'ರಾಜಕಾರಣ ನಿಂತ ನೀರಲ್ಲ, ಮತ್ತೆ ಸಚಿವರಾಗಬೇಕೆಂದು ರಮೇಶ್ ಜಾರಕಿಹೊಳಿ ಪ್ರಯತ್ನ ತಪ್ಪಲ್ಲ': ಕಾಂಗ್ರೆಸ್ ನಾಯಕ ಕೆ.ಎನ್. ರಾಜಣ್ಣ
ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಭೇಟಿಗೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಕಾಂಗ್ರೆಸ್ ನಾಯಕ ಕೆ ಎನ್ ರಾಜಣ್ಣ ಹೇಳಿದ್ದಾರೆ.

ಬೆಂಗಳೂರು: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಭೇಟಿಗೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಕಾಂಗ್ರೆಸ್ ನಾಯಕ ಕೆ ಎನ್ ರಾಜಣ್ಣ ಹೇಳಿದ್ದಾರೆ.
ಬೆಂಗಳೂರಿನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ ಸರ್ಕಾರ ಬೀಳಿಸುತ್ತಾರೆ, ರಾಜಕೀಯವಾಗಿ ಮಹತ್ತರ ಬೆಳವಣಿಗೆಗಳಾಗುತ್ತವೆ ಎಂಬುದೆಲ್ಲ ಊಹಾಪೋಹಗಳಷ್ಟೆ. ಆದರೆ ರಾಜಕೀಯದಲ್ಲಿ ಮನುಷ್ಯನಿಗೆ ಆಸೆ ಎಂಬುದಿರುತ್ತದೆ. ರಮೇಶ್ ಜಾರಕಿಹೊಳಿಯವರ ಸಚಿವ ಸ್ಥಾನ ಹೋಯಿತು, ಮತ್ತೆ ಸಚಿವರಾಗಬೇಕೆಂದು ಪ್ರಯತ್ನಿಸುವುದರಲ್ಲಿ ಯಾವುದೇ ತಪ್ಪಿಲ್ಲ ಎಂದರು.
ರಮೇಶ್ ಜಾರಕಿಹೊಳಿಯವರಿಗೆ ರಾಜಕೀಯವಾಗಿ ಏನೂ ಸಂಕಷ್ಟವಿಲ್ಲ. ರಾಜಕೀಯ ಅನ್ನೋದು ನಿಂತ ನೀರಲ್ಲ, ರಾಜಕೀಯ ವ್ಯಕ್ತಿ ಯಾವಾಗಲೂ ಸಕ್ರಿಯವಾಗಿದ್ದರಷ್ಟೆ ಸಂತೋಷ ಮತ್ತು ಚಲಾವಣೆಯಲ್ಲಿರುತ್ತಾರೆ. ರಾಜೀನಾಮೆ ನೀಡುತ್ತೇನೆ ಎಂದು ರಮೇಶ್ ಜಾರಕಿಹೊಳಿಯವರು ಹೇಳಿದಾಗ ಆ ನಿರ್ಧಾರ ಸಾಧುವಲ್ಲ, ಅದೆಲ್ಲ ಬೇಡ ಎಂದು ನಾವು ಹೇಳಿದ್ದೇವೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


