ರಾಜಕೀಯ

ಕರ್ನಾಟಕದ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆ; ಕರ್ನಾಟಕ ಸೇರಿ 5 ರಾಜ್ಯದಲ್ಲಿ ಸಿಎಂ ಮಕ್ಕಳೇ ಸಿಎಂ!!

ಬಿಎಸ್ ಯಡಿಯೂರಪ್ಪ ರಾಜಿನಾಮೆಯಿಂದಾಗಿ ತೆರವಾಗಿದ್ದ ಮುಖ್ಯಮಂತ್ರಿ ಸ್ಥಾನಕ್ಕೆ ಮಾಜಿ ಸಿಎಂ ಎಸ್ ಆರ್ ಬೊಮ್ಮಾಯಿ ಅವರ ಪುತ್ರ ಬಸವರಾಜ ಬೊಮ್ಮಾಯಿ ಅವರು ಆಯ್ಕೆಯಾಗಿದ್ದು, ಆ ಮೂಲಕ ದೇಶದಲ್ಲಿ ಕರ್ನಾಟಕ ಸೇರಿ 5 ರಾಜ್ಯದಲ್ಲಿ ಮಾಜಿ ಸಿಎಂಗಳ ಮಕ್ಕಳೇ ಮುಖ್ಯಮಂತ್ರಿಯಾದಂತಾಗಿದೆ.

ಕರ್ನಾಟಕದ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆ; ಕರ್ನಾಟಕ ಸೇರಿ 5 ರಾಜ್ಯದಲ್ಲಿ ಸಿಎಂ ಮಕ್ಕಳೇ ಸಿಎಂ!!
ಎಸ್ ಆರ್ ಬೊಮ್ಮಾಯಿ ಮತ್ತು ಬಸವರಾಜ ಬೊಮ್ಮಾಯಿ
Published On :

ಬೆಂಗಳೂರು: ಬಿಎಸ್ ಯಡಿಯೂರಪ್ಪ ರಾಜಿನಾಮೆಯಿಂದಾಗಿ ತೆರವಾಗಿದ್ದ ಮುಖ್ಯಮಂತ್ರಿ ಸ್ಥಾನಕ್ಕೆ ಮಾಜಿ ಸಿಎಂ ಎಸ್ ಆರ್ ಬೊಮ್ಮಾಯಿ ಅವರ ಪುತ್ರ ಬಸವರಾಜ ಬೊಮ್ಮಾಯಿ ಅವರು ಆಯ್ಕೆಯಾಗಿದ್ದು, ಆ ಮೂಲಕ ದೇಶದಲ್ಲಿ ಕರ್ನಾಟಕ ಸೇರಿ 5 ರಾಜ್ಯದಲ್ಲಿ ಮಾಜಿ ಸಿಎಂಗಳ ಮಕ್ಕಳೇ  ಮುಖ್ಯಮಂತ್ರಿಯಾದಂತಾಗಿದೆ.

ಹೌದು.. ಬಿಎಸ್ ಯಡಿಯೂರಪ್ಪ ಸಂಪುಟದಲ್ಲಿ ಗೃಹ ಸಚಿವರಾಗಿದ್ದ ಬಸವರಾಜ ಬೊಮ್ಮಾಯಿ ಇದೀಗ ರಾಜ್ಯದ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಬಿಜೆಪಿ ಹಿರಿಯ ನಾಯಕ, ಬಸವರಾಜ ಬೊಮ್ಮಾಯಿ ಕರ್ನಾಟಕದ 11ನೇ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದು, ಬೊಮ್ಮಾಯಿ ಅವರು ಮಾಜಿ ಸಿಎಂ ಎಸ್ ಆರ್  ಬೊಮ್ಮಾಯಿ ಪುತ್ರ. ಈ ಮೂಲಕ ಕರ್ನಾಟಕದಲ್ಲಿ ತಂದೆ ಬಳಿಕ ಸಿಎಂ ಸ್ಥಾನ ಅಲಂಕರಿಸಿದ 2ನೇ ಜೋಡಿಯಾಗಿದ್ದು, ಅಲ್ಲದೆ ಭಾರತದ 5 ರಾಜ್ಯಗಳಲ್ಲಿ ಸಿಎಂ ಪುತ್ರರದ್ದೇ ಆಡಳಿತವಾದಂತಾಗಿದೆ.

