ಬೇರೆ ಪಕ್ಷದಿಂದ ಬಂದು ವ್ಯಕ್ತಿ ಪೂಜೆ, ಗುಂಪುಗಾರಿಕೆ ಮಾಡಿ, ಕಾಂಗ್ರೆಸ್‌ಗೆ ಹಾನಿ ಮಾಡುವವರ ಬಗ್ಗೆ ಎಚ್ಚರಿಕೆ ವಹಿಸಿ: ಡಿಕೆಶಿ
ಬೇರೆ ಪಕ್ಷದಿಂದ ಬಂದು ಗುಂಪುಗಾರಿಕೆ ಮಾಡಿ, ಕಾಂಗ್ರೆಸ್‌ಗೆ ಹಾನಿ ಮಾಡುವವರ ಬಗ್ಗೆ ಎಚ್ಚರಿಕೆ ವಹಿಸಿ. ಅಂತಹ ವ್ಯಕ್ತಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದು ಬೇಡ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಹಾಸನ: ಬೇರೆ ಪಕ್ಷದಿಂದ ಬಂದು ಗುಂಪುಗಾರಿಕೆ ಮಾಡಿ, ಕಾಂಗ್ರೆಸ್‌ಗೆ ಹಾನಿ ಮಾಡುವವರ ಬಗ್ಗೆ ಎಚ್ಚರಿಕೆ ವಹಿಸಿ. ಅಂತಹ ವ್ಯಕ್ತಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದು ಬೇಡ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಹಾಸನದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನ ತತ್ವ, ಸಿದ್ಧಾಂತ ಮತ್ತು ನಾಯಕತ್ವ ಒಪ್ಪಿಕೊಂಡು ಬರುವವರಿಗೆ ಮಾತ್ರ ಅವಕಾಶ ಕಲ್ಪಿಸಬೇಕು. ಇದಕ್ಕಾಗಿ ಪಕ್ಷ ಸೇರಲು ಬಯಸುವವರ ಪಟ್ಟಿಯನ್ನು ಸ್ಥಳೀಯ ಸಮಿತಿಗಳ ಮುಂದೆ ಇಟ್ಟು, ಪರಿಶೀಲಿಸಿ ನಿರ್ಧಾರ ಕೈಗೊಳ್ಳಬೇಕು’ ಎಂದು ಪರೋಕ್ಷವಾಗಿ ಶಾಸಕ ಜಮೀರ್ ಅಹ್ಮದ್ ಖಾನ್ ಅವರಿಗೆ ಟಾಂಗ್ ಕೊಟ್ಟಿದ್ದಾರೆ.
ವ್ಯಕ್ತಿ ಪೂಜೆ, ಗುಂಪುಗಾರಿಕೆ ಮಾಡಿ ಪಕ್ಷ ಹಾಳು ಮಾಡುವವರು ನಮಗೆ ಬೇಡ. ಪಕ್ಷ ಪೂಜೆ ಮಾಡುವ, ಪಕ್ಷದ ಸಿದ್ಧಾಂತ ಮತ್ತು ನಾಯಕತ್ವ ನಂಬಿ ಬರುವವರಿಗೆ ಮಾತ್ರ ಪ್ರವೇಶವಿದೆ’ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.
ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ಎಂದು ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿಕೆ ನೀಡಿದ್ದ ಬೆನ್ನಲ್ಲೇ ಡಿಕೆ ಶಿವಕುಮಾರ್ ಪರೋಕ್ಷವಾಗಿ ಜಮೀರ್ ಅಹ್ಮದ್ ಗೆ ಮಾತಿನಲ್ಲಿ ತಿವಿದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


