ರಾಜಕೀಯ

ನಾಯಕತ್ವ ಬದಲಾವಣೆ: ಪ್ರತಿಕ್ರಿಯೆ ಸಚಿವ ಈಶ್ವರಪ್ಪ ಮೌನಕ್ಕೆ ಶರಣು

ರಾಜ್ಯ ನಾಯಕತ್ವ ಬದಲಾವಣೆ ವಿಚಾರ ಕುರಿತು ಯಾವುದೇ ಪ್ರತಿಕ್ರಿಯೆ ನೀಡಲು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ನಿರಾಕರಿಸಿದ್ದಾರೆ.

ನಾಯಕತ್ವ ಬದಲಾವಣೆ: ಪ್ರತಿಕ್ರಿಯೆ ಸಚಿವ ಈಶ್ವರಪ್ಪ ಮೌನಕ್ಕೆ ಶರಣು
ಸಚಿವ ಈಶ್ವರಪ್ಪ
Published On :

ಬೆಳಗಾವಿ: ರಾಜ್ಯ ನಾಯಕತ್ವ ಬದಲಾವಣೆ ವಿಚಾರ ಕುರಿತು ಯಾವುದೇ ಪ್ರತಿಕ್ರಿಯೆ ನೀಡಲು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ನಿರಾಕರಿಸಿದ್ದಾರೆ. 

ಇಲಾಖೆಯ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ನಡೆಸಲು ಗುರುವಾರ ಆಗಮಿಸಿದ್ದ ಈಶ್ವರಪ್ಪ ಅವರು, ಈ ವೇಳೆ ನಾಯಕತ್ವ ಬದಲಾವಣೆ ಕುರಿತ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದ್ದಾರೆ
. 
ರಾಜ್ಯದ ಉಸ್ತುವಾರಿ ಅರುಣ್ ಸಿಂಗ್ ಅವರು ಬುಧವಾರ ಎಲ್ಲಾ ಸಚಿವರ ಸಭೆ ನಡೆಸಿದ್ದಾರೆ. ಆಯಾ ಇಲಾಖೆಗಳ ಪ್ರಗತಿ ಮತ್ತು ಕೈಗೊಂಡಿರುವ ಯೋಜನೆಗಳ ಕುರಿತು ಮಾಹಿತಿ ಪಡೆದು ಕೊಂಡಿದ್ದಾರೆ ಎಂದು ಹೇಳಿದ್ದಾರೆ. 

ಅರುಣ್ ಸಿಂಗ್ ಅವರು ಸರ್ಕಾರದ ಚಟುವಟಿಕೆಗಳು ಹೇಗೆ ನಡೆಯುತ್ತಿವೆ ಎಂಬುದರ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ. ಈ ವೇಳೆ ರಾಜ್ಯ ಸರ್ಕಾರವು ಕೋವಿಡ್ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳು ಮತ್ತು ಪರಿಹಾರ ಘೋಷಣೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಾಳೆ ಪಕ್ಷದ ಕೋರ್ ಕಮಿಟಿ ಸಭೆಯಿದ್ದು ಅದರಲ್ಲಿ ಭಾಗವಹಿಸುತ್ತೇನೆಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.