ರಾಜಕೀಯ

ಬಿಜೆಪಿಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಗಳಿಗೆ ಕೊರತೆಯಿಲ್ಲ: ಸಿದ್ದುಗೆ ನಳಿನ್ ಕುಮಾರ್ ಕಟೀಲ್‍ ತಿರುಗೇಟು

ಮುಖ್ಯಮಂತ್ರಿ ಬಿ ಎಸ್‍ ಯಡಿಯೂರಪ್ಪ ಅವರನ್ನು ಬದಲಿಸಲು ಪರ್ಯಾಯ ನಾಯಕರಿಲ್ಲ ಎಂಬ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ ಕುಮಾರ್ ಕಟೀಲ್‍, ಆಡಳಿತಾರೂಢ ಬಿಜೆಪಿಯಲ್ಲಿ ನಾಯಕರಿಗೆ ಕೊರತೆ ಇಲ್ಲ ಎಂದು ಹೇಳಿದ್ದಾರೆ.

ಬಿಜೆಪಿಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಗಳಿಗೆ ಕೊರತೆಯಿಲ್ಲ: ಸಿದ್ದುಗೆ ನಳಿನ್ ಕುಮಾರ್ ಕಟೀಲ್‍ ತಿರುಗೇಟು
ಸಿದ್ದರಾಮಯ್ಯ-ನಳಿನ್ ಕುಮಾರ್
Published On :

ಮಂಗಳೂರು: ಮುಖ್ಯಮಂತ್ರಿ ಬಿ ಎಸ್‍ ಯಡಿಯೂರಪ್ಪ ಅವರನ್ನು ಬದಲಿಸಲು ಪರ್ಯಾಯ ನಾಯಕರಿಲ್ಲ ಎಂಬ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ ಕುಮಾರ್ ಕಟೀಲ್‍, ಆಡಳಿತಾರೂಢ ಬಿಜೆಪಿಯಲ್ಲಿ ನಾಯಕರಿಗೆ ಕೊರತೆ ಇಲ್ಲ ಎಂದು ಹೇಳಿದ್ದಾರೆ.

ಕೇಂದ್ರದಲ್ಲಿ ನರೇಂದ್ರಮೋದಿ ನೇತೃತ್ವದ ಸರ್ಕಾರ ಏಳು ವರ್ಷ ಪೂರೈಸುತ್ತಿರು ಸಂದರ್ಭದಲ್ಲಿ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರ ಅನುಭವ ಪರಿಗಣಿಸಿ ಅವರನ್ನೇ ಮುಖ್ಯಮಂತ್ರಿಯಾಗಿ ಮುಂದುವರಿಸಲು ಎಲ್ಲರೂ ನಿರ್ಧರಿಸಿದ್ದೇವೆ. ಆದರೆ, ಕಾಂಗ್ರೆಸ್‍ ನಲ್ಲಿ ನಿಜವಾಗಿಯೂ ನಾಯಕರ ಕೊರತೆ ಇದೆ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ ಕಟೀಲ್‍, ತಮ್ಮ ಹಿನ್ನೆಲೆ ಏನೆಂಬುದನ್ನು ಮೊದಲು ಸಿದ್ದರಾಮಯ್ಯ ನೋಡಬೇಕು. ಪಕ್ಷದಿಂದ ಪಕ್ಷಕ್ಕೆ ಜಿಗಿದು ಯಡಿಯೂರಪ್ಪ ಮುಖ್ಯಮಂತ್ರಿಯಾಗಿಲ್ಲ. ಜನರ ಒಳತಿಗಾಗಿ 45 ವರ್ಷಗಳಿಂದಲೂ ಯಡಿಯೂರಪ್ಪ ಹೋರಾಡಿದ್ದಾರೆ. ನಾಯಕತ್ವ ಗುಣಗಳಿಂದ ಅವರು ಖ್ಯಾತಿಯಾಗಿದ್ದಾರೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.