ರಾಜ್ಯದಲ್ಲಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹೈಕಮಾಂಡ್ ಎರಡೂ ದುರ್ಬಲ: ಸಿದ್ದರಾಮಯ್ಯ
ಬಿಜೆಪಿ ಹೈಕಮಾಂಡ್ ವೀಕ್ ಆಗಿದೆ. ರಾಜ್ಯದಲ್ಲಿ ಮುಖ್ಯಮಂತ್ರಿಯೂ ದುರ್ಬಲರಾಗಿದ್ದಾರೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರು: ಬಿಜೆಪಿ ಹೈಕಮಾಂಡ್ ವೀಕ್ ಆಗಿದೆ. ರಾಜ್ಯದಲ್ಲಿ ಮುಖ್ಯಮಂತ್ರಿಯೂ ದುರ್ಬಲರಾಗಿದ್ದಾರೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
‘ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ. ಆದರೆ, ಬೆಂಕಿ ಇಲ್ಲದೆ ಹೊಗೆಯಾಡುವುದಿಲ್ಲ’ ಎಂದು ಬಿಜೆಪಿಯೊಳಗೆ ನಾಯಕತ್ವದ ಬದಲಾವಣೆಗೆ ನಡೆಯುತ್ತಿದೆ ಎನ್ನಲಾದ ಬೆಳವಣಿಗೆಗಳ ಬಗ್ಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿಶ್ಲೇಷಿಸಿದರು.
ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, ‘ಯಡಿಯೂರಪ್ಪ ಅವರನ್ನು ಬದಲಿಸಿ ಎಂದು ನಾವ್ಯಾರೂ ಒತ್ತಾಯ ಮಾಡಿಲ್ಲ. ದೆಹಲಿಯಲ್ಲಿ ಈ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದು ಹೇಳಿದ್ದೆ. ಒಂದು ವೇಳೆ, ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂದಾದರೆ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ್, ಅರವಿಂದ ಬೆಲ್ಲದ್, ವಿಶ್ವನಾಥ್, ರೇಣುಕಾಚಾರ್ಯ, ಸಚಿವ ಯೋಗೀಶ್ವರ್ ವಿರುದ್ಧ ಬಿಜೆಪಿ ಹೈಕಮಾಂಡ್ ಏಕೆ ಕ್ರಮ ಕೈಗೊಂಡಿಲ್ಲ’ ಎಂದು ಪ್ರಶ್ನಿಸಿದರು. ‘
ಬಿಜೆಪಿಯಲ್ಲಿ ಮುಖ್ಯಮಂತ್ರಿ ಮತ್ತು ಹೈಕಮಾಂಡ್ ಎರಡೂ ದುರ್ಬಲ. ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡಬೇಡಿ ಎಂದು ಅರುಣ್ ಸಿಂಗ್ ಹೇಳಿದ್ದಾರೆ. ಹಾಗಾದರೆ ಬದಲಾವಣೆ ಆಗಬೇಕು ಎಂದವರ ವಿರುದ್ಧ ಏಕೆ ಕ್ರಮವಿಲ್ಲ. ಇದರಿಂದ ರವಾನೆಯಾಗುವ ಸಂದೇಶವಾದರೂ ಏನು. ಯಡಿಯೂರಪ್ಪ ಅವರೇ ಕಳಪೆ ಮುಖ್ಯಮಂತ್ರಿ. ಇನ್ನು ಬೇರೆಯವರು ಹೇಗಿರಬೇಕು’ ಎಂದೂ ಸಿದ್ದರಾಮಯ್ಯ ವ್ಯಂಗ್ಯವಾಗಿ ಪ್ರಶ್ನಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


