ರಾಜಕೀಯ

ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಮುಗಿದ ಅಧ್ಯಾಯ, ಇನ್ನೆರಡು ವರ್ಷ ಯಡಿಯೂರಪ್ಪನವರೇ ಸಿಎಂ: ಬಿ ವೈ ವಿಜಯೇಂದ್ರ 

ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ವಿಚಾರ ಮುಗಿದ ಅಧ್ಯಾಯ, ಇನ್ನೆರಡು ವರ್ಷಗಳವರೆಗೆ ಬಿ ಎಸ್ ಯಡಿಯೂರಪ್ಪನವರೇ ಮುಖ್ಯಮಂತ್ರಿಗಳು ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದ್ದಾರೆ.

ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಮುಗಿದ ಅಧ್ಯಾಯ, ಇನ್ನೆರಡು ವರ್ಷ ಯಡಿಯೂರಪ್ಪನವರೇ ಸಿಎಂ: ಬಿ ವೈ ವಿಜಯೇಂದ್ರ 
ಬಿ ವೈ ವಿಜಯೇಂದ್ರ
Published On :

ಮೈಸೂರು: ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ವಿಚಾರ ಮುಗಿದ ಅಧ್ಯಾಯ, ಇನ್ನೆರಡು ವರ್ಷಗಳವರೆಗೆ ಬಿ ಎಸ್ ಯಡಿಯೂರಪ್ಪನವರೇ ಮುಖ್ಯಮಂತ್ರಿಗಳು ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದ್ದಾರೆ.

ಮೈಸೂರಿನ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳಿಂದ ಆಶೀರ್ವಾದ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಬರುವುದಿಲ್ಲ. ಯಡಿಯೂರಪ್ಪನವರೇ ಮುಂದಿನ ಎರಡು ವರ್ಷಗಳವರೆಗೂ ಮುಖ್ಯಮಂತ್ರಿಗಳಾಗಿರುತ್ತಾರೆ, ಇದನ್ನು ರಾಷ್ಟ್ರ ನಾಯಕರೇ ಸ್ಪಷ್ಟಪಡಿಸಿದ್ದಾರೆ, ಹಾಗಾಗಿ ಈ ಬಗ್ಗೆ ಚರ್ಚೆ ಅನಗತ್ಯ ಎಂದು ಹೇಳಿದ್ದಾರೆ.

ಕಳೆದ ಬಾರಿ ರಾಜ್ಯ ಉಸ್ತುವಾರಿಯಾಗಿರುವ ಅರುಣ್ ಸಿಂಗ್ ಅವರು ಬಂದಿರುವಾಗ ಸ್ಪಷ್ಟವಾಗಿ ಹೇಳಿದ್ದಾರೆ. ಯಡಿಯೂರಪ್ಪನವರೇ ಇನ್ನೆರಡು ವರ್ಷ ಮುಖ್ಯಮಂತ್ರಿಗಳಾಗಿದ್ದು ಅವರ ನಾಯಕತ್ವದಲ್ಲಿಯೇ ಮುಂದಿನ ವಿಧಾನಸಭೆ ಚುನಾವಣೆ ಎದುರಿಸಲಾಗುವುದು ಎಂದು ಹೇಳಿದ್ದಾರೆ. ಹೀಗಾಗಿ ಪದೇ ಪದೇ ಅದರ ಬಗ್ಗೆ ಚರ್ಚೆ ಅನಗತ್ಯ ಎಂದರು.

ಬಿಜೆಪಿಯಲ್ಲಿ ಹಾಗಾದರೆ ನಾಯಕತ್ವ ಬದಲಾವಣೆ ವಿವಾದ ಅಂತ್ಯವಾಗಿದೆಯಾ ಎಂಬ ಮಾತುಗಳು ರಾಜಕೀಯ ಪಡಸಾಲೆಯಲ್ಲಿ ಕೇಳಿಬರುತ್ತಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.