ರಾಜಕೀಯ

ದೆಹಲಿ ಭೇಟಿಯ ಹಿಂದೆ ರಾಜಕೀಯ ಉದ್ದೇಶ ಇಲ್ಲ: ಶಾಸಕ ಅರವಿಂದ ಬೆಲ್ಲದ್ ಸ್ಪಷ್ಟನೆ

ನಾನು ಖಾಸಗಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ದೆಹಲಿಗೆ ಭೇಟಿ ನೀಡಿದ್ದು, ಈ ಭೇಟಿಯ ಹಿಂದೆ ಯಾವುದೇ ರಾಜಕೀಯ ಉದ್ದೇಶ ಇಲ್ಲ ಎಂದು ಶಾಸಕ ಅರವಿಂದ ಬೆಲ್ಲದ್ ಅವರು ಶನಿವಾರ ಸ್ಪಷ್ಟನೆ ನೀಡಿದ್ದಾರೆ.

ದೆಹಲಿ ಭೇಟಿಯ ಹಿಂದೆ ರಾಜಕೀಯ ಉದ್ದೇಶ ಇಲ್ಲ: ಶಾಸಕ ಅರವಿಂದ ಬೆಲ್ಲದ್ ಸ್ಪಷ್ಟನೆ
ಶಾಸಕ ಅರವಿಂದ ಬೆಲ್ಲದ್
Published On :

ಬೆಂಗಳೂರು: ನಾನು ಖಾಸಗಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ದೆಹಲಿಗೆ ಭೇಟಿ ನೀಡಿದ್ದು, ಈ ಭೇಟಿಯ ಹಿಂದೆ ಯಾವುದೇ ರಾಜಕೀಯ ಉದ್ದೇಶ ಇಲ್ಲ ಎಂದು ಶಾಸಕ ಅರವಿಂದ ಬೆಲ್ಲದ್ ಅವರು ಶನಿವಾರ ಸ್ಪಷ್ಟನೆ ನೀಡಿದ್ದಾರೆ. 

ಈ ಸಂಬಂಧ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ ಖಾತೆಯಲ್ಲಿ ಬರೆದುಕೊಂಡಿರುವ ಅವರು, ʼನಾನು ಖಾಸಗಿ ಕುಟುಂಬ ಕಾರ್ಯಕ್ರಮದ ಹಿನ್ನೆಲೆಯಲ್ಲಿ ದೆಹಲಿಗೆ ಭೇಟಿ ನೀಡಿದ್ದು, ನನ್ನ ದೆಹಲಿಯ ಭೇಟಿಯ ಹಿಂದೆ ಯಾವುದೇ ರಾಜಕೀಯ ಉದ್ದೇಶ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 

 ನಾನು ರಾಷ್ಟ್ರೀಯ ನಾಯಕರ ಭೇಟಿಗಾಗಿಯಾಗಲಿ, ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸಲು ದೆಹಲಿಗೆ ಆಗಮಿಸಿಲ್ಲ. ನಾನು ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದರೂ ಮಾಧ್ಯಮಗಳಲ್ಲಿ ರಾಜಕೀಯ ಬೆಳವಣಿಗೆಗಳ ಚರ್ಚೆಗೆ ದೆಹಲಿಗೆ ಬಂದಿದ್ದಾರೆ ಎನ್ನುವ ರೀತಿ ಸುದ್ದಿ ಹರಡಿಸಲಾಗುತ್ತಿದೆ. ಮಾಧ್ಯಮಗಳಲ್ಲಿ ನನ್ನ ದೆಹಲಿ ಭೇಟಿಯ ಕುರಿತು ಬರುತ್ತಿರುವ ಸುದ್ದಿಗಳು ಸತ್ಯಕ್ಕೆ ದೂರವಾಗಿದೆ. ಹೀಗಾಗಿ ನನ್ನ ದೆಹಲಿ ಭೇಟಿಯ ಬಗ್ಗೆ ಅನಗತ್ಯ ಗೊಂದಲ ಸೃಷ್ಟಿಸುವುದು ಬೇಡ ಎಂದು ಮಾಧ್ಯಮ ಮಿತ್ರರಲ್ಲಿ ಮನವಿ ಮಾಡಿಕೊಳ್ಳುತ್ತೇನೆʼ ಎಂದು ಪ್ರಕಟಿಸಿದ್ದಾರೆ.

ಬೆಲ್ಲದ್ ಅವರು ಶುಕ್ರವಾರ ತಡರಾತ್ರಿ ರಾಷ್ಟ್ರ ರಾಜಧಾನಿ ದೆಹಲಿಗೆ ತೆರಳಿದ್ದರು. ರಾಜ್ಯದಲ್ಲಿ ಸದ್ಯ ನಾಯಕತ್ವ ಬದಲಾವಣೆಯ ಚರ್ಚೆ ನಡೆಯುತ್ತಿರುವುದರಿಂದ ಬೆಲ್ಲದ್ ಅವರ ದೆಹಲಿ ಭೇಟಿಯು ತೀವ್ರ ಕುತೂಹಲ ಕೆರಳಿಸಿತ್ತು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.