ವಿಧಾನಸಭೆ ವಿಶೇಷ ಅಧಿವೇಶನ ಕರೆಯಿರಿ: ರಾಜ್ಯಪಾಲರಿಗೆ ಪತ್ರದ ಮೂಲಕ ಹೆಚ್.ಡಿ. ಕುಮಾರಸ್ವಾಮಿ ಒತ್ತಾಯ
ಕನ್ನಡ, ಕನ್ನಡಿಗ, ಕರ್ನಾಟಕ ವಿಚಾರದಲ್ಲಿ ಆಗುತ್ತಿರುವ ಹಿನ್ನಡೆ ಕುರಿತು ಚರ್ಚಿಸಲು ವಿಧಾನಸಭೆಯ ವಿಶೇಷ ಅಧಿವೇಶನ ಕರೆಯಬೇಕೆಂದು ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಬೆಂಗಳೂರು: ಕನ್ನಡ, ಕನ್ನಡಿಗ, ಕರ್ನಾಟಕ ವಿಚಾರದಲ್ಲಿ ಆಗುತ್ತಿರುವ ಹಿನ್ನಡೆ ಕುರಿತು ಚರ್ಚಿಸಲು ವಿಧಾನಸಭೆಯ ವಿಶೇಷ ಅಧಿವೇಶನ ಕರೆಯಬೇಕೆಂದು ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
ಈ ಕುರಿತು ರಾಜ್ಯಪಾಲರು, ಮುಖ್ಯಮಂತ್ರಿ ಮತ್ತು ವಿಧಾನಸಭಾಧ್ಯಕ್ಷರಿಗೆ ಸುದೀರ್ಘ ಪತ್ರ ಬರೆದಿರುವ ಅವರು, ರಾಜ್ಯದ ಕೋವಿಡ್ ಸ್ಥಿತಿಗತಿ, ಈ ಸಂದರ್ಭದಲ್ಲಿ ಸರ್ಕಾರದ ಪ್ಯಾಕೇಜ್ ಜನರಿಗೆ ಹೇಗೆ ತಲುಪುತ್ತಿದೆ ಎಂಬ ಬಗ್ಗೆ ಕೂಡ ಚರ್ಚೆಯಾಗಬೇಕು. ಸರ್ಕಾರದ ಮೇಲೆ ಗಂಭೀರವಾದ ಭ್ರಷ್ಟಾಚಾರ ಆರೋಪ ಕೂಡ ಕೇಳಿಬರುತ್ತಿದೆ. ಇದರಲ್ಲಿ ಮುಖ್ಯಮಂತ್ರಿಗಳ ಕುಟುಂಬಸ್ಥರ ಕೈವಾಡವಿದೆ ಎಂದು ಕೂಡ ಕೇಳಿಬರುತ್ತಿದೆ. ಈ ಬಗ್ಗೆ ತನಿಖೆಯಾಗಬೇಕು. ವಿಶೇಷ ಅಧಿವೇಶನ ಕರೆದು ಚರ್ಚೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.
ಕೇಂದ್ರ ಸರ್ಕಾರದ ನೂತನ ಶಿಕ್ಷಣ ನೀತಿಯಡಿ ಕನ್ನಡ ಭಾಷಾ ಕಲಿಕೆಯ ಬಗ್ಗೆ ಚರ್ಚೆಯಾಗಬೇಕೆಂದು ಒತ್ತಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


