ಸಚಿವ ಯೋಗೇಶ್ವರ್‌ಗೆ ಇಷ್ಟವಿಲ್ಲದಿದ್ದರೆ ಪಕ್ಷದಿಂದ ಹೊರ ನಡೆಯಲಿ: ಕೆ.ಎಸ್. ಈಶ್ವರಪ್ಪ
ಮುಖ್ಯಮಂತ್ರಿ ಮೇಲೂ ನಂಬಿಕೆ ಇಲ್ಲ. ಹೈಕಮಾಂಡ್ ಮೇಲೂ ನಂಬಿಕೆ ಇಲ್ಲ ಅನ್ನುವುದಾದರೆ ಸಿ. ಪಿ. ಯೋಗೇಶ್ವರ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಸಚಿವ ಕೆ. ಎಸ್. ಈಶ್ವರಪ್ಪ ಹೇಳಿದ್ದಾರೆ.

ಶಿವಮೊಗ್ಗ: ಮುಖ್ಯಮಂತ್ರಿ ಮೇಲೂ ನಂಬಿಕೆ ಇಲ್ಲ. ಹೈಕಮಾಂಡ್ ಮೇಲೂ ನಂಬಿಕೆ ಇಲ್ಲ ಅನ್ನುವುದಾದರೆ ಸಿ.ಪಿ. ಯೋಗೇಶ್ವರ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಅವರು ಯೋಗೇಶ್ವರ್ ಅವರಿಗೆ ಏನೇ ಅಸಮಾಧಾನವಿದ್ದರೂ ಕೇಂದ್ರ ನಾಯಕರ ಗಮನಕ್ಕೆ ತರಬೇಕು. ಅದನ್ನು ಯೋಗೇಶ್ವರ್ ಮಾಡಿದ್ದಾರೆ. ಆದರೆ, ಹೊರಗಡೆ ಅವರು ಹೇಳಿಕೆ ನೀಡಿದ್ದು ಸರಿಯಲ್ಲ. ಅಸಮಾಧಾನವಿದ್ದಲ್ಲಿ ಸರ್ಕಾರದಿಂದ ಹೊರಹೋಗಬಹುದು. ಸಮಾಧಾನದಿಂದ ಮಾತನಾಡಿಕೊಂಡು ಸಮಸ್ಯೆ ಬಗೆಹರಿಸಿಕೊಳ್ಳಬೇಕು.
ರಾಜ್ಯ ಬಿಜೆಪಿಯ ಎಲ್ಲಾ ಶಾಸಕರು ಕಲ್ಲು ಬಂಡೆಗಳಂತೆ ಒಗ್ಗಟ್ಟಾಗಿ ಇದ್ದೇವೆ. ಕೇಂದ್ರ ನಾಯಕರು ಸಿಎಂ ಬದಲಾವಣೆ ಇಲ್ಲ ಎಂದು ತಿಳಿಸಿದ್ದಾರೆ. ಅವರ ತೀರ್ಮಾನಕ್ಕೆ ನಾವು ಬದ್ಧ" ಎಂದು ತಿಳಿಸಿದರು. ಯಾವುದೇ ಕಾರಣಕ್ಕೂ ಮಾಧ್ಯಮಗಳಿಗೆ ಆಹಾರವಾಗಬಾರದು. ಯೋಗೇಶ್ವರ್ ಹೇಳಿಕೆ ಸರಿಯಿದ್ದರೆ ಪಕ್ಷದ ವರಿಷ್ಠರು ಗಮನ ಹರಿಸುತ್ತಾರೆ ಎಂದರು.
ಬಿಜೆಪಿಯಲ್ಲಿ ಎಲ್ಲವೂ ಸರಿ ಇದೆ ಎಂದು ನಾನು ಹೇಳುತ್ತಿಲ್ಲ. ಅದನ್ನು ಒಪ್ಪುವುದೂ ಇಲ್ಲ. ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ನಾಯಕತ್ವ ಬದಲಾವಣೆ ಪ್ರಶ್ನೆ ಇಲ್ಲವೆಂದು ಪಕ್ಷದ ವರಿಷ್ಠರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