ಎಚ್ ಡಿ ಕುಮಾರಸ್ವಾಮಿ-ಎಚ್ ಡಿ ದೇವೇಗೌಡ

Story image

ತಂದೆ ಬಳಿಕ ಮಗ ಮುಖ್ಯಮಂತ್ರಿಯಾದ ಕರ್ನಾಟಕದ 2ನೇ ಜೋಡಿ!
ಆಗಸ್ಟ್ 1988 ರಿಂದ ಏಪ್ರಿಲ್ 1989ರ ವರೆಗೆ ಎಸ್ ಆರ್ ಬೊಮ್ಮಾಯಿ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ್ದರು. ಇದೀಗ ಅವರ ಪುತ್ರ ಬಸವರಾಜ ಬೊಮ್ಮಾಯಿ ಅವರಿಗೆ ಕರ್ನಾಟಕದ ಅಧಿಕಾರದ ಚುಕ್ಕಾಣಿ ನೀಡಲಾಗಿದೆ. ಕರ್ನಾಟಕದಲ್ಲಿ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗುವ  ಮೂಲಕ ಭಾರತದ 5 ರಾಜ್ಯಗಳಲ್ಲಿ ಸಿಎಂ ಪುತ್ರರೇ ಸಿಎಂ ಆಗಿರುವುದು ವಿಶೇಷವಾಗಿದೆ. 

ಎಂಕೆ ಸ್ಟಾಲಿನ್-ಕರುಣಾನಿಧಿ

Story image

ತಮಿಳುನಾಡು
ತಮಿಳುನಾಡಿನಲ್ಲಿ ಸದ್ಯ ಎಂಕೆ ಸ್ಟಾಲಿನ್ ಮುಖ್ಯಮಂತ್ರಿಯಾಗಿದ್ದಾರೆ. ಇತ್ತೀಚೆಗೆ ನಡೆದ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಎಂಕೆ ಸ್ಟಾಲಿನ್ ತಮಿಳುನಾಡು ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಸ್ಟಾಲಿನ್ ತಮಿಳುನಾಡಿನ ಅತ್ಯಂತ ಜನಪ್ರಿಯ, ಪ್ರಭಾವಿ ಮುಖ್ಯಮಂತ್ರಿ, ದಿವಗಂತ ಎಂ ಕರುಣಾನಿಧಿ  ಪುತ್ರ. ಕರುಣಾನಿಧಿ 5 ಬಾರಿ ತಮಿಳುನಾಡು ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ್ದಾರೆ.

ವೈಎಸ್ ರಾಜಶೇಖರ್ ರೆಡ್ಡಿ-ವೈಎಸ್ ಜಗನ್ ಮೋಹನ್ ರೆಡ್ಡಿ

Story image

ಆಂಧ್ರ ಪ್ರದೇಶ
ಆಂಧ್ರ ಪ್ರದೇಶದಲ್ಲಿ ಸದ್ಯ ಜಗನ್ ಮೋಹನ್ ರೆಡ್ಡಿ ಮುಖ್ಯಮಂತ್ರಿಯಾಗಿದ್ದು, ಮೇ 30, 2019ರಲ್ಲಿ ಜಗನ್ ಆಂಧ್ರ ಪ್ರದೇಶ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ಜಗನ್ ಮೋಹನ್ ರೆಡ್ಡಿ ಆಂಧ್ರ ಪ್ರದೇಶ ಕಂಡ ಅತ್ಯಂತ ಯಶಸ್ವಿ ಮುಖ್ಯಮಂತ್ರಿ ಬಿಎಸ್ ರಾಜಶೇಖರ್ ರೆಡ್ಡಿ ಅವರ ಪುತ್ರ. ರಾಜಶೇಖರ್ ರೆಡ್ಡಿ  2004ರಿಂದ 2009ರ ವರೆಗೆ ಎರಡು ಬಾರಿ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ್ದಾರೆ. 

