ರಾಜಕೀಯ

ನಾನು ಸಿಎಂ ಯಡಿಯೂರಪ್ಪನವರ ಬಗ್ಗೆ ಮಾತನಾಡಿದರೆ ವಿವಾದ ಸೃಷ್ಟಿಯಾಗುತ್ತದೆ: ಸಿ.ಪಿ. ಯೋಗೇಶ್ವರ್

ನಾನು ಸಿಎಂ ಯಡಿಯೂರಪ್ಪನವರ ಬಗ್ಗೆ ಹಿಂದೆಯೂ ಮಾತನಾಡಿರಲಿಲ್ಲ, ಈಗಲೂ ಮಾತನಾಡುವುದಿಲ್ಲ, ನಾನು ಸಿಎಂ ಯಡಿಯೂರಪ್ಪನವರ ಬಗ್ಗೆ ಮಾತನಾಡಿದರೆ ಬೆಂಕಿ ಹೊತ್ತಿಕೊಳ್ಳುತ್ತದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ.

ನಾನು ಸಿಎಂ ಯಡಿಯೂರಪ್ಪನವರ ಬಗ್ಗೆ ಮಾತನಾಡಿದರೆ ವಿವಾದ ಸೃಷ್ಟಿಯಾಗುತ್ತದೆ: ಸಿ.ಪಿ. ಯೋಗೇಶ್ವರ್
ಸಿ ಪಿ ಯೋಗೇಶ್ವರ್
Published On :

ರಾಮನಗರ: ನಾನು ಸಿಎಂ ಯಡಿಯೂರಪ್ಪನವರ ಬಗ್ಗೆ ಹಿಂದೆಯೂ ಮಾತನಾಡಿರಲಿಲ್ಲ, ಈಗಲೂ ಮಾತನಾಡುವುದಿಲ್ಲ, ನಾನು ಸಿಎಂ ಯಡಿಯೂರಪ್ಪನವರ ಬಗ್ಗೆ ಮಾತನಾಡಿದರೆ ಬೆಂಕಿ ಹೊತ್ತಿಕೊಳ್ಳುತ್ತದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ.

ಇಂದು ಬೆಳಗ್ಗೆ ರಾಮನಗರದಲ್ಲಿ ಮಾಧ್ಯಮ ಪ್ರತಿನಿಧಿಗಳು ಮುಖ್ಯಮಂತ್ರಿ ಯಡಿಯೂರಪ್ಪನವರು ರಾಜೀನಾಮೆ ಬಗ್ಗೆ ನೀಡಿದ ಹೇಳಿಕೆ ಬಗ್ಗೆ ಕೇಳಿದಾಗ, ನಾನು ರಾಜಕೀಯವಾಗಿ ಮಾತನಾಡುವುದಿಲ್ಲ, ಸಿಎಂ ಬಗ್ಗೆ ಮಾತಾಡಿದ್ರೆ ಬೆಂಕಿ ಹೊತ್ತಿಕೊಳ್ಳುತ್ತದೆ ಎಂದರು.

ಇಂದು ಮುಖ್ಯಮಂತ್ರಿ ಏನು ಹೇಳಿದ್ದಾರೋ ನನಗೆ ಗೊತ್ತಿಲ್ಲ, ನಿಮ್ಮ ಮೂಲಕ ಕೇಳುತ್ತಿದ್ದೇನೆ, ನನಗೆ ಆ ಬಗ್ಗೆ ಸ್ಪಷ್ಟತೆ ಇಲ್ಲ, ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಶಕ್ತಿಮೀರಿ ಕೆಲಸ ಮಾಡುತ್ತಿದ್ದಾರೆ, ಕೋವಿಡ್-19 ನಿರ್ವಹಣೆಯನ್ನು ಚೆನ್ನಾಗಿ ನಿಭಾಯಿಸುತ್ತಿದ್ದಾರೆ ಎಂದರು.

ನಮ್ಮದು ರಾಷ್ಟ್ರೀಯ ಪಕ್ಷ, ಹೀಗಾಗಿ ವರಿಷ್ಠರು ಎಲ್ಲವನ್ನೂ ತೀರ್ಮಾನಿಸುತ್ತಾರೆ. ಯಾರು ಬೇಕು, ಬೇಡವೆಂದು ವರಿಷ್ಠರು ನಿರ್ಧರಿಸುತ್ತಾರೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.