ಪದೇ ಪದೇ ನಾಯಕತ್ವ ಬದಲಾವಣೆ ಮಾತುಗಳಿಂದ ಮುಖ್ಯಮಂತ್ರಿಗಳ ಮನಸ್ಸಿಗೆ ನೋವಾದಂತೆ ಕಂಡುಬರುತ್ತಿದೆ: ಆರ್ ಅಶೋಕ್
ರಾಜ್ಯದಲ್ಲಿ ಕೆಲವು ದಿನಗಳಿಂದ ನಡೆಯುತ್ತಿರುವ ರಾಜಕೀಯ ವಿದ್ಯಮಾನಗಳನ್ನು ನೋಡಿದಾಗ, ಪದೇ ಪದೇ ಸಿಎಂ ನಾಯಕತ್ವ ಬದಲಾವಣೆ ಬಗ್ಗೆ ಕೊರೋನಾ ಕಷ್ಟದ ಸಮಯದಲ್ಲಿ ಕೇಳಿಬರುತ್ತಿರುವಾಗ ಮುಖ್ಯಮಂತ್ರಿಗಳ ಮನ್ಸಸಿಗೆ ಸ್ವಲ್ಪ ನೋವಾದಂತೆ ಕಂಡುಬರುತ್ತಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಕೆಲವು ದಿನಗಳಿಂದ ನಡೆಯುತ್ತಿರುವ ರಾಜಕೀಯ ವಿದ್ಯಮಾನಗಳನ್ನು ನೋಡಿದಾಗ, ಪದೇ ಪದೇ ಸಿಎಂ ನಾಯಕತ್ವ ಬದಲಾವಣೆ ಬಗ್ಗೆ ಕೊರೋನಾ ಕಷ್ಟದ ಸಮಯದಲ್ಲಿ ಕೇಳಿಬರುತ್ತಿರುವಾಗ ಮುಖ್ಯಮಂತ್ರಿಗಳ ಮನ್ಸಸಿಗೆ ಸ್ವಲ್ಪ ನೋವಾದಂತೆ ಕಂಡುಬರುತ್ತಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕೊರೋನಾ ಸಂಕಷ್ಟ ಕಾಲದಲ್ಲಿ ಮುಖ್ಯಮಂತ್ರಿಗಳು ಸಾಕಷ್ಟು ಕಷ್ಟಪಟ್ಟು ಹಗಲು-ರಾತ್ರಿ ಕೆಲಸ ಮಾಡುತ್ತಿದ್ದಾರೆ. ಹೀಗಿರುವಾಗ ಪದೇ ಪದೇ ನಾಯಕತ್ವ ಬದಲಾವಣೆ ಮಾತು, ಪ್ರಶ್ನೆ ಕೇಳಿಬರುತ್ತಿರುವುದು ಅವರ ಮನಸ್ಸಿಗೆ ನೋವಾದಂತೆ ಕಂಡುಬರುತ್ತಿದೆ. ಹೀಗಾಗಿ ಅವರು ಈ ಮಾತುಗಳನ್ನು ಹೇಳಿರಬಹುದು, ಆದರೆ ಕೇಂದ್ರದ ಸಚಿವರಾದ ಪ್ರಹ್ಲಾದ್ ಜೋಶಿಯವರು, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಸಿ.ಟಿ.ರವಿಯವರು ಇನ್ನೂ ಹಲವಾರು ನಾಯಕರು ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.
ಇಂತಹ ಸಂದರ್ಭದಲ್ಲಿ ಆಗಾಗ ಎತ್ತುತ್ತಿರುವ ಪ್ರಶ್ನೆಗಳಿಗೆ ಅಂತ್ಯ ಹಾಡಬೇಕೆಂದು ಯಡಿಯೂರಪ್ಪನವರು ಈ ಹೇಳಿಕೆ ನೀಡಿರಬಹುದು. ನಾವು, ಬಸವರಾಜ್ ಬೊಮ್ಮಾಯಿಯವರು ಇನ್ನೂ ಹಲವು ಸಚಿವರು ಮುಖ್ಯಮಂತ್ರಿಗಳ ಜೊತೆಗೆ ಇದ್ದೇವೆ. ಕೊರೋನಾದ ಈ ಕಷ್ಟದ ಸಂದರ್ಭದಲ್ಲಿ ಇಂತಹ ಹೇಳಿಕೆಗಳಿಂದ ರಾಜ್ಯದ ಜನತೆಗೆ ಸಮಸ್ಯೆಯಾಗುತ್ತದೆ, ಅದು ಬೇಡ ನಮ್ಮ ಗಮನ, ಕೆಲಸವೇನಿದ್ದರೂ ಕೊರೋನಾ ಓಡಿಸುವುದೇ ಆಗಿರುತ್ತದೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