ಬಿಜು ಪಟ್ನಾಯಕ್-ನವೀನ್ ಪಟ್ನಾಯಕ್

Story image


ಒಡಿಶಾ
ಒಡಿಶಾದಲ್ಲಿ ನವೀನ್ ಪಟ್ನಾಯಕ್ ಮುಖ್ಯಮಂತ್ರಿಯಾಗಿ ಆಡಳಿತ ನಡೆಸುತ್ತಿದ್ದು, ನವೀನ್ ಪಟ್ನಾಯಕ್ 5ನೇ ಬಾರಿ ಮುಖ್ಯಮಂತ್ರಿಯಾಗಿ ಆಡಳಿತ ನಡೆಸುತ್ತಿದ್ದಾರೆ. ಇನ್ನು ನವೀನ್ ಪಟ್ನಾಯಕ್ ತಂದೆ ಬಿಜು ಪಟ್ನಾಯಕ್ 1961-1963 ಹಾಗೂ 1990-95ರಲ್ಲಿ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ್ದರು.

ಶಿಬು ಸೊರೇನ್-ಹೇಮಂತ್ ಸೊರೇನ್

Story image


ಜಾರ್ಖಂಡ್
ಜಾರ್ಖಂಡ್ ರಾಜ್ಯದ ಮುಖ್ಯಮಂತ್ರಿ ಹೇಮಂತ್ ಸೊರೇನ್ 2ನೇ ಬಾರಿಗೆ ಸಿಎಂ ಆಗಿ ಆಡಳಿತ ನಡೆಸುತ್ತಿದ್ದು, 2ನೇ ಅವಧಿ 2019ರಲ್ಲಿ ಆರಂಭಗೊಂಡಿದೆ. ಹೇಮಂತ್ ಸೊರೇನ್ ತಂದೆ ಶಿಬು ಸೊರೆನ್ 2 ಬಾರಿ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ್ದರು.

ಅಷ್ಟೇ ಅಲ್ಲ ಅಪ್ಪ-ಮಕ್ಕಳು ಸಿಎಂ ಆಗಿರುವುದು ಉದಾಹರಣೆಗಳು ಇನ್ನೂ ಸಾಕಷ್ಟಿವೆ. ಕರ್ನಾಟಕದಲ್ಲಿ ಹೆಚ್ ಡಿ ದೇವೇಗೌಡ ಹಾಗೂ ಹೆಚ್ ಡಿ ಕುಮಾರಸ್ವಾಮಿ, ಉತ್ತರ ಪ್ರದೇಶದಲ್ಲಿ ಮುಲಾಯಂ ಸಿಂಗ್ ಯಾದವ್ ಹಾಗೂ ಅಖಿಲೇಶ್ ಯಾದವ್, ಜಮ್ಮು ಕಾಶ್ಮೀರದಲ್ಲಿ ಫಾರುಖ್ ಅಬ್ದುುಲ್ಲಾ ಹಾಗೂ ಓಮರ್  ಅಬ್ದುಲ್ಲಾ, ಮುಫ್ತಿ ಮೊಹಮ್ಮದ್ ಸಯ್ಯಿದ್ ಹಾಗೂ ಪುತ್ರಿ ಮೆಹಬೂಬಾ ಮುಫ್ತಿ ಸಿಎಂ ಆಗಿ ಆಡಳಿತ ನಡೆಸಿದ್ದರು.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.