ಯೋಗೀಶ್ವರ್ ವಿರುದ್ಧವಾದರೂ ಕ್ರಮ ಕೈಗೊಂಡು ಬೆನ್ನುಮೂಳೆ ಗಟ್ಟಿ ಇದೆ ಎಂದು ನಿರೂಪಿಸುವಿರಾ ನಳಿನ್ ಕುಮಾರ್ ಕಟೀಲ್?
ಕೊರೋನಾ ವೈರಸ್ ಸಾಂಕ್ರಾಮಿಕ ರೋಗ ಇಲ್ಲದೆ ಇರುತ್ತಿದ್ದರೆ ಇಷ್ಟು ಹೊತ್ತಿಗಾಗಲೇ ಬಿಜೆಪಿ ಶಾಸಕರು ರೆಸಾರ್ಟ್ ಸೇರುತ್ತಿದ್ದರು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಲೇವಡಿ ಮಾಡಿದ್ದಾರೆ.

ಬೆಂಗಳೂರು: ಕೊರೋನಾ ವೈರಸ್ ಸಾಂಕ್ರಾಮಿಕ ರೋಗ ಇಲ್ಲದೆ ಇರುತ್ತಿದ್ದರೆ ಇಷ್ಟು ಹೊತ್ತಿಗಾಗಲೇ ಬಿಜೆಪಿ ಶಾಸಕರು ರೆಸಾರ್ಟ್ ಸೇರುತ್ತಿದ್ದರು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಲೇವಡಿ ಮಾಡಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ, ಕೊರೋನಾ ಇಲ್ಲದೆ ಇದ್ದರೆ ಇಷ್ಟು ಹೊತ್ತಿಗಾಗಲೇ ಬಿಜೆಪಿ ಶಾಸಕರು ರೆಸಾರ್ಟ್ ಸೇರಿರುತ್ತಿದ್ದರು, ಇಷ್ಟು ದಿನ ಕೊರೋನಾ ನಿರ್ವಹಣೆಗೆ ಹೊರಬರದೆ ಅಡಗಿದ್ದ ಬಿಜೆಪಿ ಸಚಿವ ಶಾಸಕರೆಲ್ಲ ಈಗ ಕುರ್ಚಿ ಕದನಕ್ಕಾಗಿ ದಿಡೀರ್ ಪ್ರತ್ಯಕ್ಷರಾಗಿದ್ದಾರೆ. ತನಗೆ ಸಿಕ್ಕ ಅಧಿಕಾರವಧಿಯಲ್ಲೆಲ್ಲ ಕುರ್ಚಿ ಕಾಳಗದಲ್ಲಿ ಮುಳುಗುವ ಬಿಜೆಪಿಯಿಂದ ಜನರ ರಕ್ಷಣೆ ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಆರೋಪಿಸಿದೆ.
ಬಿಜೆಪಿ ಸರ್ಕಾರದ ಆದ್ಯತೆ ಕರೋನಾ ಕಂಟ್ರೋಲ್ ಅಲ್ಲ ಡ್ಯಾಮೇಜ್ ಕಂಟ್ರೋಲ್! ಜನರ ಬಗ್ಗೆ ಎಳ್ಳಷ್ಟೂ ಕಾಳಜಿ ಇಲ್ಲದ ಬಿಜೆಪಿಗೆ ತನ್ನ ಒಡೆದ ಮನೆಯ ಬಗ್ಗೆ ಚಿಂತೆ. ಬಸನಗೌಡ ಪಾಟೀಲ್ ಯತ್ನಾಳ್‌ರನ್ನಂತೂ ಏನೂ ಮಾಡಲಾಗಲಿಲ್ಲ, ಯೋಗೀಶ್ವರ್ ಅವರ ವಿರುದ್ಧವಾದರೂ ಕ್ರಮ ಕೈಗೊಂಡು ತಮ್ಮ ಬೆನ್ನುಮೂಳೆ ಗಟ್ಟಿ ಇದೆ ಎಂದು ನಿರೂಪಿಸುವಿರಾ ನಳಿನ್ ಕುಮಾರ್ ಕಟೀಲ್ ಅವರೇ ಎಂದು ಪ್ರಶ್ನಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


