ರಾಜಕೀಯ

ಅಂಗಳ ಅಳೆಯಲು ಅಸಾಧ್ಯರಾದವರಿಗೆ ಆಕಾಶ ಅಳೆಯುವ ತೆವಲು: ಶ್ವೇತಪತ್ರ ಕೇಳುವುದು ಬೂಟಾಟಿಕೆಯ ಪರಮಾವಧಿ!

ಕೊರೋನಾ ನಿರ್ವಹಣೆಯಲ್ಲಿ ಬಿಜೆಪಿ ಸರ್ಕಾರದ ಅಸಮರ್ಥತೆಯ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿ ಕರ್ನಾಟಕ ಸಿದ್ದರಾಮಯ್ಯ ವಿರುದ್ಧ ಟ್ವಿಟ್ಟರ್ ನಲ್ಲಿ ಹರಿಹಾಯ್ದಿದೆ.

ಅಂಗಳ ಅಳೆಯಲು ಅಸಾಧ್ಯರಾದವರಿಗೆ ಆಕಾಶ ಅಳೆಯುವ ತೆವಲು: ಶ್ವೇತಪತ್ರ ಕೇಳುವುದು ಬೂಟಾಟಿಕೆಯ ಪರಮಾವಧಿ!
ಸಿದ್ದರಾಮಯ್ಯ
Published On :

ಬೆಂಗಳೂರು: ಕೊರೋನಾ ನಿರ್ವಹಣೆಯಲ್ಲಿ ಬಿಜೆಪಿ ಸರ್ಕಾರದ ಅಸಮರ್ಥತೆಯ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿ ಕರ್ನಾಟಕ ಸಿದ್ದರಾಮಯ್ಯ ವಿರುದ್ಧ ಟ್ವಿಟ್ಟರ್ ನಲ್ಲಿ ಹರಿಹಾಯ್ದಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ, ಬಾದಾಮಿ ಶಾಸಕ ಸಿದ್ದರಾಮಯ್ಯ ಕನಸಿನಲ್ಲಿ ಹೊಟ್ಟೆ ತುಂಬ ತಿಂದು ಎಚ್ಚರವಾದ ಮೇಲೆ ತೇಗುವ ವಿಚಿತ್ರ ಹವ್ಯಾಸ ಬೆಳೆಸಿಕೊಂಡಿದ್ದಾರೆ ಎಂದು ವ್ಯಂಗ್ಯವಾಡಿದೆ.

ಕಾಂಗ್ರೆಸ್ ಪಕ್ಷದ ಲಸಿಕೆ ನಿಧಿ ಸಂಗ್ರಹ ನಾಟಕವೂ ಹಾಗೆಯೇ ಆಗಿದೆ. ಇಲ್ಲದೇ ಇರುವ ದುಡ್ಡನ್ನು ಕೊಡುತ್ತೇವೆ ಎಂದು ಬಡಾಯಿ ಕೊಚ್ಚಿ ಈಗ ಸರ್ಕಾರದ ಬಳಿ ಅನುದಾನ ಬೇಡುತ್ತಿರುವುದೇಕೆ? ಪ್ರಶ್ನಿಸಿದ್ದಾರೆ.

ಕಣ್ಣೀರು ಹಾಕಿದರೆ ಆಕ್ಸಿಜನ್, ಲಸಿಕೆ ಸಿಗುವುದಿಲ್ಲ ಎಂದು ದೇಶದ ಪ್ರಧಾನಿ ಬಗ್ಗೆ ವ್ಯಂಗ್ಯವಾಡುವ ಸಿದ್ದರಾಮಯ್ಯ ಅವರಿಗೆ ತಾವು ಗಾಜಿನ‌ಮನೆಯಲ್ಲಿ ಕುಳಿತಿರುವುದು ಮರೆತು ಹೋಗಿದೆ, ಕೋವಿಡ್ ಸೋಂಕಿಗೆ ಹೆದರಿ ಮನೆಬಾಗಿಲು ಮುಚ್ಚಿಕೊಂಡು ಟ್ವೀಟರ್‌ನಲ್ಲಿ ಪ್ರವಚನ ನೀಡುವವರಿಗೆ ಭಾವನೆಗಳ ಬೆಲೆ ಗೊತ್ತಿರಲು ಸಾಧ್ಯವಿಲ್ಲ.

ಅಂಗಳ ಅಳೆಯಲು ಅಸಾಧ್ಯರಾದವರಿಗೆ ಆಕಾಶ ಅಳೆಯುವ ತೆವಲು. ಕಾಂಗ್ರೆಸ್ ಸಲ್ಲಿಸಿದ ಪಿಐಎಲ್ ಅನ್ನು ಹೈಕೋರ್ಟ್ ವಜಾಗೊಳಿಸಿದ ಮೇಲೂ ಸಿದ್ದರಾಮಯ್ಯ ಅವರಿಗೆ ಅವರಿಗೆ ಬುದ್ಧಿ ಬಂದಿಲ್ಲ ಎಂದು ಬಿಜೆಪಿ ಲೇವಡಿ ಮಾಡಿದೆ.

ಲಸಿಕೆ ಬಗ್ಗೆ ಶ್ವೇತಪತ್ರ ಹೊರಡಿಸಿ ಎಂಬುದು ಸಿದ್ದರಾಮಯ್ಯ ಅವರ ಬೂಟಾಟಿಕೆಯ ಪರಮಾವಧಿಯಲ್ಲದೆ ಮತ್ತೇನಲ್ಲ. ಮಾರಣಾಂತಿಕ ಕಾಯಿಲೆಗೆ ಔಷಧ ಇಲ್ಲ ಎಂದರೆ ಅದು ಕೊಲೆಗೆ ಸಮಾನ ಎಂದು ಸೆಕ್ಷನ್ ಸ್ಪೆಷಲಿಸ್ಟ್ ಸಿದ್ದರಾಮಯ್ಯ ವ್ಯಾಖ್ಯಾನಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.