ಬೆಳಗಾವಿ ಲೋಕಸಭೆ ಉಪಚುನಾವಣೆ: ರೋಚಕ ಹಣಾಹಣಿಯಲ್ಲಿ ಬಿಜೆಪಿಯ ಮಂಗಳಾ ಅಂಗಡಿಗೆ ಗೆಲುವು
ಬೆಳಗಾವಿ ಲೋಕಸಭೆ ಉಪಚುನಾವಣೆ ಹಿನ್ನಲೆ ಇಂದು ನಡೆದ ಮತ ಎಣಿಕೆಯ ರೋಚಕ ಹಣಾಹಣಿಯಲ್ಲಿ ಬಿಜೆಪಿಯ ಮಂಗಳಾ ಅಂಗಡಿ ಕೈ ಅಭ್ಯರ್ಥಿ ಸತೀಶ್ ಜಾರಕಿಹೊಳಿ ವಿರುದ್ಧ ಗೆಲುವು ದಾಖಲಿಸಿದ್ದಾರೆ.

ಬೆಳಗಾವಿ: ಬೆಳಗಾವಿ ಲೋಕಸಭೆ ಉಪಚುನಾವಣೆ ಹಿನ್ನಲೆ ಇಂದು ನಡೆದ ಮತ ಎಣಿಕೆಯ ರೋಚಕ ಹಣಾಹಣಿಯಲ್ಲಿ ಬಿಜೆಪಿಯ ಮಂಗಳಾ ಅಂಗಡಿ ಕೈ ಅಭ್ಯರ್ಥಿ ಸತೀಶ್ ಜಾರಕಿಹೊಳಿ ವಿರುದ್ಧ ಗೆಲುವು ದಾಖಲಿಸಿದ್ದಾರೆ.
ಬೆಳಗಾವಿ ಸಂಸದರಾಗಿದ್ದ ಸುರೇಶ್ ಅಂಗಡಿ ನಿಧನ ಹಿನ್ನೆಲೆಯಲ್ಲಿ ಲೋಕಸಭೆಗೆ ಉಪಚುನಾವಣೆ ನಡೆದಿತ್ತು. ಬಿಜೆಪಿ ತನ್ನ ಅಭ್ಯರ್ಥಿಯಾಗಿ ಸುರೇಶ್ ಅಂಗಡಿ ಪತ್ನಿ ಮಂಗಳಾ ಅಂಗಡಿ ಅವರನ್ನು ಕಣಕ್ಕಿಳಿಸಿತ್ತು. ಇನ್ನು ಕಾಂಗ್ರೆಸ್ ಸಹ ಶಾಸಕ ಸತೀಶ್ ಜಾರಕಿಹೊಳಿ ಅವರನ್ನು ಕಣಕ್ಕಿಳಿಸಿತ್ತು.
ಇಬ್ಬರ ನಡುವೆ ನಡೆದ ತೀವ್ರ ಹಣಾಹಣಿಯಲ್ಲಿ ಸತೀಶ್ ಜಾರಕಿಹೊಳಿ ಅವರು ಕೊನೆಯ 7 ಸುತ್ತುಗಳ ಮತ ಎಣಿಕೆಯೊರೆಗೂ ಮುನ್ನಡೆ ಸಾಧಿಸಿದ್ದರು. ಆದರೆ ನಂತರ ಮಂಗಳಾ ಅಂಗಡಿ ಅವರು ಮುನ್ನಡೆ ಸಾಧಿಸುವ ಮೂಲಕ ಗೆಲುವ ದಾಖಲಿಸಿದ್ದಾರೆ.
ಮಂಗಳಾ ಅಂಗಡಿಯವರು ಬರೋಬ್ಬರಿ 4,35,202 ಮತಗಳನ್ನು ಪಡೆದಿದ್ದರೆ ಸತೀಶ್ ಜಾರಕಿಹೊಳಿ ಅವರು 4,32,299 ಮತಗಳನ್ನು ಪಡೆದಿದ್ದು 5240 ಮತಗಳ ಅಂತರದಿಂದ ಮಂಗಳಾ ಅಂಗಡಿ ಅವರು ಗೆಲುವು ಸಾಧಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


