ಇಂದು ಸಂಜೆ ಬಿಜೆಪಿ ಶಾಸಕಾಂಗ ಸಭೆ: ಇಂದೇ ನೂತನ ಸಿಎಂ ಆಯ್ಕೆ ಸಾಧ‍್ಯತೆ
ಮಹತ್ವದ ಬೆಳವಣಿಗೆಯೊಂದರಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯನ್ನು ಮಂಗಳವಾರ ಸಂಜೆ 7 ಗಂಟೆಗೆ ಕರೆಯಲಾಗಿದೆ. ಇಂದೇ ರಾಜ್ಯದ ನೂತನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯನ್ನು ಮಂಗಳವಾರ ಸಂಜೆ 7 ಗಂಟೆಗೆ ಕರೆಯಲಾಗಿದೆ. ಇಂದೇ ರಾಜ್ಯದ ನೂತನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ಹಿನ್ನಲೆಯಲ್ಲಿ ಬಿಜೆಪಿ ವರಿಷ್ಠರು ಇಂದು ಸಂಜೆ ಖಾಸಗಿ ಹೊಟೇಲ್ ವೊಂದರಲ್ಲಿ ಬಿಜೆಪಿ ಶಾಸಕಾಂಗ ಸಭೆ ಕರೆದಿದ್ದಾರೆಂದು ತಿಳಿದುಬಂದಿದೆ.
ಇಂದು ಸಂಜೆ 7.30 ಕ್ಕೆ ಬಿಜೆಪಿ ಶಾಸಕಾಂಗ ಸಭೆ ನಿಗದಿಯಾಗಿದ್ದು, ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕ ಹಾಗೂ ಸಿಎಂ ಆಯ್ಕೆ ಬಗ್ಗೆ ಕೇಂದ್ರದ ಬಿಜೆಪಿ ವೀಕ್ಷಕರು ಶಾಸಕರ ಅಭಿಪ್ರಾಯ ಸಂಗ್ರಹಿಸಿ ವರದಿಯನ್ನು ಕೇಂದ್ರದ ವರಿಷ್ಠರಿಗೆ ಸಲ್ಲಿಸಲಿದ್ದಾರೆಂದು ಹೇಳಲಾಗುತ್ತಿದೆ.
ನೂತನ ಮುಖ್ಯಮಂತ್ರಿ ಆಯ್ಕೆ ಮಾಡುವ ನಿಟ್ಟಿನಲ್ಲಿ ಹೈಕಮಾಂಡ್ ನೇಮಕ ಮಾಡಿರುವ ವೀಕ್ಷಕ ಧರ್ಮೆಂದ್ರ ಪ್ರಧಾನ್ ಹಾಗೂ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಕೆಲ ಹೊತ್ತಿನಲ್ಲಿ ದೆಹಲಿಯಿಂದ ಬೆಂಗಳೂರಿಗೆ ಬಂದಿಳಿಯಲಿದ್ದಾರೆ.
ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಂದಿನ ಮುಖ್ಯಮಂತ್ರಿ ಯಾರು ಎಂಬುದನ್ನು ಶಾಸಕರಿಗೆ ವೀಕ್ಷಕರು ತಿಳಿಸಲಿದ್ದಾರೆ. ಆ ಬಳಿಕ ನೂತನ ಶಾಸಕಾಂಗ ಪಕ್ಷದ ನಾಯಕನ ಹೆಸರನ್ನು ಹಿರಿಯ ಶಾಸಕರು ಅನುಮೋದಿಸಲಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


