ರಾಜಕೀಯ

ಪ್ರಧಾನಿ ನರೇಂದ್ರ ಮೋದಿ ಭೇಟಿ ಬಳಿಕವೇ ನೂತನ ಸಂಪುಟ ರಚನೆ: ಆರ್.ಅಶೋಕ್

ಸಚಿವ ಸಂಪುಟ ರಚನೆ ಸಂಬಂಧ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಲಿದ್ದು, ಪ್ರಧಾನಿ ಭೇಟಿ ಬಳಿಕವೇ ಸಂಪುಟ ರಚನೆಯಾಗಲಿದೆ ಎಂದು ಮಾಜಿ ಸಚಿವ ಆರ್.ಅಶೋಕ್ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಭೇಟಿ ಬಳಿಕವೇ ನೂತನ ಸಂಪುಟ ರಚನೆ: ಆರ್.ಅಶೋಕ್
ಆರ್.ಅಶೋಕ್
Published On :

ಬೆಂಗಳೂರು: ಸಚಿವ ಸಂಪುಟ ರಚನೆ ಸಂಬಂಧ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಲಿದ್ದು, ಪ್ರಧಾನಿ ಭೇಟಿ ಬಳಿಕವೇ ಸಂಪುಟ ರಚನೆಯಾಗಲಿದೆ ಎಂದು ಮಾಜಿ ಸಚಿವ ಆರ್.ಅಶೋಕ್ ಹೇಳಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಹುಶಃ ಒಂದು ವಾರದಲ್ಲಿಯೇ ಸಂಪುಟ ರಚನೆ ಆಗಬಹುದು ಎಂದರು. ಹಿರಿಯರನ್ನ ಕೈಬಿಟ್ಟು ಹೊಸಬರಿಗೆ ಅವಕಾಶ ನೀಡುವ ಬಗ್ಗೆ ನಮ್ಮ ಪಕ್ಷದಲ್ಲಿ ಈ ರೀತಿಯ ಯಾವುದೇ ನಿಯಮಗಳಿಲ್ಲ. ಹಿರಿತನವನ್ನು ನೋಡಿ ಸಚಿವ ಸ್ಥಾನ ನೀಡಲಿದ್ದಾರೆ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಬಸವರಾಜ ಬೊಮ್ಮಾಯಿ ಅವರು ದೆಹಲಿಯಿಂದ ಮರಳಿದ ನಂತರವೇ ಸಂಪುಟ ರಚನೆ ಪ್ರಕ್ರಿಯೆ ಆರಂಭವಾಗಲಿದೆ ಎಂದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.