾಯಿ ಅವರನ್ನು ಸರ್ವಾನುಮತದಿಂದ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ ಎಂದು ನಿರ್ಗಮಿತ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದರು.
ಬಸವರಾಜ ಬೊಮ್ಮಾಯಿ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಬಲಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಡಿಯಲ್ಲಿ ಬೊಮ್ಮಾಯಿ ದಕ್ಷತೆಯಿಂದ ಕೆಲಸ ನಿರ್ವಹಿಸಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಸಿಎಂ ಯಡಿಯೂರಪ್ಪ ಅವರ ರಾಜೀನಾಮೆಯಿಂದ ತೆರವುಗೊಂಡಿದ್ದ ಮುಖ್ಯಮಂತ್ರಿಯ ಸ್ಥಾನಕ್ಕೆ ಹಾವೇರಿ ಜಿಲ್ಲೆಯ ಶಿಗ್ಗಾಂವ ಶಾಸಕ, ಮಾಜಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಜು.27 ರಂದು ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ.
ಎಲ್ಲಾ ಶಾಸಕರ ಒಮ್ಮತದ ನಿರ್ಧಾರ. ಬಸವರಾಜ್ ಬೊಮ್ಮಾಯಿ ಅವರಿಗೆ ಪಕ್ಷದ ಒಳಗಡೆ ಮಾತ್ರವಲ್ಲದೇ ಹೊರಗಡೆಯೂ ಗೌರವವಿದೆ. ಅವರು ನಾಳೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮಾಜಿ ಸಚಿವ ಡಾ. ಕೆ. ಸುಧಾಕರ್ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


