ಅಧಿಕಾರಕ್ಕೆ ಜೋತು ಬಿದ್ದವರಿಂದ ಗೊಂದಲ ಸೃಷ್ಟಿ: ಡಿ.ಕೆ. ಸುರೇಶ್
ನಿಜವಾದ ಕಾಂಗ್ರೆಸ್ಸಿಗರು ಪಕ್ಷ ಸಂಘಟನೆಯತ್ತ ಗಮನಹರಿಸುತ್ತಾರೆ. ಅಧಿಕಾರಕ್ಕಾಗಿಯೇ ಪಕ್ಷಕ್ಕೆ ಬಂದಿರುವವರು, ಅಧಿಕಾರಕ್ಕೆ ಜೋತು ಬಿದ್ದಿರುವವರು ಗೊಂದಲ ಸೃಷ್ಟಿಸುತ್ತಾರೆ’ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸದಸ್ಯ ಡಿ.ಕೆ. ಸುರೇಶ್ ಹೇಳಿದರು.

ಬೆಂಗಳೂರು: ನಿಜವಾದ ಕಾಂಗ್ರೆಸ್ಸಿಗರು ಪಕ್ಷ ಸಂಘಟನೆಯತ್ತ ಗಮನಹರಿಸುತ್ತಾರೆ. ಅಧಿಕಾರಕ್ಕಾಗಿಯೇ ಪಕ್ಷಕ್ಕೆ ಬಂದಿರುವವರು, ಅಧಿಕಾರಕ್ಕೆ ಜೋತು ಬಿದ್ದಿರುವವರು ಗೊಂದಲ ಸೃಷ್ಟಿಸುತ್ತಾರೆ’ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸದಸ್ಯ ಡಿ.ಕೆ. ಸುರೇಶ್ ಹೇಳಿದರು.
ಮುಂದಿನ ಸಿಎಂ ಸಿದ್ದರಾಮಯ್ಯ ಎಂಬ ಶಾಸಕರ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಗೊಂದಲ ಸೃಷ್ಟಿಸುತ್ತಿರುವವರ ವಿರುದ್ಧ ಶಿಸ್ತು, ಅಶಿಸ್ತು ಕ್ರಮ ಕೈಗೊಳ್ಳುವ ವಿಚಾರ ಪಕ್ಷದ ಹೈಕಮಾಂಡ್‌ಗೆ ಬಿಟ್ಟದ್ದು. ವರಿಷ್ಠರು ಅದನ್ನು ನೋಡಿಕೊಳ್ಳುತ್ತಾರೆ. ಪಕ್ಷ ಶಿಸ್ತಿಗೆ ನಾವು ಬದ್ಧರಾಗಿದ್ದೇವೆ. ಅಧಿಕಾರಕ್ಕಾಗಿ ಕಾಂಗ್ರೆಸ್ ಪಕ್ಷಕ್ಕೆ ಬಂದವರು ಬೇಜವಾಬ್ದಾರಿಯುತ ಹೇಳಿಕೆ ನೀಡಿ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಹೇಳಿದ್ದಾರೆ.
ಸದ್ಯಕ್ಕೆ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿಲ್ಲ. ಮುಖ್ಯಮಂತ್ರಿ ಸ್ಥಾನ ಖಾಲಿಯೂ ಇಲ್ಲ. ಕಾಂಗ್ರೆಸ್‌ನ ಈಗಿನ ಶಾಸಕರು ಮುಂದಿನ ಶಾಸಕಾಂಗ ಪಕ್ಷದ ಸದಸ್ಯರಲ್ಲ. 2023ರ ಚುನಾವಣೆ ಗೆಲ್ಲುವ ಬಗ್ಗೆ ಶಾಸಕರು ಕೆಲಸ ಮಾಡಬೇಕಿದೆ. ಪಕ್ಷ ಸಂಘಟನೆಗೆ ಆದ್ಯತೆ ನೀಡಬೇಕು. ಕೆಲವರು ಈಗಲೇ ಮುಖ್ಯಮಂತ್ರಿ ಆಗುವುದಾದರೆ ದೇವರು ಅವರಿಗೆ ಒಳ್ಳೆಯದು ಮಾಡಲಿ’ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


