60 ವರ್ಷ ರಾಜ್ಯ ಆಳಿದ ಪಕ್ಷ ದಲಿತರನ್ನು ಸಿಎಂ ಮಾಡಿಲ್ಲವೇಕೆ: ಕಾಂಗ್ರೆಸ್ ಗೆ ಕುಮಾರಸ್ವಾಮಿ ಟಾಂಗ್
‘ಸ್ವಾತಂತ್ರ್ಯ ಬಂದ ಬಳಿಕ 60 ವರ್ಷ ರಾಜ್ಯ ಆಳಿದ ಕಾಂಗ್ರೆಸ್ ಮುಖಂಡರಿಗೆ ದಲಿತರನ್ನು ಮುಖ್ಯಮಂತ್ರಿ ಮಾಡಬೇಕು ಎಂಬ ವಿಚಾರ ಗೊತ್ತಿರಲಿಲ್ಲವೇ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಮಂಗಳವಾರ ಪ್ರಶ್ನಿಸಿದರು.

ಮಂಡ್ಯ: ‘ಸ್ವಾತಂತ್ರ್ಯ ಬಂದ ಬಳಿಕ 60 ವರ್ಷ ರಾಜ್ಯ ಆಳಿದ ಕಾಂಗ್ರೆಸ್ ಮುಖಂಡರಿಗೆ ದಲಿತರನ್ನು ಮುಖ್ಯಮಂತ್ರಿ ಮಾಡಬೇಕು ಎಂಬ ವಿಚಾರ ಗೊತ್ತಿರಲಿಲ್ಲವೇ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಮಂಗಳವಾರ ಪ್ರಶ್ನಿಸಿದರು.
ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ದಲಿತರು ಮುಖ್ಯಮಂತ್ರಿಯಾಗುವುದನ್ನು ನಾವು ತಪ್ಪಿಸಿಲ್ಲ. ಅವಕಾಶ ತಪ್ಪಿಸಿದ್ದವರೇ ಈಗ ಮತ್ತೆ ಸಿ.ಎಂ ಆಗಬೇಕು ಎಂದು ಹೇಳಿಕೊಳ್ಳುತ್ತಿದ್ದಾರೆ. ತಾನಿದ್ದರೆ ಮಾತ್ರ ಕಾಂಗ್ರೆಸ್ ಎಂದೂ ಹೇಳಿಕೊಳ್ಳುತ್ತಾರೆ. 130 ಸೀಟ್‌ನಿಂದ 78ಕ್ಕೆ ಇಳಿಸಿದರಲ್ಲ ಅವರೇ ದಲಿತರಿಗೆ ಸಿ.ಎಂ ಆಗುವ ಅವಕಾಶ ತಪ್ಪಿಸಿದ್ದಾರೆ’ ಎಂದು ಸಿದ್ದರಾಮಯ್ಯ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.
ಅವಕಾಶ ಸಿಕ್ಕಾಗಲೇ ಕಾಂಗ್ರೆಸ್ ದಲಿತರನ್ನ ಸಿಎಂ ಮಾಡಲಿಲ್ಲ. 2008ರಲ್ಲಿ ನಾನೇ ಮಲ್ಲಿಕಾರ್ಜುನ ಖರ್ಗೆಗೆ ಮನವಿ ಮಾಡಿದ್ದೆ. ಬೇಷರತ್ ಬೆಂಬಲ ಕೊಡುತ್ತೇವೆ ಎಂದರೂ ಮಾಡಿರಲಿಲ್ಲ. ಕಾಂಗ್ರೆಸ್ ನಲ್ಲಿ ವಲಸಿಗರು ಮೂಲ ಕಾಂಗ್ರೆಸ್ ಎಂದು ಚರ್ಚೆ ನಡೆಯುತ್ತಿದೆ ಎಂದು ಟೀಕಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


