ಕೂಡಲೆ ರಾಜೀನಾಮೆ ನೀಡಿ: ಮುಖ್ಯಮಂತ್ರಿ ಯಡಿಯೂರಪ್ಪಗೆ ಕಾಂಗ್ರೆಸ್ ಆಗ್ರಹ
ನೀರಾವರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ವಿಧಾನ ಪರಿಷತ್ ಸದಸ್ಯ, ಬಿಜೆಪಿ ಮುಖಂಡ ಎಚ್.ವಿಶ್ವನಾಥ್ ಅವರು ಆರೋಪಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಅವರು ಆಗ್ರಹಿಸಿದ್ದಾರೆ.

ಮೈಸೂರು: ನೀರಾವರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ವಿಧಾನ ಪರಿಷತ್ ಸದಸ್ಯ, ಬಿಜೆಪಿ ಮುಖಂಡ ಎಚ್.ವಿಶ್ವನಾಥ್ ಅವರು ಆರೋಪಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಅವರು ಆಗ್ರಹಿಸಿದ್ದಾರೆ.
ಸುದ್ದಿಗಾರರೊಂಡಿದೆ ಮಾತನಾಡಿದ ಅವರು, ಯಡಿಯೂರಪ್ಪ ಅವರ ವಿರುದ್ಧ ಬಿಜೆಪಿ ನಾಯಕರೇ ಭ್ರಷ್ಟಾಚಾರ ಆರೋಪ ಮಾಡಿದ್ದಾರೆ. ವಿಶ್ವನಾಥ್ ಅವರ ಆರೋಪ ಸತ್ಯವಾಗಿದೆ. ಅವರು ಬಿಜೆಪಿ ಕಚೇರಿಯಲ್ಲಿಯೇ ಕುಳಿತು ಈ ಹೇಳಿಕೆ ನೀಡಿದ್ದಾರೆ. ಟೆಂಡರ್ ನಲ್ಲಿ ಕೇಂದ್ರಕ್ಕೂ ಪಾಲು ಹಂಚಿಕೆಯಾಗಿದೆ. ಈ ಸಂಬಂಧ ನಾವು ಹೈಕೋರ್ಟ್, ಇಡಿ ಮತ್ತು ಸಿಬಿಐಗೆ ದೂರು ನೀಡುತ್ತೇವೆಂದು ಹೇಳಿದ್ದಾರೆ.
ಇದೇ ವೇಳೆ ಮುಖ್ಯಮಂತ್ರಿಗಳ ವಿರುದ್ಧ ವಾಗ್ದಾಳಿ ನಡೆಸಿರುವ ಅವರು, ಕಳೆದ ಎರಡು ವರ್ಷಗಳಲ್ಲಿ ರಾಜ್ಯದ ಬಿಜೆಪಿ ಸರ್ಕಾರವು ಆರ್‌ಬಿಐನಿಂದ 1.8 ಲಕ್ಷ ಕೋಟಿ ರೂ.ಗಸಾಲ ಪಡೆದಿದೆ, ಇದು ಇಲ್ಲಿಯವರೆಗೆ ಯಾವುದೇ ಸರ್ಕಾರ ಇಷ್ಟೊಂದು ಮೊತ್ತದ ಸಾಲ ಪಡೆದಿಲ್ಲ. ಈ ಎಲ್ಲಾ ಹಣ ಎಲ್ಲಿ ಹೋಯಿತು? ಕೂಡಲೇ ಯಡಿಯೂರಪ್ಪ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಮೊದಲು ವಿಧಾನಸಭೆಯನ್ನು ವಿಸರ್ಜಿಸಬೇಕೆಂದು ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


