ರಾಜಕೀಯ

ನಿಂತ ನಾಯಕತ್ವ ಬದಲಾವಣೆ: ಇದೀಗ ನಿಗಮ ಮಂಡಳಿ ಅಧ್ಯಕ್ಷರ ಬದಲಾವಣೆಗೆ ಸಿದ್ಧತೆ 

ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಸದ್ಯಕ್ಕೆ ಸಾಧ್ಯವಿಲ್ಲವೆಂಬ ಸ್ಪಷ್ಟತೆಯನ್ನು ದೆಹಲಿಯ ವರಿಷ್ಠರು ನೀಡುತ್ತಿದ್ದಂತೆಯೇ ಇದೀಗ ನಿಗಮ ಮಂಡಳಿಗಳ ಅಧ್ಯಕ್ಷರ ಬದಲಾವಣೆಗೆ ಧ್ವನಿ‌ ಕೇಳಿಬಂದಿದೆ. ಹೀಗೆ ನಿಗಮ ಮಂಡಳಿ ಅಧ್ಯಕ್ಷರ ಬದಲಾವಣೆಗೆ ಖುದ್ದು ಬಿಜೆಪಿ ರಾಜ್ಯಾಧ್ಯಕ್ಷರೇ ಮುಂದಾಗಿದ್ದಾರೆ.

ನಿಂತ ನಾಯಕತ್ವ ಬದಲಾವಣೆ: ಇದೀಗ ನಿಗಮ ಮಂಡಳಿ ಅಧ್ಯಕ್ಷರ ಬದಲಾವಣೆಗೆ ಸಿದ್ಧತೆ 
ನಳಿನ್ ಕುಮಾರ್ ಕಟೀಲ್
Published On :

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಸದ್ಯಕ್ಕೆ  ಸಾಧ್ಯವಿಲ್ಲವೆಂಬ ಸ್ಪಷ್ಟತೆಯನ್ನು ದೆಹಲಿಯ ವರಿಷ್ಠರು ನೀಡುತ್ತಿದ್ದಂತೆಯೇ ಇದೀಗ ನಿಗಮ ಮಂಡಳಿಗಳ ಅಧ್ಯಕ್ಷರ ಬದಲಾವಣೆಗೆ ಧ್ವನಿ‌ ಕೇಳಿಬಂದಿದೆ. ಹೀಗೆ ನಿಗಮ ಮಂಡಳಿ ಅಧ್ಯಕ್ಷರ ಬದಲಾವಣೆಗೆ ಖುದ್ದು ಬಿಜೆಪಿ ರಾಜ್ಯಾಧ್ಯಕ್ಷರೇ ಮುಂದಾಗಿದ್ದಾರೆ.

ಕಳೆದ ಜೂನ್ 18 ರಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರ ನೇತೃತ್ವದಲ್ಲಿ ನಡೆದ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಹಾಲಿ ನಿಗಮ ಮಂಡಳಿ ಅಧ್ಯಕ್ಷರನ್ನು ಬದಲಾಯಿಸುವ ಕುರಿತು ಚರ್ಚೆ ನಡೆಸಲಾಗಿತ್ತು. ಅಲ್ಲದೇ, ಈಗಾಗಲೇ ಅಧಿಕಾರ ಅನುಭವಿಸಿರುವ ನಿಗಮ ಮಂಡಳಿ ಅಧ್ಯಕ್ಷರನ್ನು ಬದಲಾಯಿಸಿ, ಪಕ್ಷಕ್ಕಾಗಿ ದುಡಿದಿರುವ ಇನ್ನಷ್ಟು ಕಾರ್ಯಕರ್ತರಿಗೆ ಅವಕಾಶ ಕಲ್ಪಿಬೇಕು ಎಂದು ಅರುಣ್ ಸಿಂಗ್ ಸೂಚನೆ ನೀಡಿದ್ದರು.

ಶನಿವಾರ ನಡೆದ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಯಾದ ಬಳಿಕ ನಳಿನ್ ಕುಮಾರ್ ಕಟೀಲ್, ಪಕ್ಷದ ಪ್ರಧಾನ ಕಾರ್ಯದರ್ಶಿಗಳಿಗೆ ನಿಗಮ ಮಂಡಳಿಗೆ ನೇಮಕವಾಗುವ ಸಂಭಾವ್ಯರ ಪಟ್ಟಿಯನ್ನು ಪಕ್ಷದ ವತಿಯಿಂದ ಸಿದ್ದಪಡಿಸುವಂತೆ ಸೂಚಿಸಿರುವುದಾಗಿ ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.