ರಾಜಕೀಯ

ಕೊರೋನಾ ಕಷ್ಟದಿಂದ ಜನರು ನಲುಗಿ ಹೋಗಿರುವಾಗ ಬಿಜೆಪಿ ನಾಯಕರು ಅಧಿಕಾರಕ್ಕಾಗಿ ಕಿತ್ತಾಟ ನಡೆಸುತ್ತಿದ್ದಾರೆ: ಡಿ.ಕೆ. ಸುರೇಶ್

ಕೋವಿಡ್-19 ನ ಎರಡನೇ ಅಲೆಗೆ ಸಿಲುಕಿ ರಾಜ್ಯ ನಲುಗಿ ಹೋಗಿರುವಾಗ ಸರ್ಕಾರದಲ್ಲಿ ಬಿಜೆಪಿ ನಾಯಕರು ಅಧಿಕಾರಕ್ಕಾಗಿ ಕಿತ್ತಾಟ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ಹಾಗೂ ಬೆಂಗಳೂರು ಗ್ರಾಮಾಂತರ ಸಂಸದ ಡಿ ಕೆ ಸುರೇಶ್ ಹೇಳಿದ್ದಾರೆ.

ಕೊರೋನಾ ಕಷ್ಟದಿಂದ ಜನರು ನಲುಗಿ ಹೋಗಿರುವಾಗ ಬಿಜೆಪಿ ನಾಯಕರು ಅಧಿಕಾರಕ್ಕಾಗಿ ಕಿತ್ತಾಟ ನಡೆಸುತ್ತಿದ್ದಾರೆ: ಡಿ.ಕೆ. ಸುರೇಶ್
ಡಿ ಕೆ ಸುರೇಶ್
Published On :

ಹಾಸನ: ಕೋವಿಡ್-19 ನ ಎರಡನೇ ಅಲೆಗೆ ಸಿಲುಕಿ ರಾಜ್ಯ ನಲುಗಿ ಹೋಗಿರುವಾಗ ಸರ್ಕಾರದಲ್ಲಿ ಬಿಜೆಪಿ ನಾಯಕರು ಅಧಿಕಾರಕ್ಕಾಗಿ ಕಿತ್ತಾಟ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ಹಾಗೂ ಬೆಂಗಳೂರು ಗ್ರಾಮಾಂತರ ಸಂಸದ ಡಿ ಕೆ ಸುರೇಶ್ ಹೇಳಿದ್ದಾರೆ.

ಹಾಸನದಲ್ಲಿ ನಿನ್ನೆ ತೈಲ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸಿ ಮಾತನಾಡಿದ ಅವರು ರೈತರು ಮತ್ತು ಬಡವರ ಪರ ಬಿಜೆಪಿ ಸರ್ಕಾರಕ್ಕೆ ಕಾಳಜಿಯೇ ಇಲ್ಲ. ಲಾಕ್ ಡೌನ್ ನಿಂದಾಗಿ ಮಧ್ಯಮ, ಕೆಳ ಮಧ್ಯಮ ಮತ್ತು ಬಡವರಿಗೆ ತುಂಬಾ ಕಷ್ಟವಾಗಿದೆ ಎಂದು ಹೇಳಿದರು.

ಪಕ್ಷದ ನಾಯಕತ್ವ ವಿವಾದವನ್ನು ಬಗೆಹರಿಸಲು ಮಾತ್ರ ಬಿಜೆಪಿಯ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಭೇಟಿ ನೀಡಿದ್ದಾರೆಯೇ ಹೊರತು ಅಭಿವೃದ್ಧಿ ವಿಷಯಗಳನ್ನು ಚರ್ಚಿಸಲು ಅಲ್ಲ. ಇದು ರಾಜ್ಯದ ಬಗ್ಗೆ ಬಿಜೆಪಿಗೆ ಇರುವ ಕಾಳಜಿಯನ್ನು ತೋರಿಸುತ್ತದೆ. ಕೊರೋನಾ ಸೋಂಕನ್ನು ತಡೆಗಟ್ಟುವ ಹೆಸರಿನಲ್ಲಿ ಬಿಜೆಪಿ ಸರ್ಕಾರ ಕೋಟ್ಯಂತರ ರೂಪಾಯಿ ವಂಚಿಸಿದೆ ಎಂದು ಕೂಡ ಡಿ ಕೆ ಸುರೇಶ್ ಆರೋಪಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.