ಸರ್ಕಾರ ಲಾಕ್‌ಡೌನ್ ವಿಸ್ತರಿಸುವುದೇ ಆದರೆ 'ಜನಹಿತದ ಲಾಕ್‌ಡೌನ್' ಮಾಡಲಿ: ಹೆಚ್ ಡಿ ಕುಮಾರಸ್ವಾಮಿ
ಸರ್ಕಾರ ಲಾಕ್‌ಡೌನ್ ವಿಸ್ತರಿಸುವ ಚಿಂತನೆಯಲ್ಲಿದೆ ಎಂದು ವರದಿಯಾಗುತ್ತಿದ್ದು, ಒಂದುವೇಳೆ ಸರ್ಕಾರ ಲಾಕ್‌ಡೌನ್ ವಿಸ್ತರಿಸುವುದೇ ಆದರೆ, ಅದು 'ಜನಹಿತದ ಲಾಕ್‌ಡೌನ್' ಆಗಿರಲಿ. ಆರ್ಥಿಕ, ಆಹಾರ ಪ್ಯಾಕೇಜ್, ಪರಿಹಾರ ಕ್ರಮಗಳು ಉದ್ದೇಶಿತ ವಿಸ್ತರಿತ ಲಾಕ್‌ಡೌನ್‌ನಲ್ಲಿರಲಿ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಬೆಂಗಳೂರು: ಸರ್ಕಾರ ಲಾಕ್‌ಡೌನ್ ವಿಸ್ತರಿಸುವ ಚಿಂತನೆಯಲ್ಲಿದೆ ಎಂದು ವರದಿಯಾಗುತ್ತಿದ್ದು, ಒಂದುವೇಳೆ ಸರ್ಕಾರ ಲಾಕ್‌ಡೌನ್ ವಿಸ್ತರಿಸುವುದೇ ಆದರೆ, ಅದು 'ಜನಹಿತದ ಲಾಕ್‌ಡೌನ್' ಆಗಿರಲಿ. ಆರ್ಥಿಕ, ಆಹಾರ ಪ್ಯಾಕೇಜ್, ಪರಿಹಾರ ಕ್ರಮಗಳು ಉದ್ದೇಶಿತ ವಿಸ್ತರಿತ ಲಾಕ್‌ಡೌನ್‌ನಲ್ಲಿರಲಿ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಸೋಮವಾರ ಈ ಸಂಬಂಧ ಟ್ವೀಟ್ ಮಾಡಿರುವ ಹೆಚ್‌ಡಿಕೆ, ಸರ್ವಪಕ್ಷಗಳ ಸಭೆಯಲ್ಲಿ ಸರ್ಕಾರಕ್ಕೆ 'ಜನಹಿತದ ಲಾಕ್‌ಡೌನ್' ಮಾಡಬೇಕೆಂದು ಸೂಚಿಸಿದ್ದೆವು. ನೆರೆಯ ರಾಜ್ಯಗಳಲ್ಲಿ ಲಾಕ್‌ಡೌನ್ ಹೇಗಿದೆ, ಜನರಿಗೆ ಹೇಗೆ ನೆರವು ಸಿಗುತ್ತಿದೆ ಎಂಬುದನ್ನು ರಾಜ್ಯ ಸರ್ಕಾರ ಒಂದು ಬಾರಿ ಅವಲೋಕಿಸಬೇಕು. ಜನರನ್ನು ಮನೆಗಳಿಂದ ಹೊರ ಬಾರದಂತೆ ತಡೆಯುವುದಷ್ಟೇ ಈ ಲಾಕ್‌ಡೌನ್‌ನ ಉದ್ದೇಶವಾಗಬಾರದು. ಜನರ ಸಹಭಾಗಿತ್ವದೊಂದಿಗೆ ವೈರಾಣುವನ್ನು ನಿಗ್ರಹಿಸುವುದು ಉದ್ದೇಶವಾಗಬೇಕು. ಅದಕ್ಕಾಗಿ ಜನರಿಗೆ ಪರಿಹಾರ ಅಗತ್ಯವಾಗಿದೆ ಎಂದಿದ್ದಾರೆ.
ಜನರಿಗೆ ಪರಿಹಾರ ನೀಡಬೇಕಾಗುತ್ತದೆ ಎಂಬ ಕಾರಣಕ್ಕೆ ಕೇಂದ್ರ ಸರ್ಕಾರ ಲಾಕ್‌ಡೌನ್‌ನ ಉಸಾಬರಿಯನ್ನು ರಾಜ್ಯ ಸರ್ಕಾರಗಳಿಗೆ ವಹಿಸಿ ಕೈತೊಳೆದುಕೊಂಡಿದೆ. ಕೇಂದ್ರ ಸರ್ಕಾರ ಜನರ ಕೈಬಿಟ್ಟಂತೆ ರಾಜ್ಯ ಸರ್ಕಾರ ಜನರನ್ನು ನಿರ್ಲಕ್ಷಿಸಬಾರದು. ಅವರ ಅಗತ್ಯಗಳನ್ನು ಪೂರೈಸುವುದರತ್ತ ರಾಜ್ಯ ಗಮನಹರಿಸಬೇಕು. ಲಾಕ್‌ಡೌನ್‌ನಲ್ಲಿ ಪರಿಹಾರ ಕ್ರಮಗಳು ಇರಬೇಕು.
ಲಾಕ್‌ಡೌನ್ ಜನರ ಜೀವ ಉಳಿಸುವ ಕ್ರಮ ಹೌದು. ಆದರೆ, ಈ ಲಾಕ್‌ಡೌನ್ ಜನರ ಬದುಕನ್ನು ಹೈರಾಣಾಗಿಸುತ್ತಿದೆ ಎಂಬುದೂ ನಮಗೆಲ್ಲರಿಗೂ ಅರಿವಿಗೆ ಬಂದಿರುವ ವಿಚಾರ. ಹೀಗಾಗಿಯೇ ನಾವು ಸೂಚಿಸುತ್ತಿರುವ ಜನಹಿತದ ಲಾಕ್‌ಡೌನ್ ಮಾಡುವುದರತ್ತ ಸರ್ಕಾರ ಆದ್ಯತೆ ನೀಡಬೇಕು. ಜನರ ಜೀವ ಉಳಿಸುತ್ತಲೇ, ಜೀವನಕ್ಕೂ ನೆರವಾಗುವುದು ಜನಪರ ಸರ್ಕಾರದ ಕರ್ತವ್ಯವಾಗಿದೆ ಎಂದು ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


