ಬೆಳಗಾವಿ ಉಪ ಚುನಾವಣೆಯಲ್ಲಿ ಕಡಿಮೆ ಅಂತರದ ಗೆಲುವು: ವರದಿ ಕೇಳಿದ ದೆಹಲಿಯ ಬಿಜೆಪಿ ನಾಯಕರು!
ಇತ್ತೀಚಿನ ಉಪ ಚುನಾವಣೆಯಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಕಡಿಮೆ ಅಂತರದಿಂದ ಗೆಲುವು ಸಾಧಿಸಿರುವುದಕ್ಕೆ ಬಿಜೆಪಿ ವರಿಷ್ಠರು ಬೇಸರ ವ್ಯಕ್ತಪಡಿಸಿದ್ದಾರೆನ್ನಲಾಗಿದೆ.

ಬೆಂಗಳೂರು: ಇತ್ತೀಚಿನ ಉಪ ಚುನಾವಣೆಯಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಕಡಿಮೆ ಅಂತರದಿಂದ ಗೆಲುವು ಸಾಧಿಸಿರುವುದಕ್ಕೆ ಬಿಜೆಪಿ ವರಿಷ್ಠರು ಬೇಸರ ವ್ಯಕ್ತಪಡಿಸಿದ್ದಾರೆನ್ನಲಾಗಿದೆ.
ರಾಜ್ಯ ಬಿಜೆಪಿ.ಉಸ್ತುವಾರಿ ಅರುಣ್ ಸಿಂಗ್ ಈ ಸಂಬಂಧ ಕಾರಣ ರಾಜ್ಯ ಬಿಜೆಪಿ ನಾಯಕರಿಗೆ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆನ್ನಲಾಗಿದೆ.
ಈ ಸಂಬಂಧ ಶನಿವಾರ ಸಂಜೆ ವರ್ಚ್ಯುವಲ್ ಮೂಲಕ ನಡೆದ ಕೋರ್ ಕಮಿಟಿ ಸಭೆಯಲ್ಲಿ ಉಪ ಚುನಾವಣೆಯ ಫಲಿತಾಂಶದ ಬಗ್ಗೆಯೇ ಸುದೀರ್ಘ ಚರ್ಚೆ ನಡೆಸಲಾಗಿದೆ.ಬೆಳಗಾವಿಯಲ್ಲಿ ಬಿಜೆಪಿ ಶಾಸಕರಿರುವ ಕ್ಷೇತ್ರಗಳಾದ ಸವದತ್ತಿ, ರಾಮದುರ್ಗದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಬಿಜೆಪಿ ಮತ ಬಾರದಿರುವುದು ಹಾಗೂ ಬೆಳಗಾವಿ ಉತ್ತರ, ದಕ್ಷಿಣ ಮತ್ತು ಗ್ರಾಮೀಣ ಕ್ಷೇತ್ರದಲ್ಲಿ ಎಂ ಇ ಎಸ್ ಅಭ್ಯರ್ಥಿ ಹೆಚ್ಚು ಮತ ಪಡೆದಿರುವುದೇ ಕಾರಣ ಎಂದು ರಾಜ್ಯ ನಾಯಕರು ಸಮಜಾಯಿಸಿ ನೀಡಿದ್ದಾರೆ.
ಲೋಕಸಭಾ ಕ್ಷೇತ್ರದ ವಿಧಾನಸಭಾವಾರು ವರದಿ ಸಲ್ಲಿಸುವಂತೆ ಅರುಣ್ ಸಿಂಗ್ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


