ಯಡಿಯೂರಪ್ಪನವರು ನಮ್ಮ ಸರ್ವಶ್ರೇಷ್ಠ ನಾಯಕರು, ಇಲ್ಲಿ ಯಾವುದೇ ಬಣ ಇಲ್ಲ: ನಳಿನ್ ಕುಮಾರ್ ಕಟೀಲು
ಬಿಜೆಪಿಯಲ್ಲಿ ವಲಸಿಗರು, ಮೂಲ ನಾಯಕರು ಎಂಬ ಪ್ರಶ್ನೆ ಉದ್ಭವಿಸುವುದಿಲ್ಲ. ಪಕ್ಷಕ್ಕೆ ಬಂದು ಚುನಾವಣೆಯಲ್ಲಿ ನಿಂತು ಗೆದ್ದ ನಂತರ ಅವರು ಬಿಜೆಪಿ ಪಕ್ಷದವರು, ಎಲ್ಲರೂ ಒಂದೇ ಕುಟುಂಬದಂತೆ, ಹೀಗಾಗಿ ಸಂಪುಟ ರಚನೆ ವೇಳೆ ಪ್ರಾದೇಶಿಕ ಮತ್ತು ಸಾಮಾಜಿಕ ನ್ಯಾಯವನ್ನು ಪರಿಶೀಲಿಸಿ ಸಂಪುಟದಲ್ಲಿ ಸಚಿವ ಸ್ಥಾನ ನೀಡಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ತಿಳ

ಬೆಂಗಳೂರು: ಬಿಜೆಪಿಯಲ್ಲಿ ವಲಸಿಗರು, ಮೂಲ ನಾಯಕರು ಎಂಬ ಪ್ರಶ್ನೆ ಉದ್ಭವಿಸುವುದಿಲ್ಲ. ಪಕ್ಷಕ್ಕೆ ಬಂದು ಚುನಾವಣೆಯಲ್ಲಿ ನಿಂತು ಗೆದ್ದ ನಂತರ ಅವರು ಬಿಜೆಪಿ ಪಕ್ಷದವರು, ಎಲ್ಲರೂ ಒಂದೇ ಕುಟುಂಬದಂತೆ, ಹೀಗಾಗಿ ಸಂಪುಟ ರಚನೆ ವೇಳೆ ಪ್ರಾದೇಶಿಕ ಮತ್ತು ಸಾಮಾಜಿಕ ನ್ಯಾಯವನ್ನು ಪರಿಶೀಲಿಸಿ ಸಂಪುಟದಲ್ಲಿ ಸಚಿವ ಸ್ಥಾನ ನೀಡಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ತಿಳಿಸಿದ್ದಾರೆ.
ಬೆಂಗಳೂರಿನ ರಾಜಭವನದಲ್ಲಿ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಪ್ರಮಾಣವಚನ ಸ್ವೀಕಾರ ಸಮಾರಂಭ ಮುಗಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಯಾಗಿರುವುದು ಪಕ್ಷದಲ್ಲಿ ಎಲ್ಲರಿಗೂ ಖುಷಿಯ ವಿಚಾರ. ನಾನು ಮತ್ತು ಬೊಮ್ಮಾಯಿ ಸ್ನೇಹಿತರು, ಪಕ್ಷದ ಸೂಚನೆಯಂತೆ ಇನ್ನು ಮುಂದೆಯೂ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುತ್ತೇವೆ ಎಂದರು.
ಸಚಿವ ಸಂಪುಟ ರಚನೆ ಬಗ್ಗೆ ವರಿಷ್ಠರಲ್ಲಿ ಚರ್ಚಿಸಿ ಇನ್ನೊಂದು ವಾರದಲ್ಲಿಯೇ ಮಾಡಲಾಗುವುದು ಎಂದು ಸಹ ಇದೇ ಸಂದರ್ಭದಲ್ಲಿ ಕಟೀಲು ತಿಳಿಸಿದರು.
ಯಡಿಯೂರಪ್ಪನವರು ಸರ್ವಶ್ರೇಷ್ಠ ನಾಯಕರು: ಬಿ ಎಸ್ ಯಡಿಯೂರಪ್ಪನವರು ನಮ್ಮೆಲ್ಲರ ಸರ್ವಸಮ್ಮತ ಸರ್ವಶ್ರೇಷ್ಠ ನಾಯಕರು, ಅವರ ಮಾರ್ಗದರ್ಶನದಡಿಯಲ್ಲಿ ನಾವೆಲ್ಲರೂ ಮುಂದೆ ಸಾಗುತ್ತೇವೆ. ಯಡಿಯೂರಪ್ಪನವರ ಬಣ, ಮೂಲ ಮತ್ತು ವಲಸಿಗರ ಬಣವೆಂಬುದು ಇಲ್ಲ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


