ನನ್ನ ವೈಯಕ್ತಿಕ ಕೆಲಸಕ್ಕಾಗಿ ದೆಹಲಿಗೆ ಹೋಗಿದ್ದೆ, ಈ ರೀತಿಯ ಸುದ್ದಿಗಳು ಏಕೆ ಸೃಷ್ಟಿಯಾಗುತ್ತವೆ: ವಿಜಯೇಂದ್ರ
ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ದೆಹಲಿ ಭೇಟಿ ಬಗ್ಗೆ ಹಲವು ಊಹಾ ಪೋಹಗಳು ಎದ್ದಿದ್ದವು. ಇದಕ್ಕೆಲ್ಲಾ ಸ್ವತಃ ವಿಜಯೇಂದ್ರ ಅವರೇ ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರು: ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ದೆಹಲಿ ಭೇಟಿ ಬಗ್ಗೆ ಹಲವು ಊಹಾ ಪೋಹಗಳು ಎದ್ದಿದ್ದವು. ಇದಕ್ಕೆಲ್ಲಾ ಸ್ವತಃ ವಿಜಯೇಂದ್ರ ಅವರೇ ಸ್ಪಷ್ಟನೆ ನೀಡಿದ್ದಾರೆ.
ನಾನು ದೆಹಲಿಗೆ ಹೋಗಿದ್ದು ನನ್ನ ವೈಯಕ್ತಿಕ ಕೆಲಸಕ್ಕಾಗಿ, ಏತಕ್ಕಾಗಿ ಇಂತಹ ಸುದ್ದಿಗಳು ಸೃಷ್ಟಿಯಾಗುತ್ತವೋ ನನಗೆ ತಿಳಿದಿಲ್ಲ. ನನ್ನ ವಯಕ್ತಿಕ ಕೆಲಸಕ್ಕಾಗಿ ನಾನು ನಿರಂತರವಾಗಿ ದೆಹಲಿಗೆ ಹೋಗುತ್ತಿರುತ್ತೇನೆ, ನಾನು ದೆಹಲಿಗೆ ಹೋದಾಗಲೆಲ್ಲಾ ಪಕ್ಷದ ಮುಖಂಡರನ್ನು ಭೇಟಿ ಮಾಡುತ್ತೇನೆ ಎಂದು ಅರ್ಥವಲ್ಲ, ನಾನು ಯಾವ ನಾಯಕರ ಅಪಾಯಿಂಟ್ ಮೆಂಟ್ ಪಡೆದಿರಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಕೂಡ ವಿಜಯೇಂದ್ರ ಭೇಟಿಯನ್ನು ನಿರಾಕರಿಸಿದ್ದಾರೆ. ಕರ್ನಾಟಕ ರಾಜಕೀಯ ಬೆಳವಣಿಗೆಗಳ ಸಂಬಂಧಿಸಿದಂತೆ ಯಾವ ಭೇಟಿ ಮತ್ತು ಚರ್ಚೆ ನಡೆದಿಲ್ಲ ಎಂಬುದನ್ನು ಇಬ್ಬರು ನಾಯಕರು ಹೇಳಿದ್ದಾರೆ. ಬುಧವಾರ ವಿಜಯೇಂದ್ರ ಮತ್ತೆ ದೆಹಲಿಗೆ ತೆರಳಿ ಅರುಣ್ ಸಿಂಗ್ ಅವರನ್ನು ಭೇಟಿಯಾಗಲಿದ್ದಾರೆ ಎಂದು ಹೇಳಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


