ರಾಜಕೀಯ

'ಜನರ ಸಂಕಟಕ್ಕೆ ದನಿಯಾಗಲು ಸರ್ವಜ್ಞನಾಗಬೇಕಿಲ್ಲ: ನೇಣು ಹಾಕಿಕೊಳ್ಳುವುದು ಮಹಾಪಾಪ ಮಾತ್ರವಲ್ಲ, ಕಾನೂನಿಗೆ ವಿರುದ್ಧ'

ಲಸಿಕೆ ಕೊರತೆ ಸಂಬಂಧ ಹೇಳಿಕೆ ನೀಡಿದ್ದ ಬಿಜೆಪಿ ನಾಯಕರುಗಳಾದ ಸದಾನಂದಗೌಡ ಮತ್ತು ಸಿಟಿ ರವಿ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ.

'ಜನರ ಸಂಕಟಕ್ಕೆ ದನಿಯಾಗಲು ಸರ್ವಜ್ಞನಾಗಬೇಕಿಲ್ಲ: ನೇಣು ಹಾಕಿಕೊಳ್ಳುವುದು ಮಹಾಪಾಪ ಮಾತ್ರವಲ್ಲ, ಕಾನೂನಿಗೆ ವಿರುದ್ಧ'
ಸಿ.ಟಿ ರವಿ ಮತ್ತು ಸದಾನಂದಗೌಡ
Published On :

ಬೆಂಗಳೂರು: ಲಸಿಕೆ ಕೊರತೆ ಸಂಬಂಧ ಹೇಳಿಕೆ ನೀಡಿದ್ದ ಬಿಜೆಪಿ ನಾಯಕರುಗಳಾದ ಸದಾನಂದಗೌಡ ಮತ್ತು ಸಿಟಿ ರವಿ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು,  ಸಿ.ಟಿ ರವಿ ಅವರೇ ಜನರ ಸಂಕಟಕ್ಕೆ ದನಿಯಾಗಲು ಸರ್ವಜ್ಞನಾಗಬೇಕಿಲ್ಲ, ಮಾನವೀಯತೆಯುಳ್ಳ ಮನುಷ್ಯನಾಗಿದ್ದರೆ ಸಾಕು. ಅಧಿಕಾರದ ದುರಹಂಕಾರ ಬಿಟ್ಟು ಮೊದಲು ಮನುಷ್ಯರಾಗಿ ಎಂದು ಟಾಂಗ್ ನೀಡಿದ್ದಾರೆ.

ನ್ಯಾಯಾಧೀಶರ ನಿಂದನೆ ನ್ಯಾಯಾಲಯದ ನಿಂದನೆ ಕೂಡಾ ಆಗುತ್ತದೆ ಎಂದು ಗೊತ್ತಿಲ್ಲದ ನಿಮ್ಮಂತಹವರನ್ನು ಸರ್ವಜ್ಞ ಎನ್ನುವುದಿಲ್ಲ, ಮೂರ್ಖ ಎನ್ನುತ್ತಾರೆ ಎಂದು ಲೇವಡಿ ಮಾಡಿದ್ದಾರೆ.

ಇನ್ನೂ ಕೇಂದ್ರ ಸಚಿವ ಸದಾನಂದಗೌಡ ಅವರ ವಿರುದ್ಧ ಹರಿಹಾಯ್ದಿರುವ ಅವರು, ಸದಾನಂದ ಗೌಡ ಅವರೇ, ನೇಣು ಹಾಕಿಕೊಳ್ಳುವುದು ಮಹಾಪಾಪ ಮಾತ್ರವಲ್ಲ ಕಾನೂನಿಗೆ ವಿರುದ್ಧವಾದುದು ಕೂಡಾ, ಅದನ್ನೆಲ್ಲ ಮಾಡಲು ಹೋಗಬೇಡಿ. ಆಡಳಿತ ನಡೆಸುವುದು ನಿಮಗಾಗದ ಕೆಲಸ, ಮರ್ಯಾದೆಯಿಂದ ರಾಜೀನಾಮೆ ಕೊಟ್ಟು ಹೊರಟುಬಿಡಿ,‌ ದೇಶಕ್ಕಾಗಿ ಅಷ್ಟು ಮಾಡಿ‌ ಪುಣ್ಯ ಕಟ್ಕೊಳ್ಳಿ ಎಂದು ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.