ರಾಜಕೀಯ

'ನಾವು ಮಾಡಿದ ಕರ್ಮಗಳು ನಮ್ಮನ್ನು ಹಿಂಬಾಲಿಸಿಕೊಂಡು ಬಂದು ಪಾಠ ಕಲಿಸುತ್ತವೆ ಎಂಬುದಕ್ಕೆ ಜಿಂದಾಲ್‌ ಸಾಕ್ಷಿ'

ಜಿಂದಾಲ್ ಕಂಪನಿಗೆ ಬಿಜೆಪಿ ಸರ್ಕಾರ ಭೂಮಿ ನೀಡಿರುವುದರ ಕುರಿತು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

'ನಾವು ಮಾಡಿದ ಕರ್ಮಗಳು ನಮ್ಮನ್ನು ಹಿಂಬಾಲಿಸಿಕೊಂಡು ಬಂದು ಪಾಠ ಕಲಿಸುತ್ತವೆ ಎಂಬುದಕ್ಕೆ ಜಿಂದಾಲ್‌ ಸಾಕ್ಷಿ'
ಎಚ್.ಡಿ. ಕುಮಾರಸ್ವಾಮಿ
Published On :

ಬೆಂಗಳೂರು: ಜಿಂದಾಲ್ ಕಂಪನಿಗೆ ಬಿಜೆಪಿ ಸರ್ಕಾರ ಭೂಮಿ ನೀಡಿರುವುದರ ಕುರಿತು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು ರಾಜಕೀಯ ಪಕ್ಷವೊಂದು ದ್ವಿಮುಖ ಧೋರಣೆಯ ರಾಜಕಾರಣ ಮಾಡಬಾರದು ಎಂಬುದಕ್ಕೆ ಇದೊಂದು ನಿದರ್ಶನ ಎಂದು ಹರಿಹಾಯ್ದಿದ್ದಾರೆ.

ಜಿಂದಾಲ್‌ ಕಂಪನಿಗೆ 3667 ಎಕರೆ ಭೂಮಿ ನೀಡಲು ನಿರ್ಧರಿಸಿದ್ದ ಬಿಜೆಪಿ ಸರ್ಕಾರ ಈಗ ತನ್ನೊಳಗಿನ ಬಂಡಾಯದಿಂದ, ಅನಿವಾರ್ಯವಾಗಿ ಹಿಂದೆ ಸರಿದಿದೆ. ರಾಜಕೀಯ ಪಕ್ಷವೊಂದು ದ್ವಿಮುಖ ಧೋರಣೆಯ ರಾಜಕಾರಣ ಮಾಡಬಾರದು ಎಂಬುದಕ್ಕೆ ಇದೊಂದು ನಿದರ್ಶನ. ಹಿಂದೆ ಮಾಡಿದ್ದರ ಪಾಪದ ಫಲವನ್ನು ಬಿಜೆಪಿ ಇಂದು ಅನುಭವಿಸುವಂತಾಗಿದೆ. ಆದರೆ, ನಷ್ಟ ಜಾಸ್ತಿಯೇ ಆಗಿದೆ ಎಂದು ಹೇಳಿದ್ದಾರೆ.

ಜಿಂದಾಲ್‌ಗೆ ಲೀಸ್‌ ಕಂ ಸೇಲ್‌ ಆಧಾರದಲ್ಲಿ ಭೂಮಿ ನೀಡಲಾಗಿತ್ತು. ಲೀಸ್‌ ಅವಧಿ ಮುಗಿದಿದ್ದರಿಂದ ಕ್ರಯಪತ್ರ ಮಾಡಿಕೊಡಬೇಕಾಗಿತ್ತು. ಅಷ್ಟನ್ನು ಮಾತ್ರ ಮಾಡಲು ಮುಂದಾಗಿದ್ದ ನನ್ನ ಸರ್ಕಾರದ ವಿರುದ್ಧ ಯಡಿಯೂರಪ್ಪನವರು ಸಲ್ಲದ ಆರೋಪ ಮಾಡಿದ್ದರು. ಆದರೆ ಈಗ? ಅವರು ಅಂದು ನನ್ನ ಮೇಲೆ ಮಾಡಿದ ಆರೋಪಗಳನ್ನೆಲ್ಲ ತಮ್ಮ ಮೇಲೆ
ಹೊತ್ತುಕೊಳ್ಳುವಂಥಾಗಿದೆ ಎಂದು ಕಿಡಿಕಾರಿದ್ದಾರೆ.

ವಿರೋಧಕ್ಕಾಗಿ ವಿರೋಧ ಮಾಡುವುದು, ವಿರೋಧ ಪಕ್ಷದಲ್ಲಿದ್ದಾಗ ವಿರೋಧಿಸಿದ್ದನ್ನೇ ಆಡಳಿತಕ್ಕೆ ಬಂದಾಗ ಕದ್ದು ಮುಚ್ಚಿ ಮಾಡುವುದು ಬಿಜೆಪಿ 'ಸಂಸ್ಕೃತಿ'. ಬಿಜೆಪಿ ಪಾಲಿಸಿಕೊಂಡು ಬಂದ ಈ ಸಂಸ್ಕೃತಿ ಇಂದು ಅವರಿಗೆ ತಿರುಗುಬಾಣವಾಗಿದೆ. ನಾವು ಮಾಡಿದ ಕರ್ಮಗಳು ನಮ್ಮನ್ನು ಹಿಂಬಾಲಿಸಿಕೊಂಡು ಬಂದು ಪಾಠ ಕಲಿಸುತ್ತವೆ ಎಂಬುದಕ್ಕೆ ಜಿಂದಾಲ್‌ ಸಾಕ್ಷಿ
ಎಂದು ಸರ್ಕಾರದ ನಡೆಯನ್ನು ಖಂಡಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.